ಭಟ್ಕಳ: ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮೂಲಕ ತೀವ್ರಗೊಂಡ ಮೊಗೇರ ಸಮಾಜದ ಪ್ರತಿಭಟನೆ  

Team Udayavani, Apr 9, 2022, 12:11 PM IST

Untitled-1

ಭಟ್ಕಳ: ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿಯ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಮೊಗೇರ ಸಮಾಜ 18ನೇ ದಿನವಾದ ಶನಿವಾರದಂದು ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ಬೆಳಗ್ಗೆ ಇಲ್ಲಿನ ಆನಂದಾಶ್ರಮ ಕಾನ್ವೆಂಟ್ ಮೈದಾನದಲ್ಲಿ ಹೊರಟ ಅರೆಬೆತ್ತಲೆ ಮೆರವಣಿಗೆಯು ಶಂಶುದ್ಧೀನ್ ಸರ್ಕಲ್ ಮೂಲಕ ರಾಷ್ಟ್ರೀಯ ಹೆದ್ದಾರಿಯಾಗಿ ಧರಣಿ ಪ್ರದೇಶವನ್ನು ತಲುಪಿತು.  ತಾಲೂಕು ಆಡಳಿತ ಸೌಧ ತಲುಪುತ್ತಲೇ ಹಲವು ಯುವಕರು ಉರುಳು ಸೇವೆ ಆರಂಭಿಸಿದರು.

ಇದನ್ನು ಸಮಾಜದ ಹಲವು ಮುಖಂಡರು ತಡೆಯುವಷ್ಟರಲ್ಲಿಯೇ ಸೀತಾರಾಮ ಮೊಗೇರ ಎನ್ನುವವರು ತಾವು ಮೊದಲೇ ತಮ್ಮೊಂದಿಗೆ ತಂದಿದ್ದ ಸೀಮೆ ಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಸಿದರು. ತಕ್ಷಣ ಅಲ್ಲಿದ್ದ ಇತರರು ಅವರನ್ನು ತಡೆದು ತಕ್ಷಣ ಬೆಂಕಿಪೊಟ್ಟಣವನ್ನು ಕಸಿದುಕೊಂಡರು.  ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಬಂದೋಬಸ್ತಿಗಾಗಿ ಬಂದಿದ್ದ ಪೊಲೀಸರೂ ಕೂಡಾ ಧಾವಿಸಿ ಆತನ ರಕ್ಷಣೆಗೆ ಮುಂದಾದರು.  ಅಷ್ಟರಲ್ಲಾಗಲೇ ಸೀಮೆ ಎಣ್ಣೆ ಕಣ್ಣು, ಬಾಯಿಗೆ ಹೋಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ನಂತರ ಮೆರವಣಿಗೆಯಲ್ಲಿ ಬಂದ ಯುವಕರು, ಪುರುಷರು, ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ತಾಲೂಕು ಆಡಳಿತ ಸೌಧಕ್ಕೆ ಒಂದು ಪ್ರದಕ್ಷಿಣೆ ಬಂದು ನಂತರ ತಮ್ಮ ಧರಣಿ ಸ್ಥಳಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ನಾವು ಕಳೆದ 18 ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯನ್ನು ನಡೆಸುತ್ತಿದ್ದರೂ ಸಹ ನಮ್ಮ ಬೇಡಿಕೆಗೆ ಸ್ಪಂದಿಸದ ಸರಕಾರದ ನಿಲುವು ಸರಿಯಲ್ಲ.  ಪ್ರತಿ ದಿನವೂ ಕೂಡಾ ಪ್ರತಿಭಟನೆಯ ಕಾವು ಜಾಸ್ತಿಯಾಗುತ್ತಿದ್ದು ಸರಕಾರ ಕೂಡಲೇ ಕ್ರಮ ಕೈಗೊಂಡು ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಳಕೆ ಭಾಸ್ಕರ ಮೊಗೇರ ಅವರು ಸರಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡರು.  ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ, ಸರ್ವೋಚ್ಚ ನ್ಯಾಯಾಲಯದ ಆದೇಶವೂ ಕೂಡಾ ಗೌಣವಾಗಿದೆ.  ಅಧಿಕಾರಿಗಳೇ ಹೇಳಿದ್ದನ್ನು ಸರಕಾರ ಮಾಡುತ್ತದೆ. ನಮ್ಮ ತಾಳ್ಮೆಗೂ ಒಂದು ಮಿತಿ ಇದ್ದು ಯಾವುದೇ ಮುಂದಿನ ಅನಾಹುತಕ್ಕೆ ಸರಕಾರವೇ ಹೊಣೆಯಾಗಬೇಕಾಗುತ್ತದೆ. ಇನ್ನು ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ತೀವ್ರವಾಗುತ್ತಿದ್ದು ಅದಕ್ಕೆ ಸರಕಾರ ಅವಕಾಶ ಕೊಡಬಾರದು ಎನ್ನುವುದು ನಮ್ಮ ಕೋರಿಕೆಯಾಗಿದೆ. ತಕ್ಷಣ ನಮ್ಮ ಮನವಿಯನ್ನು ಪರಿಗಣಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸರಕಾರ ನೀಡಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಇಂದಿನ ಅರೆಬೆತ್ತಲೆ ಮೆರವಣಿಗೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಯುವಕರು ಭಾಗವಹಿಸಿದ್ದರೆ, ಮೆರವಣಿಗೆಯಲ್ಲಿ ಬೈಲೂರು, ಕೊಪ್ಪದಮಕ್ಕಿ, ಮಂಕಿ ಭಾಗದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.