BJP ಶಿಸ್ತಿನ ಪಕ್ಷಕ್ಕೆ “ಅ” ಸೇರಿದೆ: ಶಾಸಕ ಶಿವರಾಮ ಹೆಬ್ಬಾರ್ ಟಾಂಗ್
Team Udayavani, Sep 2, 2024, 5:56 PM IST
ಶಿರಸಿ: ಶಿಸ್ತಿನ ಪಕ್ಷ ಎಂಬ ಪಟ್ಟ ಬಿಜೆಪಿಗೆ ಈಗಿಲ್ಲ. ಶಿಸ್ತಿನ ಶಬ್ಧದ ಬುಡದಲ್ಲಿ ಹಿಂದೆ “ಅ” ಸೇರಿದೆ ಎಂದು ಬಿಜೆಪಿಯ ರೆಬಲ್ ಶಾಸಕ ಶಿವರಾಮ ಹೆಬ್ಬಾರ್ ಟಾಂಗ್ ನೀಡಿದರು.
ಸೋಮವಾರ ಶಿರಸಿ ಗುಡ್ನಾಪುರದಲ್ಲಿ ಮಾತನಾಡಿದ ಅವರು, ಈಗ ಬಿಜೆಪಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿಯ ಹಿರಿಯ ನಾಯಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಯಡಿಯೂರಪ್ಪ ಮತ್ತು ಅವರ ಮಕ್ಕಳ ಬಗ್ಗೆ ವಿಧಾನಸೌಧದ ಒಳಗಡೆ ಮತ್ತು ಹೊರಗಡೆ ಏನೆಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಸಾವಿರಾರು ಕೋಟಿ ರೂ. ಪಡೆದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ. ಅವರನ್ನು ಏನು ಮಾಡಿದ್ದಾರೆ? ದೊಡ್ಡವರು ತಿಂದರೆ ಔಷಧ, ಬಡವರು ತಿಂದರೆ ಹೊಟ್ಟೆಗೆ ಹಿಟ್ಟಿಲ್ಲ ಎಂಬಂತಲ್ವಾ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.
ದೇಶಪಾಂಡೆ ಅವ್ರಾದರೆ ಸಂತೋಷ:
ಉತ್ತರಕನ್ನಡ ಜಿಲ್ಲೆಯಲ್ಲಿ ರಾಮಕೃಷ್ಣ ಹೆಗಡೆ ನಂತರ ಮತ್ತೆ ಮುಖ್ಯಮಂತ್ರಿ ಸ್ಥಾನ ಬರುತ್ತದೆ ಎಂದರೆ ಸಂತೋಷ. ರಾಜಕೀಯದ ದೃಷ್ಟಿಕೋನದಲ್ಲಿ ಚರ್ಚೆ ಮಾಡುವುದಿಲ್ಲ. ಜಿಲ್ಲೆಯ ಸರ್ವಾಂಗೀಣ ಪ್ರಗತಿ ಮತ್ತು ಅಭಿವೃದ್ಧಿಯಾಗಬೇಕು. ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಬಂದರೆ ಸ್ವಾಗತಿಸುತ್ತೇನೆ ಎಂದು ಆರ್.ವಿ.ದೇಶಪಾಂಡೆ ಅವರ ಪರವಾಗಿ ಪರೋಕ್ಷ ಬ್ಯಾಟಿಂಗ್ ಬೀಸಿದರು.
ನಾನು ಜನರ ನಡುವೆ ಇರುವವರು. ಜನರ ಉತ್ತರಕ್ಕಾಗಿ ಕಾಯುತ್ತೇವೆ. ಜನರು ಹೋಗು ಹೇಳಿದಾಗ ಹೋಗುತ್ತೇವೆ. ಅವರು ಇಟ್ಟುಕೊಂಡಾಗ ಅವರ ಕೆಲಸ ಮಾಡುತ್ತೇವೆ. ಇದರ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಚಿಂತೆ ಮಾಡುವ ಅವಶ್ಯಕತೆಯಿಲ್ಲ ಎಂದು ಪ್ರತ್ಯುತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.