Lok Adalat ; ಭಟ್ಕಳದಲ್ಲಿ ಮತ್ತೆ ಒಂದಾದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ
Team Udayavani, Sep 9, 2023, 6:58 PM IST
ಭಟ್ಕಳ: ಇಲ್ಲಿನ ನ್ಯಾಯಾಲಯದ ಸಂಕೀರ್ಣದಲ್ಲಿ ಶನಿವಾರ ನಡೆದ ಬೃಹತ್ ಲೋಕ ಅದಾಲತ್‌ನಲ್ಲಿ ವಿವಿಧ ಹಂತದಲ್ಲಿ ವಿಚಾರಣೆಯಲ್ಲಿದ್ದ ಒಟ್ಟೂ ೨೮೦ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದ್ದು ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಶೇಷವಾಗಿ ಕೌಟುಂಬಿಕ ಪ್ರಕರಣವೊಂದು ರಾಜೀ ಮೂಲಕ ಸುಖಾಂತ್ಯಗೊಂಡ ಪ್ರಸಂಗ ನಡೆಯಿತು.
ಶನಿವಾರ ಬೆಳಗ್ಗೆಯಿಂದ ಆರಂಭವಾಗಿದ್ದ ಲೋಕ ಅದಾಲತ್‌ನಲ್ಲಿ ಹಿರಿಯ ಸಿವಿಲ್ ನ್ಯಾಯಾಲಯಲ್ಲಿ ವಿಚಾರಣೆಗೆ ಬಾಕಿ ಇದ್ದ 907 ಪ್ರರಣಗಳಲ್ಲಿ ಒಟ್ಟು 126 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಯಿತು. ಇವುಗಳಲ್ಲಿ ಕೌಟುಂಬಿಕ ಪ್ರಕರಣವೊಂದರಲ್ಲಿ ದಂಪತಿಗಳು ಪರಸ್ಪರ ಮನಸ್ತಾಪದಿಂದ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದು ತನಿಖಾ ಹಂತದಲ್ಲಿರುವ ಪ್ರಕರಣವನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿ ದಂಪತಿಗಳು ಒಂದಾಗುವಂತೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಎರಡೂ ಕಡೆಯವರನ್ನು ಮನವೊಲಿಸಿ ಅವರಲ್ಲಿದ್ದ ಪರಸ್ಪರ ಭಿನ್ನಾಭಿಪ್ರಾಯವನ್ನು ದೂರ ಮಾಡಿ ಅವರು ಹಿರಿಯರ ಸಮ್ಮುಖದಲ್ಲಿ ಒಪ್ಪಿ ಒಟ್ಟಾಗಿ ಜೀವನ ನಡೆಸುವುದಾಗಿ ಭರವಸೆ ನೀಡಿ ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಮತ್ತೆ ಒಂದಾಗಿರುವುದು ನ್ಯಾಯಾಲಯದ ಆವರಣದಲ್ಲಿದ್ದವರಿಗೆಲ್ಲಾ ಸಂತಸ ತಂದಿತ್ತು. ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸಂಧಾನಕಾರರಾಗಿ ನ್ಯಾಯವಾದಿ ನಾಗರತ್ನಾ ನಾಯ್ಕ ಕಾರ್ಯನಿರ್ವಹಿಸಿದರು.
ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ವಿಚಾರಣೆಗೆ ಬಾಕಿ ಇರುವ ಚೆಕ್ ಬೌನ್ಸ ಪ್ರಕರಣ (ಎನ್.ಐ.ಆಕ್ಟ್), ಮೋಟಾರು ವಾಹನ ಪರಿಹಾರ ಪ್ರಕರಣ (ಎಂ.ವಿ.ಆಕ್ಟ್), ಅಮಲ್‌ಜ್ಯಾರಿ ಪ್ರಕರಣ (ಎಕ್ಸಿಕ್ಯೂಶನ್), ಐ.ಪಿ.ಸಿ. ಪ್ರಕರಣಗಳನ್ನು ಕೂಡಾ ರಾಜೀ ಮೂಲಕ ಇತ್ಯರ್ಥ ಪಡಿಸಲಾಗಿದ್ದು ಎಲ್ಲಾ ಪ್ರಕರಣಗಳಲ್ಲಿ ಒಟ್ಟು ಪರಿಹಾರದ ಮೊತ್ತವಾಗಿ1,01,70,230 ರೂಪಾಯಿಗಳನ್ನು ಕಕ್ಷಿದಾರರಿಗೆ, ವಿವಿಧ ಬ್ಯಾಂಕುಗಳಿಗೆ ಅವಾರ್ಡ್ ಘೊಷಿಸಲಾಯಿತು.
ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಪ್ರಕರಣಗಳ ಪೈಕಿ ಒಟ್ಟೂ 77 ಪ್ರಕರಣಗಳನ್ನ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಒಟ್ಟೂ 77 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ, ಪ್ರಧಾನ ಸಿವಿಲ್ ನ್ಯಾಯಾಧೀಶ ವಿನೋದ ಬಾಳ್‌ನಾಯ್ಕ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ., ವಕೀಲರ ಸಂಘದ ಅಧ್ಯಕ್ಷ ಗಣೇಶ ಎಂ. ದೇವಡಿಗ, ಹಿರಿಯ ನ್ಯಾಯವಾದಿ ಆರ್.ಆರ್.ಶ್ರೇಷ್ಟಿ, ಎಂ.ಎಲ್.ನಾಯ್ಕ, ವಿ.ಎಫ್.ಗೋಮ್ಸ್, ಸಿ.ಎಂ.ಭಟ್ಟ, ರಾಜೇಶ ನಾಯ್ಕ, ಪಾಂಡು ನಾಯ್ಕ, ಜೆ.ಡಿ.ಭಟ್ಟ, ಎಂ.ಎಚ್.ನಾಯ್ಕ, ನಾಗರಾಜ ಈ.ಎಚ್., ಉಮೇಶ ನಾಯ್ಕ, ಪಾಂಡು ನಾಯ್ಕ, ಎಸ್.ಎಂ.ನಾಯ್ಕ, ಕೆ.ಎಚ್. ನಾಯ್ಕ, ವಿ.ಎ.ಅಕ್ಕಿವಳ್ಳಿ ಸೇರಿದಂತೆ ಸಹಾಯಕ ಸರಕಾರಿ ಅಭಿಯೋಜಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.