ನಾಯಿ ಬೇಟೆಗೆ ಬಂದು ಬೋನಿಗೆ ಬಿದ್ದ ಚಿರತೆ
Team Udayavani, Sep 16, 2021, 6:58 PM IST
ಕುಮಟಾ: ಆಹಾರ ಅರಸಿ ಬಂದಿದ್ದ ಚಿರತೆಯೊಂದು ಬೋನಿನಲ್ಲಿ ಇದ್ದ ನಾಯಿ ಹಿಡಿಯಲು ಹೋಗಿ ಬಂಧಿಯಾದ ಘಟನೆ ತಾಲೂಕಿನ ಕಿಮಾನಿಯಲ್ಲಿ ಗುರುವಾರ ನಡೆದಿದೆ.
ರಾತ್ರಿ ನಾಯಿ ಬೇಟೆಗೆ ಬಂದಿದ್ದ ಚಿರತೆ ಬೋನಿನೊಳಗೆ ಹೋಗಿದ್ದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣ ಅದನ್ನು ಲಾಕ್ ಮಾಡಿದ್ದಾರೆ. ಈ ವೇಳೆಗಾಗಲೇ ಬೋನಿನಲ್ಲಿದ್ದ ನಾಯಿ ತಪ್ಪಿಸಿಕೊಂಡಿತ್ತು. ತಕ್ಷಣ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆಯನ್ನು ಹಿಡಿದು ಸುರಕ್ಷತೆ ಸ್ಥಳಕ್ಕೆ ಸ್ಥಳಾಂತರಿಸಿದರು.
ಈ ವೇಳೆ ಎಸಿಎಫ್ ಗುರುದಾಸ ಶೇಟ್, ಆರ್‍ಎಫ್ಒ ನರೇಶ್ ಹಾಗೂ ವನ್ಯಜೀವಿ ಸಂರಕ್ಷಕರಾದ ಅಶೋಕ್ ನಾಯ್ಕ ತದಡಿ, ಪವನ ನಾಯ್ಕ ಕುಮಟಾ, ಮಹೇಶ ನಾಯ್ಕ ಅಂಕೋಲಾ ಇವರು ಚಿರತೆ ಸೆರೆಹಿಡಿಯುವಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.