ಶಿರಸಿ : ವರದಿಗಾರ ಪ್ರದೀಪ ಶೆಟ್ಟಿ ಅವರಿಗೆ 2022 ನೇ ಸಾಲಿನ ಮಾಧ್ಯಮ ಶ್ರೀ ಪ್ರಶಸ್ತಿ
Team Udayavani, Jul 17, 2022, 3:16 PM IST
ಶಿರಸಿ : ಕಳೆದ 25 ವರ್ಷಗಳಿಂದ ಶಿರಸಿ ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿರುವ ಕನ್ನಡ ಜನಾಂತರಂಗ ವರದಿಗಾರ ಪ್ರದೀಪ ಶೆಟ್ಟಿ ಅವರಿಗೆ 2022 ನೇ ಸಾಲಿನ ಮಾಧ್ಯಮ ಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರಶಸ್ತಿಯು 3 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಪ್ರದೀಪ ಶೆಟ್ಟಿ ಅವರು ಪತ್ರಿಕೋದ್ಯಮಕ್ಕೆ ನೀಡಿದ ಸೇವೆಗಾಗಿ ಸಂಘದ ಅಧ್ಯಕ್ಷ ಸಂದೇಶ ಭಟ್ ಬೆಳಖಂಡ ಹಾಗೂ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಅವರು ಪ್ರಶಸ್ತಿ ಪ್ರಕಟಿಸಿದ್ದಾರೆ.
ಕರಾವಳಿ ಸುಪ್ರಭಾತ, ವಿಜಯ ಕರ್ನಾಟಕ, ಜನಮಾಧ್ಯಮ ಪತ್ರಿಕೆಯಲ್ಲಿ ಕೆಲಸ ಮಾಡಿ ಕಳೆದ 20 ವರ್ಷಗಳಿಂದ ಕನ್ನಡ ಜನಾಂತರಂಗದಲ್ಲಿ ಶಿರಸಿ ವರದಿಗಾರರಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2003 ರಲ್ಲಿ ರೋಟರಿಯಿಂದ ಕ್ರೀಯಾಶೀಲ ಪತ್ರಕರ್ತರೆಂದು ಸಾರ್ವಜನಿಕ ಸಂಮಾನ ಮಾಡಲಾಗಿದೆ. ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯರಾಗಿಯೂ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಮೂರು ಬಾರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿಯಾಗಿ ಸಂಘಟನೆ ಮಾಡಿರುವ ಹೆಗ್ಗಳಿಕೆ ಅವರದ್ದಾಗಿದೆ.
ಇದನ್ನೂ ಓದಿ : ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾದ ಕ್ಯಾಂಟರ್
ಮೈಸೂರಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿರುವ ಪ್ರದೀಪ ಶೆಟ್ಟಿಯವರು ತಮ್ಮ ಸಾಮಾಜಿಕ ಕೆಲಸದಿಂದಲೂ ಶಿರಸಿಯಲ್ಲಿ ಗುರುತಿಸಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸರ್ಕಸ್ ಕಂಪನಿ, ನಾಟಕ ಕಂಪನಿಯವರಿಗೆ ದಿನನಿತ್ಯದ ವಸ್ತುಗಳನ್ನು ಒದಗಿಸಿಕೊಡುವಲ್ಲಿ ಅವರ ಮಾತ್ರ ಮಹತ್ವದ್ದಿದೆ. ಈ ಎಲ್ಲಾ ಕಾರ್ಯದಿಂದ ಅವರಿಗೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಸಮ್ಮಾನಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.