ಪಬ್ಲಿಕ್‌ ಸ್ಕೂಲ್ನಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಿ

•ಕಾಯ್ಕಿಣಿ ಗ್ರಾಮ ಸಭೆಯಲ್ಲಿ ಭುಗಿಲೆದ್ದ ಸಾರ್ವಜನಿಕರ ಆಕ್ರೋಶ: ಶಮನಕ್ಕೆ ಅಧಿಕಾರಿಗಳ ಹರಸಾಹಸ

Team Udayavani, Jun 30, 2019, 12:42 PM IST

uk-tdy-5..

ಭಟ್ಕಳ: ಕಾಯ್ಕಿಣಿ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸಭೆ ನಡೆಯಿತು.

ಭಟ್ಕಳ: ತಾಲೂಕಿನಲ್ಲಿ ಮೊದಲ ಬಾರಿಗೆ ಮೂರು ಶಾಲೆಗಳಿಗೆ ಮಾತ್ರ ಎಲ್.ಕೆ.ಜಿ. ಮತ್ತು ಒಂದನೇ ತರಗತಿ ಪ್ರಾರಂಭಿಸಿದ್ದು ಈ ವ್ಯವಸ್ಥೆಯಲ್ಲಿ ಮೊದಲು ಸ್ಥಳೀಯ ಮಕ್ಕಳಿಗೆ ಆದ್ಯತೆ ನೀಡಬೇಕು ಎಂದು ಕಾಯ್ಕಿಣಿ ಗ್ರಾಪಂನಲ್ಲಿ ನಡೆದ ಒಂದನೇ ಹಂತದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಕಾಯ್ಕಿಣಿಯಲ್ಲಿ ನೋಡಲ್ ಅಧಿಕಾರಿ ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಒಂದನೇ ಹಂತದ ಗ್ರಾಮ ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಶಿಕ್ಷಣಾಧಿಕಾರಿಗಳ ಅನುಪಸ್ಥಿತಿಯಲ್ಲಿ ಶಿಕ್ಷಕರೊಬ್ಬರು ಇಲಾಖಾ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರು ತಾಲೂಕಿಗೆ ಕೇವಲ ಮೂರು ಗ್ರಾಪಂ ವ್ಯಾಪ್ತಿಯಲ್ಲಿ ಮಾತ್ರ ಎಲ್ಕೆಜಿ ಮತ್ತು ಒಂದನೇ ತರಗತಿ ಪಾರಂಭವಾಗಿ ಇಂಗ್ಲಿಷ್‌ ಕಲಿಕೆಗೆ ಒತ್ತು ನೀಡಲಾಗುತ್ತಿದೆ. ಕೇವಲ ಮೂರು ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 30 ಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ಲಾಟರಿ ಎತ್ತುವುದರ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದನ್ನು ಕೈಬಿಟ್ಟು ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಕೃಷಿ ಇಲಾಖೆ ಅಧಿಕಾರಿಗಳು ವರದಿ ಮಂಡಿಸಿದ್ದು, ಸಾರ್ವಜನಿಕರು ಗ್ರಾಪಂ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್‌ ವಿತರಣೆಯಲ್ಲಿ ತಾರತಮ್ಯವಾಗಿದ್ದು ಈ ಬಗ್ಗೆ ತನಿಖೆ ಆಗಬೇಕೆಂದು ಆಗ್ರಹಿಸಿದರು. ದೇವಿಕಾನ್‌ ಕುಡಿಯುವ ನೀರು ಸರಬರಾಜಿನಲ್ಲಿ ವಾಟರ್‌ ಪೈಪ್‌ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಅಕ್ಕಪಕ್ಕದಲ್ಲಿ ನಿರ್ಮಾಣವಾಗಿರುವ ಚರಂಡಿಗಳನ್ನು ಮುಚ್ಚಿ ಹಾಕಲಾಗಿದೆ. ಪರಿಣಾಮವಾಗಿ ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ರಸ್ತೆ ಕೆಟ್ಟು ಹೊಗುತ್ತಿದೆ. ಇದಕ್ಕೆ ಯಾರು ಹೊಣೆಗಾರರು ಎಂದು ಸಾರ್ವಜನಿಕರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ಇದು ನಾನು ಇರುವ ಅವಧಿಯಲ್ಲಿ ನಡೆದಿಲ್ಲ. ಈ ಬಗ್ಗೆ ನನಗೆ ಮಾಹಿತಿ ಕೂಡಾ ಇಲ್ಲ ಎನ್ನುವ ಹಾರಿಕೆ ಉತ್ತರ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳು ಹಾಜರಾಗದೆ ಅಪೂರ್ಣ ಮಾಹಿತಿಯೊಂದಿಗೆ ತಮ್ಮ ಸಿಬಂದಿ ಕಳುಹಿಸಿರುವುದು ಕಂಡು ಬಂತು.

ತಾಪಂ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ, ಜಿಪಂ ಸದಸ್ಯೆ ಸಿಂಧು ಭಾಸ್ಕರ ನಾಯ್ಕ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.