ಮಾರಿ ಜಾತ್ರೆ-ಶಿರಸಿಯತ್ತ ಜನರ ಯಾತ್ರೆ

ದಿನೇ ದಿನೇ ರಂಗೇರುತ್ತಿದೆ ಜಾತ್ರೋತ್ಸವ

Team Udayavani, Mar 20, 2022, 3:53 PM IST

11

ಶಿರಸಿ: ರಾಜ್ಯದ ಪ್ರಸಿದ್ಧ ಶಿರಸಿಯ ಮಾರಿಕಾಂಬಾ ಜಾತ್ರೆ ರಂಗೇರುತ್ತಿದ್ದು, ಶನಿವಾರ ದೇವಿ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಕಳೆದ ಮೂರು ದಿನಗಳಿಂದ ತಾಯಿ ಮಾರಿಕಾಂಬೆ ಗದ್ದುಗೆ ಏರಿ ದರ್ಶನ ನೀಡುತ್ತಿದ್ದು, ಶನಿವಾರ ಮಧ್ಯಾಹ್ನದ ಬಳಿಕ ಜನ ಸಾಗರವೇ ನೆರೆದಿತ್ತು.

ಶುಕ್ರವಾರ ಅಕಾಲಿಕ ಮಳೆಯಾಗಿದ್ದು, ಶನಿವಾರವೂ ಮಳೆ ಬರಬಹುದು ಎಂಬ ಆತಂಕ ಇತ್ತಾದರೂ ಭಕ್ತರು ಅದಕ್ಕೆ ಸಜ್ಜಾಗಿಯೇ ತಾಯಿಯ ದರ್ಶನಕ್ಕೆ ದಾಪುಗಾಲಿಟ್ಟಿದ್ದರು. ಶನಿವಾರ ಸುಮಾರು 80 ಸಾವಿರಕ್ಕೂ ಅಧಿ ಕ ಭಕ್ತರು ತಂಡೋಪ ತಂಡವಾಗಿ ಆಗಮಿಸಿದ್ದು, ಉಡಿ, ಹಣ್ಣು ಕಾಯಿ ಸೇವೆ ಸಮರ್ಪಿಸಿದರು. ಬೇವಿನ ಉಡಿ ಸೇವೆ, ತುಲಾಭಾರ ಸೇವೆ ಕೂಡ ಹೆಚ್ಚಾಗಿ ನಡೆದವು.

ಕಳೆದ ಮೂರು ದಿನಗಳಿಂದ ನಿತ್ಯ 16 ರಿಂದ 17 ಸಾವಿರ ಉಡಿಗಳು, 17 ಸಾವಿರದಷ್ಟು ಕುಂಕುಮಾರ್ಚನೆಗಳು ಅಮ್ಮನಿಗೆ ಸಲ್ಲಿಕೆ ಆದವು. ನಿತ್ಯವೂ ಪ್ರತಿ ಉಡಿಯ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರತಿದಿನ ಎರಡು ಸಾವಿರದಷ್ಟು ಉಡಿಯನ್ನು ಪುನಃ ಕಟ್ಟಲಾಗುತ್ತದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ತೇರು ಬೀದಿ, ಪೋಸ್ಟ್‌ ವೃತ್ತ, ಶಿವಾಜಿ ಚೌಕ, ಮಿರ್ಜಾನಕರ ಪೆಟ್ರೋಲ್‌ ವೃತ್ತ, ಕೋಣನಬಿಡಕಿ ಪ್ರದೇಶ, ನಟರಾಜ್‌ ರಸ್ತೆ ಜನರಿಂದ ತುಂಬಿ ತುಳುಕುತ್ತಿತ್ತು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರೂ ಜಾತ್ರೆಗೆ ಆಗಮಿಸಿ ಸಂತೋಷ ಪಟ್ಟರು.

ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ವಿಐಪಿ ಅತಿಥಿಗಳೂ ಆಗಮಿಸಿದ್ದು ಕೆಲಕಾಲ ಒತ್ತಡಕ್ಕೆ ಕಾರಣವಾಯಿತು. ಸ್ಪೀಕರ್‌ ಕಾಗೇರಿ, ಸಂಸದ ಅನಂತಕುಮಾರ ಹೆಗಡೆ, ಸಚಿವ ಶಿವರಾಮ ಹೆಬ್ಟಾರ್‌, ವಿಧಾನ ಪರಿಷತ್‌ ಸದಸ್ಯರಾದ ಗಣಪತಿ ಉಳ್ವೇಕರ್‌, ಎಸ್‌.ವಿ.ಸಂಕನೂರು, ಬಣ್ಣದ ಮಠದ ಶ್ರೀಗಳು, ಹೈಕೋರ್ಟ ನ್ಯಾಯಾಧೀಶರೂ ದೇವಿ ದರ್ಶನ ಪಡೆದರು. ಪೊಲೀಸರು, ಕಾರ್ಯಕರ್ತರು ಒತ್ತಡ ನಿಯಂತ್ರಿಸಿದರು. ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡ ಶಶಿಧರಯ್ಯ ಅವರು ದೇವಿ ದರ್ಶನ ಪಡೆದೇ ಅಧಿಕಾರ ಸ್ವೀಕರಿಸಿದರು.

ಬಳೆ ಪೇಟೆ, ನಟರಾಜ್‌ ರಸ್ತೆ, ಅಮ್ಯೂಸಮೆಂಟ್‌ ಪಾರ್ಕ್‌ಗಳಲ್ಲಿ ಜನ ಹೆಚ್ಚಿದ್ದರು. ಮೋಡ ಕವಿದ ವಾತಾವರಣ ಇದ್ದರೂ ಮಳೆಬಾರದೇ ಇದ್ದುದರಿಂದ ವರ್ತಕರು ಭಕ್ತರು ನಿಟ್ಟುಸಿರು ಬಿಟ್ಟರು. ಭಾನುವಾರ ಜಿಲ್ಲಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ದೇವಿ ದರ್ಶನಕ್ಕೆ ಆಗಮಿಸಲಿದ್ದಾರೆ. ರಜಾ ದಿನವಾದ ಭಾನುವಾರ ಭಕ್ತರ ಸಂಖ್ಯೆ ಲಕ್ಷ ದಾಟುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.