Kumta: ಬಾಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ… ಸ್ಥಳೀಯರ ಮೊಬೈಲ್ ನಲ್ಲಿ ಚಿರತೆ ದೃಶ್ಯ ಸೆರೆ
Team Udayavani, Aug 16, 2024, 3:38 PM IST
ಕುಮಟಾ: ತಾಲೂಕಿನ ಬಾಡ ಗ್ರಾಮದ ಜನತಾ ವಿದ್ಯಾಲಯದ ಹಿಂಬದಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಸ್ಥಳಿಯೋರ್ವರ ಮೊಬೈಲ್ ನಲ್ಲಿ ಚಿರತೆಯ ವಿಡಿಯೋ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.
ಚಿರತೆ ಪ್ರತ್ಯಕ್ಷವಾಗಿರುವ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಗ್ರಾಮದೊಳಗೆ ಚಿರತೆ ನುಗ್ಗಿರುವುದನ್ನು ತಿಳಿದ ಬಾಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಮಂಜುನಾಥ ನಾಯ್ಕ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದಿರುವ ಕುಮಟಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಿರತೆ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ಬಾರಿ ಕೂಡ ಬಾಡ ಗ್ರಾಮದ ಮಾದರಿ ರಸ್ತೆಯಲ್ಲಿರುವ ನಾಗರಾಜ್ ನಾಯ್ಕ ಎನ್ನುವವರ ಮನೆ ಒಳಗೆ ಚಿರತೆ ನುಗ್ಗಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.ಮತ್ತೆ ಇದೀಗ ಬಾಡ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: IMF; 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಡಾ ಗೀತಾ ಗೋಪಿನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.