Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ
Team Udayavani, May 13, 2024, 9:34 PM IST
ಮುಂಡಗೋಡ: ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಬೈಕಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ ಎಂದು ಗುರುತಿಸಲಾಗಿದೆ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅರವಿಂದ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ.
ಗಾಯಗೊಂಡವರನ್ನು ತಾಲೂಕಿನ ಕೊಪ್ಪ ಗ್ರಾಮದವರು ಎಂದು ತಿಳಿದುಬಂದಿದೆ. ತತ್ ಕ್ಷಣವೇ ಗಾಯಾಳುಗಳನ್ನು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ
ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.