ಕದಂಬೋತ್ಸವಕ್ಕೆ ದೇವಸ್ಥಾನಗಳಿಂದ ಹಣ ಸಂಗ್ರಹ!

Team Udayavani, Feb 3, 2020, 4:15 PM IST

UK-TDY-1

ಕಾರವಾರ/ಶಿರಸಿ: ಜಿಲ್ಲೆಯ ಬನವಾಸಿಯಲ್ಲಿ ಫೆ. 8 ಮತ್ತು 9ರಂದು ನಡೆಯಲಿರುವ ಕದಂಬೋತ್ಸವಕ್ಕೆ ಜಿಲ್ಲೆಯ ದೇವಾಲಯಗಳಿಂದ ದೇಣಿಗೆ ಸಂಗ್ರಹಿಸಿ, ಆ ಹಣವನ್ನು ಉತ್ಸವಕ್ಕೆ ಬಳಸಲು ಮುಂದಾಗಿರುವ ಮುಜರಾಯಿ ಇಲಾಖೆಯ ಅಧಿಕಾರಿಯ ಕ್ರಮ ವಿವಾದ ಹುಟ್ಟುಹಾಕಿದೆ.

ಕದಂಬೋತ್ಸವ ಆರಂಭವಾಗಿ 25 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಸರ್ಕಾರ ನಿರ್ಧರಿಸಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕಿ ಕೇಜ್‌, ಖ್ಯಾತ ನಟ ರಕ್ಷಿತ್‌ ಶೆಟ್ಟಿ, ಸಂಗೀತ ನಿರ್ದೇಶಕ ಅರ್ಜುನ ಜನ್ಯ ಹಾಗೂ ಕೊಳಲು ವಾದಕ ಪ್ರವೀಣ ಗೋಡ್ಕಿಂಡಿ ಸೇರಿದಂತೆ ಅನೇಕ ಕಲಾವಿದರು ಇಲ್ಲಿ ಕಾರ್ಯಕ್ರಮ ನೀಡಲಿದ್ದಾರೆ.  ಕಾರ್ಯಕ್ರಮಕ್ಕೆ ಲಕ್ಷಾಂತರ ರೂ. ವ್ಯಯಿಸಲಾಗುತ್ತಿದೆ. ಪಂಪ ಪ್ರಶಸ್ತಿ ಪ್ರದಾನ ಸಮಾರಂಭ ಸಹ ಕದಂಬೋತ್ಸವ ವೇದಿಕೆಯಲ್ಲಿ ನಡೆಯಲಿದೆ.

ಆದರೆ ಕದಂಬೋತ್ಸವಕ್ಕೆ ಉದ್ಯಮಿಗಳು, ಕಾರ್ಪೊರೇಟ್‌ ಕಂಪನಿಗಳಿಂದ, ಜಿಲ್ಲೆಯ ಕೈಗಾರಿಕೆಗಳಿಂದ, ಉಸುಕು, ಕಲ್ಲುಗಣಿ ಉದ್ಯಮಿಗಳಿಂದ ಮೊದಲು ಹಣ ಸಂಗ್ರಹಿಸಲಾಗುತ್ತಿತ್ತು. ಇದು ಕೆಲ ಅಕ್ರಮ ಚಟುವಟಿಕೆಗಳಿಗೆ ದಾರಿಯಾಗುತ್ತಿತ್ತು. ಈಗಿನ ಸರ್ಕಾರ ಇಂಥ ಅಕ್ರಮಗಳಿಗೆ ಅವಕಾಶ ನೀಡುತ್ತಿಲ್ಲ. ಹಾಗಾಗಿ ಹಣದ ಸಂಗ್ರಹ ಸಹ ಕಷ್ಟವಾಗಿದೆ. ಜೊತೆಗೆ ಆರ್ಥಿಕ ಕುಸಿತ ಕಾರಣವಾಗಿ ಉದ್ಯಮಿಗಳ ದಾನ ಸಹ ಮೊದಲಿನಂತಿಲ್ಲ. ಹಾಗಾಗಿ ದೇವಾಲಯಗಳ ಹುಂಡಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿರುವುದು ಮುಜರಾಯಿ ಇಲಾಖೆಯ ದೇವಾಲಯ ಸಮಿತಿಗಳಿಗೆ ಬರೆದಿರುವ ಪತ್ರದಿಂದ ಎದ್ದು ಕಾಣುತ್ತಿದೆ.

