ಲಾಕ್‌ಡೌನ್ ಯಥಾಸ್ಥಿತಿ: ಡಿಸಿ
27ರಂದು ಸೋಂಕಿತರ ಪುನರ್ ಪರೀಕ್ಷೆ
Team Udayavani, Apr 21, 2020, 5:56 PM IST
ಕಾರವಾರ: ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 4ರ ವರೆಗೆ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏ. 20ರ ನಂತರ ವಾಹನಗಳ ಸಂಚಾರಕ್ಕೆ ಸಡಿಲಿಕೆ ನೀಡಲಾಗುವುದು ಎಂಬುದು ವದಂತಿಯಷ್ಟೆ. ಕೃಷಿ ಚಟುವಟಿಕೆ ಹಾಗೂ ಸಾಂಪ್ರದಾಯಿಕ ಮೀನುಗಾರಿಕೆಗೆ ಈಗಾಗಲೇ ಅನುಮತಿ ನೀಡಲಾಗಿದೆ. ಏ. 21ರ ಬಳಿಕ ಕಾರ್ಖಾನೆಗಳ ಕೆಲಸಕ್ಕೆ ಅನುಮತಿ ನೀಡಲಾಗುವುದು. ಆದರೆ ಕಾರ್ಖಾನೆಗಳು ಪ್ರತಿದಿನ ಬೆಳಗ್ಗೆಯೇ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಅಗತ್ಯ ಸಿವಿಲ್ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗುವುದು. ಇಲ್ಲೂ ಗುತ್ತಿಗೆದಾರರು ಥರ್ಮಲ್ ಸ್ಕ್ಯಾನರ್‌ನಿಂದ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿಯೇ ಅವರಿಗೆ ನೆಲೆ ಕಲ್ಪಿಸಬೇಕೆಂದು ತಿಳಿಸಿದರು.
ಹತೋಟಿಯಲ್ಲಿ ಸೋಂಕು: ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ಹತೋಟಿಯಲ್ಲಿದೆ. 11 ಜನರ ಪೈಕಿ 9 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸೋಂಕಿಗೊಳಗಾದ ಗರ್ಭಿಣಿ ಕೂಡಾ ಗುಣಮುಖಳಾಗುತ್ತಿದ್ದಾಳೆ. ಇನ್ನೆರಡು ದಿನಗಳಲ್ಲಿ ಆಕೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಕಾರವಾರ ನೇವಿ ಐಎನ್‌ಎಸ್ ಪತಂಜಲಿ ಆಸ್ಪತ್ರೆಯಲ್ಲಿರುವ ಆಕೆಯ ಪತಿಯ ಆರೋಗ್ಯ ಸ್ಥಿತಿ ಸಹ ಸುಧಾರಿಸಿದೆ. ಏ. 27ಕ್ಕೆ ಗಂಟಲು ದ್ರವ ಮಾದರಿಯನ್ನು ಪುನಃ ಪರೀಕ್ಷೆಗೆ ಕಳುಹಿಸಲಾಗುವುದು. ವರದಿ ನೆಗೆಟಿವ್ ಬಂದಲ್ಲಿ ಆ ವ್ಯಕ್ತಿಯನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಡಿಸಿ ತಿಳಿಸಿದರು.
ಸಾಮೂಹಿಕ ಪ್ರಾರ್ಥನೆಗಿಲ್ಲ ಅವಕಾಶ: ಎಸ್ಪಿ ಶಿವಪ್ರಕಾಶ ದೇವರಾಜು ಮಾತನಾಡಿ, ರಂಜಾನ್ ತಿಂಗಳಲ್ಲಿ ಯಾರೂ ಸಾಮೂಹಿಕ ಪ್ರಾರ್ಥನೆ ಅಥವಾ ಇಫ್ತಾರ್ ಕೂಟ ನಡೆಸದಂತೆ ಸೂಚಿಸಲಾಗಿದೆ. ಗುಂಪಾಗಿ ಅಡುಗೆ ಮಾಡಿ ವಿತರಿಸುವ ಕೆಲಸಕ್ಕೂ ಅವಕಾಶವಿಲ್ಲ. ಈ ಬಗ್ಗೆ ವಕ್ಫ್ ಮಂಡಳಿ ನಿರ್ದೇಶನ ನೀಡಿದ್ದು, ಕಡ್ಡಾಯವಾಗಿ ಎಪಾಲಿಸಬೇಕು. ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.
ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್-19 ಪ್ರಯೋಗಾಲಯ ತೆರೆಯಲು ಅನುಮತಿ ದೊರೆತಿದೆ. ಪ್ರಯೋಗಾಲಯ ಸ್ಥಾಪನೆಗೆ ಹಣದ ಸಮಸ್ಯೆ ಇಲ್ಲ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಐಸಿಎಂಆರ್ ಪರಿಶೀಲನೆ ನಡೆಸಿದ ಬಳಿಕ ಪ್ರಯೋಗಾಲಯ ಸ್ಥಾಪನೆಯಾಗಲಿದೆ. -ಡಾ| ಹರೀಶಕುಮಾರ್, ಡಿಸಿ
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು. ಹೆಲ್ತ್ ಕೇರ್ ಸಂಸ್ಥೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ಇರುತ್ತದೆ. ಖಾಸಗಿ ವೈದ್ಯರು ಆರೋಗ್ಯ ಸೇವೆ ನೀಡುವ ಮೂಲಕ ಸರಕಾರಕ್ಕೆ ನೆರವಾಗಬೇಕು. ಹಿರಿಯ ನಾಗರಿಕರು ತಮ್ಮ ಅಗತ್ಯ ಔಷಧಿಗಳನ್ನು ಪಿಡಿಒ ಮೂಲಕ ತರಿಸಿಕೊಳ್ಳಬಹುದು. -ಎಂ. ರೋಶನ್, ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.