ಬೆಳೆ ಸಾಲ ಭರಣಕ್ಕೆ ಮೇ 31 ಕಡೇ ದಿನ: ಹೆಬ್ಟಾರ್
Team Udayavani, May 20, 2020, 5:10 PM IST
ಶಿರಸಿ: ಬೆಳೆ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗಬೇಕಾದರೆ ಭರಣಕ್ಕೆ ಮೇ 31ಕ್ಕೆ ಕಡೇ ದಿನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್ ಹೇಳಿದರು.
ತಾಲೂಕಿನ ಹಲಗದ್ದೆ, ಭಾಶಿಯ ಗ್ರಾ.ಪಂ. ನಿರ್ಮಾಣ ಮಾಡಿದ 40 ಲಕ್ಷ ರೂ. ಮೊತ್ತದ ಕಟ್ಟಡ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಜೂನ್ 30ರೊಳಗೆ ತುಂಬಿದರೆ ರಾಜ್ಯ ಸರಕಾರದ ಶೇ. 6ರ ಬಡ್ಡಿ ಸಹಾಯ ಮಾತ್ರ ಸಿಗಲಿದೆ. ಉಳಿದ ಬಡ್ಡಿಯೂ ಲಭ್ಯವಾಗಿ ರೈತರಿಗೆ ಶೂನ್ಯ ಬಡ್ಡಿ ಸಿಗಬೇಕಾದರೆ ಮೇ 31ರೊಳಗೇ ಭರಣ ಮಾಡಿಕೊಳ್ಳಬೇಕಿದೆ ಎಂದರು.
ಜೂ. 10-12ರೊಳಗೆ ಸಾಲ ಭರಣ ಮಾಡಿದ ಎಲ್ಲ ರೈತರಿಗೂ ಮರಳಿ ಸಾಲ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಅವರು, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಿಗೂ ಈ ಕುರಿತು ಸೂಚನೆ ನೀಡಲಾಗಿದೆ ಎಂದೂ ಹೇಳಿದರು.
ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಂದ ಜನರು ಕರ್ನಾಟಕಕ್ಕೆ ಬರಲು ಸದ್ಯಕ್ಕೆ ಅನುಮತಿ ನೀಡಲಾಗುತ್ತಿಲ್ಲ. ಅಲ್ಲಿಂದ ಬಂದವರಿಂದೇ ಕೋವಿಡ್ ಹೆಚ್ಚಾಗಿದೆ. ಆದರೆ, ರಾಜ್ಯದ ಒಳಗಿನ ಪ್ರವಾಸಕ್ಕೆ ಯಾವ ಪಾಸ್‌ಗಳ ಅಗತ್ಯವಿಲ್ಲ ಎಂದರು. ಜಿಲ್ಲೆಯಲ್ಲೂ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಬುಧವಾರದಿಂದ ಇದು ಜಿಲ್ಲೆಯಲ್ಲೂ ಜಾರಿಗೆ ಬರಲಿದೆ ಎಂದರು.
ಜಿ.ಪಂ. ಸದಸ್ಯೆ ರೂಪಾ ನಾಯ್ಕ, ತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ಎಸಳೆ, ದ್ಯಾಮಣ್ಣ ದೊಡ್ಮನಿ, ನರಸಿಂಹ ಬಕ್ಕಳ ಇತರರು ಇದ್ದರು.
ಶಾಲೆ ಪುನರಾರಂಭಕ್ಕೆ ಇನ್ನೂ ಎರಡು ತಿಂಗಳು ವಿಳಂಬ ಆಗಬಹುದು. ಒಂದು ವರ್ಷದ ಶಿಕ್ಷಣ ಹೋದರೂ ಒಂದು ಮಗುವನ್ನು ಕಳೆದುಕೊಳ್ಳಲು ಸಿದ್ಧರಿಲ್ಲ. ಪರಿಸ್ಥಿತಿ ತಿಳಿಯಾದ ಮೇಲೆ ಶಾಲೆಗಳ ಪುನರಾರಂಭ ನಿರ್ಣಯ ತೆಗೆದುಕೊಳ್ಳುತ್ತೇವೆ. –ಶಿವರಾಮ ಹೆಬ್ಟಾರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.