Multi specialty Hospital; ಹಣ ಘೋಷಣೆಯಾಗದಿದ್ದಲ್ಲಿ ಸಚಿವ ವೈದ್ಯ ರಾಜೀನಾಮೆ ನೀಡಲಿ

ಸಾಮಾಜಿಕ ಹೋರಾಟಗಾರ, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹ

Team Udayavani, Feb 15, 2024, 8:41 PM IST

1-sadsad

ಶಿರಸಿ: ರಾಜ್ಯ ಸರ್ಕಾರ ಶುಕ್ರವಾರ ಈ ವರ್ಷದ ಬಜೆಟ್ ಮಂಡಿಸಲಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈ ಹಿಂದೆ ಘೋಷಣೆಯಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹಣ ಬಿಡುಗಡೆಗೆ ಘೋಷಣೆ ಮಾಡದಿದ್ದಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಂಪೂರ್ಣ ಜವಾಬ್ದಾರಿ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಹಲವಾರು ಹೋರಾಟಗಳನ್ನು ಮಾಡಿದ್ದು, ಜಿಲ್ಲೆಯ ಜನರು ಕೂಡಾ ಸೋಶಿಯಲ್ ಮೀಡಿಯಾ ಸೇರಿದಂತೆ ಅನೇಕ ಮಾಧ್ಯಮಗಳಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆದರೂ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಯಾವುದೇ ತರಹದ ಪ್ರಕ್ರಿಯೆ ನಡೆಯದಿರುವುದು ಶೋಚನೀಯ ಸಂಗತಿ. ಈ ಎಲ್ಲಾ ಹೋರಾಟಗಳು ತಮ್ಮ ಗಮನಕ್ಕೆ ಬಂದಿರಲಿಲ್ಲವೇ? ಕಳೆದ ಕೆಲ ದಿನಗಳ ಹಿಂದೆ ಕುಮಟಾದಿಂದ ಭಟ್ಕಳದ ತಮ್ಮ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ನೂರಾರು ಜನರು ಬಂದು ತಮ್ಮ ಕಛೇರಿಯ ಸಿಬ್ಬಂದಿಗೆ ಮನವಿ ನೀಡಿದ್ದೇವೆ ಇದು ತಮ್ಮ ಗಮನಕ್ಕೆ ಬಂದಿರಲೇಬೆಕು ಎಂದು ಭಾವಿಸಿದ್ದು ಆದರೆ ತಾವುಗಳು ಈ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ಇದು ನಿಮಗೆ ನಿರ್ಲಕ್ಷದ ವಿಷಯವೇ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಜನರಿಗೆ ಹೇಳಿದ್ದನ್ನು ನೆನಪಿಸಿದ ಅನಂತಮೂರ್ತಿ ಅವರು, ಕ್ಷೇತ್ರದ ಶಾಸಕರಾಗಿ ಈಗ ಜಿಲ್ಲಾ ಉಸ್ತುವಾರಿ ಸಚಿವರು ಆಗಿದ್ದಾಗಿದೆ. ಸ್ವಂತ ಖರ್ಚಿನಲ್ಲಿ ಹೋಗಲಿ ಸರ್ಕಾರದಿಂದ ಮಂಜೂರಾದ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸಲು ತಾವು ಯಾವುದೇ ರೀತಿಯಲ್ಲೂ ಪ್ರಯತ್ನ ಮಾಡದಿರುವುದು ಶೋಚನೀಯ ಸಂಗತಿ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಒಂದು ಸಭೆ ನಡೆಸದಿರುವುದು ಇದರಿಂದ ತಿಳಿಯುತ್ತದೆ. ಜಿಲ್ಲೆಯ ಜನರ ಕಷ್ಟಗಳು ತಮಗೆ ಅರಿವಿಗೆ ತಿಳಿದಿಲ್ಲವೇ? ಇನ್ನೂ ಎಷ್ಟು ವರ್ಷ ಜಿಲ್ಲೆಯ ಜನರು ಆಸ್ಪತ್ರೆಗಾಗಿ ಪಕ್ಕದ ಜಿಲ್ಲೆ ಅಥವಾ ಪಕ್ಕದ ರಾಜ್ಯಗಳಿಗೆ ಅಲೆಯಬೇಕು. ತಮ್ಮ ಸರ್ಕಾರದಿಂದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಜಿಲ್ಲೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಘೋಷಣೆಯಾಗುತ್ತದೆ ಎಂದು ನಂಬಿದ್ದೇವೆ. ಒಂದು ವೇಳೆ ಘೋಷಣೆಯಾಗದಿದ್ದರೆ ತಾವು ಇದಕ್ಕೆ ಸಂಪೂರ್ಣ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಸ್ಪತ್ರೆ ನಿರ್ಮಾಣ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಮುಂದಿನ ದಿನಗಳಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುವುದರೊಂದಿಗೆ ತಮ್ಮ ಕಚೇರಿ ಹಾಗೂ ಬೆಂಗಳೂರಿನ ವಿಧಾನಸೌಧ ಎದುರು ಗಾಂಧಿ ಪ್ರತಿಮೆಯ ಬಳಿ ಜಿಲ್ಲೆಯ ನೂರಾರು ಜನರು, ಯುವಕರೊಂದಿಗೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಮಗೆ ಈ ಮೂಲಕ ಎಚ್ಚರಿಕೆ ನೀಡುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.