ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ


Team Udayavani, Nov 23, 2024, 6:05 PM IST

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಉದಯವಾಣಿ ಸಮಾಚಾರ
ಮುಂಡಗೋಡ: ಪಟ್ಟಣದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶುಕ್ರವಾರ ಮತ್ತೆ 50 ವಿದ್ಯಾರ್ಥಿಗಳಿಗೆ ಮಂಗನ ಬಾವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿ ಸೂಚನೆ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಮೂರು ದಿನ ಶಾಲೆಗೆ ರಜೆ ಘೋಷಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಎಂಟು ವಿದ್ಯಾರ್ಥಿಗಳಲ್ಲಿ ಮಂಗನಬಾವು ಕಾಣಿಸಿಕೊಂಡಿತ್ತು. ನಂತರ ಪ್ರತಿದಿನ ಒಬ್ಬರಿಂದ
ಒಬ್ಬರಿಗೆ ಹರಡುತ್ತ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಶಂಕಿತ ಮಂಗನಬಾವು ಕಾಯಿಲೆ ತೀವ್ರಗೊಂಡ
ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿರಸಿ ಸಹಾಯಕ ಕಮಿಷನರ್‌ ಕೆ.ವಿ. ಕಾವ್ಯಾರಾಣಿ, ತಹಶೀಲ್ದಾರ್‌ ಶಂಕರ ಗೌಡಿ, ತಾಪಂ ಇಒ ಟಿ.ವೈ.ದಾಸನಕೊಪ್ಪ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ವಸತಿ ಶಾಲೆಗೆ ಶುಕ್ರವಾರ ಭೇಟಿ ನೀಡಿದರು.

ಮಕ್ಕಳ ಮೇಲೆ ನಿಗಾ ಇಡಲು ಪ್ರಾಚಾರ್ಯರಿಗೆ ಸೂಚನೆ ಮಕ್ಕಳು ಮನೆಗೆ ತೆರಳಿದ ನಂತರ ಪ್ರತಿದಿನದ ಆರೋಗ್ಯ ಮಾಹಿತಿಯನ್ನು ಆರೋಗ್ಯ ಸಿಬ್ಬಂದಿಯೊಂದಿಗೆ ಹಂಚಿಕೊಳ್ಳಬೇಕು. ಒಂದು ವೇಳೆ ಔಷಧಿ, ಮಾತ್ರೆ ಮುಗಿದರೂ ಆರೋಗ್ಯ ಸುಧಾರಿಸದಿದ್ದರೆ ಅಂತಹ ಮಕ್ಕಳು ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಪಾಲಕರಿಗೆ ತಿಳಿಸಬೇಕು. ಮಕ್ಕಳು
ಆರೋಗ್ಯವಾಗುವರೆಗೂ ಅವರ ಮೇಲೆ ಪಾಲಕರು ನಿಗಾ ವಹಿಸಬೇಕು ಎಂದು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ|
ಸ್ವರೂಪರಾಣಿ ಪಾಟೀಲ ವಸತಿ ಶಾಲೆ ಪ್ರಾಚಾರ್ಯರಿಗೆ ಸೂಚಿಸಿದರು.

ಎಸಿ ಭೇಟಿ
ಶಿರಸಿ ಉಪವಿಭಾಗಧಿಕಾರಿ ಕೆ.ವಿ. ಕಾವ್ಯಾರಾಣಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವೈದ್ಯರು, ಶಿಕ್ಷಕರಲ್ಲಿ  ಮಾಹಿತಿ ಪಡೆದುಕೊಂಡರು. ಅಡುಗೆ ಕೋಣೆ, ಮಕ್ಕಳ ಕೊಠಡಿಗಳನ್ನು ವೀಕ್ಷಿಸಿ, ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಕರಿಗೆ ಸೂಚಿಸಿದರು.

ಮಕ್ಕಳನ್ನು ಕರೆದುಕೊಂಡು ಹೋದ ಪಾಲಕರು:ಪತ್ರಿಕೆಗಳಲ್ಲಿ ವಸತಿ ಶಾಲೆಯಲ್ಲಿ ಮಂಗನ ಬಾವು ಬಂದಿದೆ ಎಂದುವರದಿ ಪ್ರಕಟವಾಗುತ್ತಿದ್ದಂತೆ ಪಾಲಕರು ತಮ್ಮ ಮಕ್ಕಳನ್ನು
ಕರೆದುಕೊಂಡು ಹೋಗಲು ಶಾಲೆಯತ್ತ ದೌಡಾಯಿಸಿದರು. ಇನ್ನೂ ಕೆಲವು ವಿದ್ಯಾರ್ಥಿಗಳಿಗೆ ಪಾಲಕರನ್ನು ಫೋನ್‌ ಮೂಲಕ
ಕರೆಸಿ ಮಕ್ಕಳನ್ನು ಮನೆಗೆ ಕಳಿಸಿಕೊಡಲಾಯಿತು.

ವಿದ್ಯಾರ್ಥಿಗಳು ಈ ಕಾಯಿಲೆಯಿಂದ ಹೆದರುವ ಅವಶ್ಯಕತೆಯಿಲ್ಲ. ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು. ದ್ರವರೂಪದ ಆಹಾರ ಸೇವಿಸಬೇಕು. ಬಿಸಿ ನೀರು ಕುಡಿಯಬೇಕು. ಕೆಲವರಿಗೆ ಗಂಟಲು ಕೆರೆದು ಜ್ವರ ಬರುತ್ತದೆ. ಚಳಿಗಾಲದಲ್ಲಿ
ಬರುವುದು ಸಾಮಾನ್ಯ. ಮಂಗನ ಬಾವು ಬಗ್ಗೆ ಈಗಾಗಲೇ ಐದು ವಿದ್ಯಾರ್ಥಿಗಳ ರಕ್ತ ಹಾಗೂ ಗಂಟಲಿನ ದ್ರವ ತೆಗೆದು
ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ಔಷಧಿ, ಮಾತ್ರೆ ನೀಡುತ್ತಿದ್ದೇವೆ.
ಡಾ| ಕಿರಣಕುಮಾರ ಮಕ್ಕಳ ತಜ್ಞ

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲೆಗೆ ಮೂರು ದಿನ ರಜೆ ನೀಡಲಾಗಿದೆ. ಮಕ್ಕಳನ್ನು ಪಾಲಕರ ಜತೆ ಮನೆಗೆ ಕಳಿಸಬೇಕು. ಗುಣಮುಖರಾದ ನಂತರ ಶಿಕ್ಷಕರು ಸೂಚನೆ ನೀಡಿದ ನಂತರ ಮರಳಿ ಶಾಲೆಗೆ ಬರಬೇಕು.

ಶಂಕರ ಗೌಡಿ ತಹಶೀಲ್ದಾರ್‌, ಮುಂಡಗೋಡ

ಟಾಪ್ ನ್ಯೂಸ್

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.