![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 18, 2019, 3:13 PM IST
ಕಾರವಾರ: ಕರ್ನಾಟಕ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಬಿ.ಎ. ಪಾಟೀಲ್ ಕಾರವಾರ ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕಾಯಕವೆ ಕೈಲಾಸ ಎಂಬಂತೆ ವಕೀಲರು ವೃತ್ತಿ ಮಾಡುವುದರ ಜೊತೆ, ವೃತ್ತಿ ಕೌಶಲ, ನೈಪುಣ್ಯತೆ, ವ್ಯಾಪಕ ಓದನ್ನು ಹೊಂದಿರಬೇಕು. ವಕೀಲರು ಹೆಚ್ಚು ಅಧ್ಯಯನ ಶೀಲರಾಗಿರಬೇಕು. ವಿವಿಧ ನ್ಯಾಯಾಲಯಗಳ ತೀರ್ಪುಗಳನ್ನು ಅಧ್ಯಯನ ಮಾಡಬೇಕು ಎಂದರು. ಕಾರವಾರ ವಕೀಲರ ಸಂಘದಿಂದ ನ್ಯಾಯಾಧೀಶರನ್ನು ಸನ್ಮಾನಿಸಲಾಯಿತು.
ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ನಾಯ್ಕ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾ ಧೀಶರು, ಕಾರ್ಯದರ್ಶಿ ಎಸ್.ಎ. ಖಾಜಿ ಹಾಗೂ ಹಿರಿಯ ಹಾಗೂ ಕಿರಿಯ ವಕೀಲರು, ಮಹಿಳಾ ವಕೀಲರು ಭಾಗವಹಿಸಿದ್ದರು. ವಕೀಲರ ಸಂಘದ ಬೇಡಿಕೆ ಅನ್ವಯ ರವಿವಾರ ಬೆಳಗ್ಗೆ ಹೈಕೋರ್ಟ್ ನ್ಯಾಯಾಧೀಶರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಥಾಪನೆಗೆ ಅವಶ್ಯ ಇರುವ ಸ್ಥಳದ ಪರಿಶೀಲನೆ ಮಾಡಿದರು ಹಾಗೂ ಮಕ್ಕಳ ಕಲ್ಯಾಣ ನ್ಯಾಯಾಲಯಕ್ಕೆ (ವಿಶೇಷ ಜಿಲ್ಲಾ ನ್ಯಾಯಾಲಯ) ಸಜ್ಜಾಗಿದ್ದು, ಅದರ ಉದ್ಘಾಟನೆಗೆ ಬೇಕಾಗಿರುವ ಅಗತ್ಯ ಸಿದ್ಧತೆಗಳು ಆಗಿವೆಯಾ ಎಂದು ಪರಿಶೀಲಿಸಿದರು. ನಂತರ ಮಕ್ಕಳ ಕಲ್ಯಾಣ ನ್ಯಾಯಾಲಯವನ್ನು ಶೀಘ್ರದಲ್ಲಿ ಕಾರ್ಯಾರಂಭ ಮಾಡುವಂತೆ ನೋಡಿಕೊಳ್ಳಲು ಅಗತ್ಯ ಕ್ರಮಕ್ಕೆ ಯತ್ನಿಸುವುದಾಗಿ ಹೇಳಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.