ಮಳೆ ನೀರಲ್ಲಿ ಕೊಚ್ಚಿ ಹೋದ ಇಬ್ಬರು: ಕುಟುಂಬದವರನ್ನು ಸಂತೈಸಿದ ಸಚಿವ ಕೃಷ್ಣ ಬೈರೇಗೌಡ‌


Team Udayavani, Jul 8, 2023, 6:09 PM IST

ಮಳೆ ನೀರಲ್ಲಿ ಕೊಚ್ಚಿ ಹೋದ ಇಬ್ಬರು ಕುಟುಂಬದವರನ್ನು ಸಂತೈಸಿದ ಸಚಿವ ಕೃಷ್ಣ ಬೈರೇಗೌಡ‌

ಕಾರವಾರ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಕಳೆದ ಗುರುವಾರ ಮೃತಪಟ್ಟ ಸತೀಶ್ ಪಿ.ನಾಯ್ಕ, ಉಲ್ಲಾಸ್ ಜಟ್ಟಿ ಗಾವುಡಿ ಕುಟುಂಬದ ಸದಸ್ಯರನ್ನು ಸಂತೈಸಿದ  ಕಂದಾಯ ಸಚಿವ ಕೃಷ್ಣ ಬೈರೇಗೌಡ‌ ಅವರು ಎರಡೂ ಕುಟುಂಬದವರಿಗೆ ತಲಾ ಐದು ಲಕ್ಷ ರೂ.ಪರಿಹಾರ ವಿತರಿಸಿದರು‌.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅನಾಹುತ ಸೃಷ್ಟಿಸಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜುಲೈ ಕೊನೆ ವಾರದವರಗೆ ಕಾದು ನೋಡಿ, ಮೋಡ ಬಿತ್ತನೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಯೋಚನೆ ಮಾಡಲಾಗುತ್ತಿದೆ. ಮೋಡ ಬಿತ್ತನೆಯ ಪರಿಣಾಮ ತಿಳಿದು, ಮುಂದಿನ ಹೆಜ್ಜೆ ಇಡಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದ ಗದ್ದೆಗಳು ಜಲಾವೃತವಾಗಿರುವ ಪ್ರದೇಶವನ್ನು ಸಚಿವರು ವೀಕ್ಷಿಸಿದರು‌.

ನೆರೆ ಪೀಡಿತ ಪ್ರದೇಶಕ್ಕೆ ಬರುವ ಉದ್ದೇಶ ಅಧಿಕಾರಿಗಳ ವರ್ಗಕ್ಕೆ ಚುರುಕು ಮುಡಿಸುವುದಾಗಿದೆ. ಜನಪರವಾಗಿ ಅಧಿಕಾರಿಗಳು ಸಹ ಬದಲಾಗಬೇಕಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ಆದರೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳ ಸ್ಥಿತಿ ಭಿನ್ನವಾಗಿದೆ. ಮುಂಗಾರು ಮಳೆಗೆ ರಾಜ್ಯದಲ್ಲಿ 20 ಜನ ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ. ಹಲವು ಮನೆಗಳು ಹಾನಿಯಾಗಿವೆ ಎಂದರು‌.

ಹಾನಿಯಾದ ಮನೆಗೆ 1 ಲಕ್ಷ 25 ಸಾವಿರ ಪರಿಹಾರ ನೀಡಲಾಗುತ್ತಿದೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದೆ ಎಂದರು.

ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅವರ ಜೊತೆ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಸಿಇಒ ಈಶ್ವರ ಕಾಂದೂ ಇದ್ದರು.

ಟಾಪ್ ನ್ಯೂಸ್

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.