Muzrai ಸೇರದ ದೇವಸ್ಥಾನಗಳಿಗೂ ವ್ಯವಸ್ಥಾಪನಾ ಸಮಿತಿ: ಸ್ವರ್ಣವಲ್ಲೀ ಶ್ರೀ ಖಂಡನೆ
ರಾಜ್ಯ ಸರಕಾರ ಈ ರೀತಿಯ ಪ್ರಕ್ರಿಯೆಗೆ ಮುಂದಾಗುವುದು ನ್ಯಾಯವಲ್ಲ
Team Udayavani, Nov 12, 2023, 8:30 PM IST
ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ ಮಹಾ ಮಂಡಳದ ಗೌರವಾಧ್ಯಕ್ಷರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ ಸಂಸ್ಥೆಗಳ ತಿದ್ದುಪಡಿ ಅಧಿನಿಯಮ 2011ರ ಕುರಿತು ಸುಪ್ರಿಂ ಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಹಂತದಲ್ಲಿ ಇರಬೇಕಾದರೆ ಯಾವುದೋ ಒಂದು ಸೆಕ್ಷನ್‍ಗೆ ಮಾತ್ರ ವಿನಾಯಿತಿ ತೆಗೆದಕೊಂಡು ಈ ರೀತಿಯ ಪ್ರಕ್ರಿಯೆಗೆ ಮುಂದಾಗುವುದು ನ್ಯಾಯವಲ್ಲ. ಕಳೆದ 22 ವರ್ಷಗಳಿಂದ ಈ ಕಾನೂನಿನ ಬಗ್ಗೆ ನಮ್ಮ ಆಗ್ರಹವನ್ನು ಸಲ್ಲಿಸುತ್ತಲೇ ಇದ್ದೇವೆ. ಈಗಾಗಲೇ 2 ಬಾರಿ ರಾಜ್ಯ ಉಚ್ಛ ನ್ಯಾಯಾಲಯವು ಈ ಕಾನೂನನ್ನು ಅಸಂವಿಧಾನಿಕ ಎಂದು ತಿರಸ್ಕರಿಸಿದೆ. ಇಂಥ ಕಾನೂನಿನ ಬಗ್ಗೆಯೇ ಮತ್ತೆ ಜಾರಿಗೆ ಪ್ರಯತ್ನಿಸುವುದು ಸರಿಯಲ್ಲ. ಸರ್ವಸಮ್ಮತವಾದ ಹೊಸ ಕಾನೂನನ್ನು ಜಾರಿಗೆ ತರಲು ಅವಕಾಶವಿದೆ. ಸರಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಸರ್ವಸಮ್ಮತವಾದ ಕಾನೂನು ಜಾರಿಗೆ ಬರುವ ತನಕ ಸರಕಾರ ಈ ರೀತಿಯ ಪ್ರಯತ್ನಗಳನ್ನು ಸ್ಥಗಿತಗೊಳಿಸಬೇಕು ಎಂದರು.
ರಾಜ್ಯ ಸರಕಾರ ವ್ಯವಸ್ಥಾಪನಾ ಸಮಿತಿ ರಚನೆಗೆ ಹೊರಟಿರುವ ರಾಜ್ಯದ ವಿವಿಧ ದೇವಸ್ಥಾನಗಳ ಪೈಕಿ ಮುಜರಾಯಿ ಇಲಾಖೆಗೆ ಸೇರದ ಅನೇಕ ದೇವಸ್ಥಾನಗಳಿವೆ. ಆ ದೇವಸ್ಥಾನಗಳಿಗೆ ಕೂಡ ವ್ಯವಸ್ಥಾನ ಸಮಿತಿ ರಚಿಸುವ ಬಗ್ಗೆ ಆದೇಶ ಹೊರಡಿಸಿ, ಅರ್ಜಿಗಳನ್ನು ಆಹ್ವಾನಿಸಿದೆ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಿಗೆ, ಅದರಲ್ಲೂ ವಿಶೇಷವಾಗಿ ಮೈಸೂರು ಮಹಾರಾಜರ ಆಳ್ವಿಕೆಯಲ್ಲಿದ್ದು ಬಳಿಕ ಕರ್ನಾಟಕ ರಾಜ್ಯ ಸರಕಾರದ ಆಡಳಿತಕ್ಕೆ ಹಸ್ತಾಂತರವಾದ ದೇವಸ್ಥಾನಗಳಿಗೆ ಆಡಳಿತ ವ್ಯವಸ್ಥೆ ನೇಮಕ ಮಾಡಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರ ಮೊದಲಿಂದಲೂ ಜನಗಳೇ ನಡೆಸಿಕೊಂಡು ಬಂದಿರುವ ದೇವಸ್ಥಾನಗಳಿಗೆ ಈ ರೀತಿ ವ್ಯವಸ್ಥಾಪನಾ ಸಮಿತಿ ನೇಮಕದ ಪ್ರಯತ್ನವನ್ನು ಸರಕಾರ ಮಾಡಬಾರದು. ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರಕಾರಕ್ಕೆ ಕಂಡುಬಂದರೂ ಸಹ ಅವುಗಳ ಖಾಸಗಿ ಮಾಲಿಕತ್ವವನ್ನು ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ. ಇಂಥ ದೇವಸ್ಥಾನಗಳಲ್ಲಿ ಹಾಲಿ ಇರುವ ಆಡಳಿತ ಮಂಡಳಿಗೇ ವ್ಯವಸ್ಥಾಪನಾ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಸರಕಾರ ಸೂಚಿಸಬಹುದು. ಉದಾಹರಣೆಗೆ ಸಹಕಾರಿ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿದ ಬಳಿಕ ಸಹಕಾರ ಇಲಾಖೆಯು ಹೊಸ ಡಳಿತ ಮಂಡಳಿ ರಚಿಸಿ ವರದಿ ಸಲ್ಲಿಸುವಂತೆ ಸೂಚನೆ ಕೊಡುತ್ತದೆ. ಆಯ್ಕೆ ಮಾಡುವ ಸ್ವಾತಂತ್ರ್ಯ ಆಯಾ ಸಹಕಾರಿ ಸಂಸ್ಥೆಗಳಿಗೆ ಇರುತ್ತದೆ. ಇದೇ ಮಾದರಿಯಲ್ಲಿ ಸರಕಾರ ಖಾಸಗಿ ದೇವಸ್ಥಾನಗಳಿಗೂ ಆಡಳಿತ ಮಂಡಳಿ ರಚಿಸಿ ವರದಿ ಕೊಡುವಂತೆ ಸೂಚಿಸಬಹುದು ಎಂದರು.
ಇದನ್ನು ಹೊರತುಪಡಿಸಿ, ಮುಜರಾಯಿ ಇಲಾಖೆಯ ಆಯುಕ್ತರ ಕಚೇರಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು, ಆಡಳಿತ ಮಂಡಳಿಯನ್ನು ಸರಕಾರವೇ ರಚನೆ ಮಾಡಲು ಇರುವ ಅವಕಾಶ ಸರಿಯಲ್ಲ. ಈ ರೀತಿಯಲ್ಲಿ ಎಲ್ಲ ದೇವಸ್ಥಾನಗಳನ್ನೂ ಸರಕಾರಿಕರಣಗೊಳಿಸುವ ಬಗ್ಗೆ ನಮ್ಮ ವಿರೋಧವಿದೆ ಎಂದೂ ಹೇಳಿದರು. ಇದೇ ವೇಳೆ, ಸರಕಾರ ದೇವಸ್ಥಾನಗಳ ಅಭಿವೃದ್ಧಿಗೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವುದನ್ನು ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.