ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ಮುರ್ಡೇಶ್ವರ ಜಾತ್ರೆ: ಮಮತಾದೇವಿ ಜಿ.ಎಸ್
Team Udayavani, Jan 15, 2022, 4:26 PM IST
ಭಟ್ಕಳ: ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ದೇವಾಲಯಗಳಲ್ಲಿ ಒಳಾಂಗಣ ಪೂಜೆಗಷ್ಟೇ ಅವಕಾಶವಿದ್ದು ಜಾತ್ರೆ, ಉತ್ಸವಾದಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಮುರ್ಡೇಶ್ವರ ಜಾತ್ರೆಯ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡಿದರು.
ಸರಕಾರದ ಈ ಹಿಂದಿನ ಮಾರ್ಗಸೂಚಿಯಂತೆ ತಾಲೂಕಿನ ಮುರ್ಡೇಶ್ವರ ಜಾತ್ರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿತ್ತು ಆದರೆ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಕೋವಿಡ್ ತಡೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಹೇರಲು ಜಿಲ್ಲಾಡಳಿತ ತೀರ್ಮಾನಿಸಿದ್ದರಿಂದ ಮುರ್ಡೇಶ್ವರ ಜಾತ್ರೆಯನ್ನು ಕೇವಲ ಧಾರ್ಮಿಕ ವಿಧಿವಿಧಾನಗಳಿಗಷ್ಟೇ ಸೀಮಿತಗೊಳಿಸಲಾಗಿದೆ ಎಂದರು.
ಮುರ್ಡೇಶ್ವರ ಬ್ರಹ್ಮರಥೋತ್ಸವ ರದ್ದು ಪಡಿಸಿದ್ದು, ಜಾತ್ರೆಗೆ ಬರುವವರಿಗೆ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಲು ಕೇವಲ 50 ಮಂದಿಗಷ್ಟೇ ಅವಕಾಶವಿದ್ದು ಕೋವಿಡ್ ಲಸಿಕೆ, ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದೂ ಅವರು ಹೇಳಿದರು. ಜಾತ್ರೆಯ ಪ್ರಯುಕ್ತ ಯಾವುದೇ ಜಾತ್ರಾ ಅಂಗಡಿ, ವ್ಯಾಪಾರ, ಮನೊರಂಜನಾ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದರು.
ಮಾವಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಸದಸ್ಯರು ಜಾತ್ರಾ ಮಳಿಗೆಗೆ ಅವಕಾಶ ಕೊಡುವುದಾಗಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಸಭೆಗೆ ತಿಳಿಸಿದಾಗ, ಅಂತಹ ಯಾವುದೇ ಅವಕಾಶ ಇಲ್ಲ, ಇದನ್ನು ಮೀರಿ ಜಾತ್ರಾ ಅಂಗಡಿಗೆ ಅವಕಾಶ ನೀಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಎಚ್ಚರಿಸಿದರು.
ತಾಲೂಕಿನಲ್ಲಿ ಜ.23ರಿಂದ 9 ದಿನಗಳ ಕಾಲ ನಡೆಯಲಿರುವ ಅದ್ದೂರಿ ಸೋಡಿಗದ್ದೆ ಮಹಾಸತಿ ಜಾತ್ರೆಯನ್ನು ಕೂಡಾ ರದ್ದುಪಡಿಸಲಾಗಿದ್ದು ಇದೇ ನಿಯಮ ಸೋಡಿಗದ್ದೆ ದೇವಸ್ಥಾನಕ್ಕೂ ಅನ್ವಯಿಸಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸರಕಾರದ ಹೊಸ ಮಾರ್ಗಸೂಚಿಯಂತೆ ಎಲ್ಲರೂ ನಡೆದುಕೊಳ್ಳಬೇಕಾಗಿದ್ದು ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದರು.
ಈಗಿನ ಮಾಹಿತಿಯ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಕೊರೊನಾ ಸೋಂಕಿನ ಪ್ರಭಾವ ಕಡಿಮೆ ಇರುತ್ತದೆ. ಲಸಿಕೆ ಪಡೆಯದವರು ಕೊರೊನಾ ಸೋಂಕಿನಗೆ ಒಳಗಾದರೆ ಅಂತವರಿಗೆ ಸ್ವಲ್ಪ ತೀವ್ರ ತರಹದ ಲಕ್ಷಣ ಕಾಣುತ್ತಿದ್ದು ಆಸ್ಪತ್ರೆಗೆ ದಾಖಲಾಗ ಬೇಕಾದ ಪ್ರಸಂಗ ಕೂಡಾ ಬರಬಹುದು ಎಂದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ನೋಡಿಕೊಂಡು ಜಿಲ್ಲಾಧಿಕಾರಿಗಳು ಕಾಲ ಕಾಲಕ್ಕೆ ಮಾರ್ಗಸೂಚಿಯನ್ನು ನೀಡುತ್ತಿದ್ದು ಅದನ್ನು ಪ್ರತಿಯೋರ್ವರು ಪಾಲಿಸಿದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟಲು ಸಹಾಯಕವಾಗುವುದು ಎಂದರು.
ಸಭೆಯಲ್ಲಿ ತಹಸೀಲ್ದಾರ ಎಸ್. ರವಿಚಂದ್ರ ಭಟ್ಕಳ, ಗ್ರಾಮಾಂತರ ವೃತ್ತ ನಿರೀಕ್ಷಕ ಮಹಾಬಲೇಶ್ವರ ನಾಯ್ಕ, ಮುರ್ಡೇಶ್ವರ ಸಬ್ ಇನ್ಸಪೆಕ್ಟರ್ ರವೀಂದ್ರ ಬಿರಾದಾರ, ಮ್ಹಾತೋಬಾರ ಶ್ರೀ ಮುರ್ಡೇರ್ವಶರ ದೇವಸ್ಥಾನದ ನಾಗರಾಜ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.