ದೇವಾಲಯಗಳ ಸಮಿತಿಗೆ ಪತ್ರ: ಉತ್ಸವಕ್ಕೆ ಹಣ ಹೊಂದಿಸುವುದಕ್ಕಾಗಿ ಮುಜರಾಯಿ ಇಲಾಖೆ ಹಾಗೂ ಪ್ರವಾಸೋಧ್ಯಮ ಎರಡೂ ಇಲಾಖೆಗಳ ಪ್ರಭಾರಿ ಅ ಧಿಕಾರಿ ಜಿಲ್ಲೆಯ ಎ ಮತ್ತು ಬಿ ದರ್ಜೆಯ ಮುಜರಾಯಿ ದೇವಾಲಯಗಳಿಂದ ದೇಣಿಗೆ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗೆ ಪತ್ರ ಬರೆದು, ಕದಂಬೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಣಯಿಸಲಾಗಿದ್ದು, ಜಿಲ್ಲಾಡಳಿತದ ಎಲ್ಲ ಇಲಾಖೆಗಳ ಸಹಯೋಗದಿಂದ ಉತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎ ಮತ್ತು ಬಿ ವರ್ಗದ ದೇವಸ್ಥಾನಗಳಿಂದ ದೇಣಿಗೆ ಸಂಗ್ರಹಿಸಲು ಉದ್ದೇಶಿಸಿದ್ದು, ದೇವಸ್ಥಾನದ ನಿಧಿಯಿಂದ ಜಿಲ್ಲಾಧಿಕಾರಿ ಉತ್ತರಕನ್ನಡ ಕಾರವಾರ ಇವರ ಹೆಸರಿಗೆ ರೂ. 1 ಲಕ್ಷ ಮೊತ್ತದ ಚೆಕ್‌ನ್ನು ಸಲ್ಲಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪತ್ರದಲ್ಲಿ ಸೂಚಿಸಿದ್ದಾರೆ.

ಸಹಾಯಕ ಆಯಕ್ತರ ಈ ನಿರ್ಣಯ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಈಗಾಗಲೇ ಶಿರಸಿಯ ಮಾರಿಕಾಂಬಾ ದೇವಾಲಯದ ಆಡಳಿ ಮಂಡಳಿ ನಾಲ್ಕು ಲಕ್ಷ ರೂ. ದೇಣಿಗೆ ನೀಡಿದ್ದು, ಅನೇಕ ದೇವಾಲಯಗಳ ಸಮಿತಿಗಳೂ ಲಕ್ಷ ರೂ. ದೇಣಿಗೆ ನೀಡಿವೆ. ಭಕ್ತರು ದೇವರಿಗೆ ಹಾಕಿದ ಕಾಣಿಕೆ ಆ ದೇವಾಲಯಗಳ ಅಭಿವೃದ್ಧಿಗೆ ಬಳಸಬೇಕು. ಅದು ಬಿಟ್ಟು ಭಕ್ತರ ಹಣ ಉತ್ಸವದಂತ ಮೋಜು ಮಸ್ತಿಗೆ ಬಳಸುವುದೇಷ್ಟು ಸರಿ. ಸರ್ಕಾರದ ಅನುದಾನ ಪಡೆಯುವ ಅನ್ಯ ಧರ್ಮಿಯರ ಧಾರ್ಮಿಕ ಸಂಸ್ಥೆಗಳಿಂದ ಯಾಕೆ ದೇಣಿಗೆ ಸಂಗ್ರಹಿಸಲಾಗುತ್ತಿಲ್ಲ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬಂದಿದೆ.

ಕದಂಬೋತ್ಸಕ್ಕೆ ದೇಣಿಗೆ ನೀಡುವಂತೆ ಮುಜರಾಯಿ ಇಲಾಖೆಗಳ ವ್ಯಾಪ್ತಿಗೆ ಬರುವ “ಎ’ ಮತ್ತು “ಬ’ ವರ್ಗದ ದೇವಾಲಯಗಳ ಆಡಳಿತ ಸಮಿತಿಗೆ ಪತ್ರ ಬರೆದಿರುವುದು ನಿಜ. ಆದರೆ ಕಡ್ಡಾಯವಾಗಿ ನೀಡುವಂತೆ ಯಾರನ್ನೂ ಒತ್ತಾಯಿಸಿಲ್ಲ. ಪುರುಷೋತ್ತಮ ಸಾತವಲ್ಲಿ,ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು –ಧರ್ಮದಾಯ ದತ್ತಿಗಳ ಇಲಾಖೆ, ಕಾರವಾರ.

ಟಾಪ್ ನ್ಯೂಸ್

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.