ಲಾಕ್‌ಡೌನ್‌: ದಿನಕ್ಕೊಂದು ಆದೇಶ-ಜನರಲ್ಲಿ ಗೊಂದಲ

ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8-12 ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

Team Udayavani, May 31, 2021, 8:30 PM IST

30 honavar 01

ಜೀಯು, ಹೊನ್ನಾವರ

ಹೊನ್ನಾವರ: ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರ ಆದೇಶ ಒಂದಾದರೆ ಅದು ಜಾರಿಯಾಗುವಷ್ಟರಲ್ಲಿ ತಹಶೀಲ್ದಾರ್‌ ಆದೇಶ ಇನ್ನೊಂದು. ಯಾವುದನ್ನು ಪಾಲಿಸಬೇಕು ಎನ್ನುವುದು ಜನರಿಗೆ ಅರ್ಥವಾಗುತ್ತಿಲ್ಲ. ಕೋವಿಡ್‌ ಹೆಚ್ಚಿದ ಕಾರಣ ಈ ಕ್ರಮ ಕೈಗೊಂಡಿರುವುದಾಗಿ ತಹಶೀಲ್ದಾರ್‌ ವಿವೇಕ ಶೇಣಿ ಹೇಳುತ್ತಿದ್ದಾರೆ.

ಗ್ರಾಮಾಂತರದಲ್ಲಿ ಶೇ. 90ರಷ್ಟು ಜನ ಇದ್ದಾರೆ. ಮಳೆಗಾಲ ಜೂನ್‌ ಮೊದಲ ವಾರದಲ್ಲಿ ಆರಂಭವಾಗುವುದರಿಂದ ಪ್ರಕೃತಿ ಸಹಜ ಲಾಕ್‌ಡೌನ್‌ ಆರಂಭವಾಗಲಿದೆ. ಆದ್ದರಿಂದ ರೈತರು ಮತ್ತು ಗ್ರಾಮೀಣ ಜನ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ವಸ್ತುಗಳ ಖರೀದಿಗೆ ಒಂದೇ ವಾರವಷ್ಟೇ ಉಳಿದಿರುವುದರಿಂದ ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8-12 ರವರೆಗೆ ಸಾಮಾನನ್ನು ಖರೀದಿಸಿ, ಮನೆಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಶಾಸಕರ ಅನುಮೋದನೆಯೂ ಇತ್ತು. ಆದರೆ ತಹಶೀಲ್ದಾರ್‌ ವಿವೇಕ ಶೇಣಿÌ ವಿಡಿಯೋ ಹರಿಬಿಟ್ಟಿದ್ದು ಕೋವಿಡ್‌ ಹೆಚ್ಚುತ್ತಿರುವ ಕಾರಣ ಜಿಲ್ಲಾಧಿಕಾರಿಗಳು ನಮಗೆ ನೀಡಿದ ಅಧಿಕಾರದಂತೆ ಜೂ.7ರ ವರೆಗೆ ನಿರ್ಬಂಧವನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.

ಜೂ.7ರ ನಂತರವೂ ತಿಂಗಳ ಕೊನೆಯ ವರೆಗೆ ಲಾಕ್‌ಡೌನ್‌ ಆಗಲಿದೆ ಎಂಬ ಸುದ್ದಿ ರಾಜ್ಯಮಟ್ಟದಲ್ಲಿದೆ. ಈ ರೀತಿ ಸತತವಾಗಿ ಬಂದ್‌ ಇಡುವುದು ವ್ಯಾವಹಾರಿಕವಲ್ಲ. ಇಂದಿನ ಆದೇಶ ಜನರಲ್ಲಿ ನಿರಾಸೆ ಮತ್ತು ಗೊಂದಲ ಉಂಟುಮಾಡಿದೆ. ಯಾರ ಆದೇಶ ಪಾಲಿಸಬೇಕು ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂತಹ ಮಹತ್ವದ ಆದೇಶ ಹೊರಡಿಸುವಾಗ ಜನಪ್ರತಿನಿಧಿಗಳನ್ನು, ಮಾಧ್ಯಮದವರನ್ನು ಕರೆಯದೆ ಅಧಿಕಾರಿಗಳೇ ನಿರ್ಣಯ ತೆಗೆದುಕೊಳ್ಳುತ್ತಿರುವುದು ವಿಷಾದನೀಯ.

ಹೀಗೆ ದಿನಕ್ಕೆ ಒಬ್ಬೊಬ್ಬರ ಆದೇಶ ಒಂದೊಂದಾಗಿ ತಾಲೂಕು ಗೊಂದಲದಪುರವಾಗಿದೆ. ಜೂ.7ರ ನಂತರವೂ ಲಾಕ್‌ಡೌನ್‌ ಮುಂದುವರಿದರೆ ಹೇಗೆ ಬದುಕಬೇಕು ಎಂಬ ಪ್ರಶ್ನೆಗೆ ಜಿಲ್ಲೆಯ ಸಚಿವರು, ಜಿಲ್ಲಾಧಿಕಾರಿಗಳು ಉತ್ತರ ಹೇಳಬೇಕಾಗಿದೆ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.