ಉದ್ದೇಶಪೂರ್ವಕವಾಗಿಯೇ ಸಹೋದರನ ಪತ್ನಿ-ಮಗನ ಹತ್ಯೆ
Team Udayavani, Jul 29, 2019, 1:39 PM IST
ಅಂಕೋಲಾ: ಹತ್ಯೆಗೈದ ಆರೋಪಿಯನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಯಿತು.
ಅಂಕೋಲಾ: ಮಾಜಿ ಸೈನಿಕ ಉದ್ದೇಶಪೂರ್ವಕವಾಗಿ ತನ್ನ ಸಹೋದರನ ಪತ್ನಿ ಹಾಗೂ ಸಹೋದರನ ಮಗನ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಘಟನೆಯಿಂದ ಅಂಕೋಲಾ ತಾಲೂಕಿನ ಜನತೆ ಬೆಚ್ಚಿಬಿದ್ದಿದ್ದಾರೆ.
ಭೂ ಸೇನೆಯ ನಿವೃತ್ತ ಹವಾಲ್ದಾರ್ ಸುಬ್ರಾಯ ಪ್ರಭು ತನ್ನ ಮನೆಯಲ್ಲಿ ಆಗಾಗ ಆಸ್ತಿ ವಿಷಯದಲ್ಲಿ ಕುಟುಂಬದವರೊಂದಿಗೆ ತಕರಾರು ಮಾಡುತ್ತಿದ್ದ ಎನ್ನಲಾಗಿದೆ. ತನಗೆ ಬರಬೇಕಾದ ಆಸ್ತಿಯಲ್ಲಿ ಹಂಚಿಕೆ ಮಾಡದ ಕಾರಣದಿಂದ ಶನಿವಾರ ರಾತ್ರಿ 7:30ಕ್ಕೆ ತನ್ನ ಮನೆಯ ಮಹಡಿಯ ಕೆಳಗಿರುವ ಸಹೋದರನ ಮನೆಗೆ ಅಗಮಿಸಿ ಸಹೋದರ ಅಮೀತ ಪ್ರಭು ಪತ್ನಿ ಮೇಧಾ ಪ್ರಭು ಮಗನಿಗೆ ಮನೆಯಲ್ಲಿ ಪಾಠ ಹೇಳಿಕೊಡುತ್ತಿದ್ದ ವೇಳೆ ಏಕಾಏಕಿ ತನ್ನ ಲೈಯನ್ಸ್ ಹೊಂದಿರುವ 12 ಬೋರ, ಡಬಲ ಬ್ಯಾರೆಲ್ ಬಂದೂಕಿನಿಂದ ಎರಡು ಬಾರಿ ಗುಂಡು ಹಾರಿಸಿದ್ದಾನೆ. ಅನುಜ ಅಮಿತ ಪ್ರಭು (8) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈತನ ತಾಯಿ ಮೇಧಾ ಅಮಿತ ಪ್ರಭು (33) ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಹಳದಿಪುರ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಮೃತ ದೇಹದ ಮರಣೋತ್ತರ ಪರೀಕ್ಷೇಯನ್ನು ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗಿದೆ.
ಘಟನೆಗೆ ಬಳಸಿದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂದೂಕಿನಲ್ಲಿ ಇನ್ನೂ 29 ಗುಂಡುಗಳಿದ್ದು, ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂದೂಕಿನ ಪರವಾನಿಗೆ ಕೂಡ ರದ್ದು ಮಾಡಿದ್ದಾರೆ ಎಂದು ತಿಳಿದಿದೆ.
ಭಾನುವಾರ ಬೆಳಗ್ಗೆ ಸಿಪಿಐ ಪ್ರಮೋದ ಕುಮಾರ ತಂಡ ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆತಂದು ಪಂಚನಾಮೆ ನಡೆಸಿ ಆರೋಪಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ತಾನು ಉದ್ದೇಶ ಪೂರ್ವಕವಾಗಿಯೇ ಈ ಕೃತ್ಯ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ.
ವಿಧಿವಿಜ್ಞಾನ ತಂಡ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮಂಗಳೂರು ಮತ್ತು ಬೆಂಗಳೂರಿನಿಂದ ಅರುಣ ರಂಗಸ್ವಾಮಿ ನೇತೃತ್ವದ ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲಿಸಿದ್ದಾರೆ. ಜೊತೆಗೆ ಜಿಲ್ಲಾ ಶಶ÷ ನಿರ್ವಹಣಾ ತಂಡ ಬೆರಳಚ್ಚು ತಂಡದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಎಸ್ಪಿ ವಿನಾಯಕ ಪಾಟೀಲ, ಡಿವೈಎಸ್‌ಪಿ ಶಂಕರ ಮಾರಿಹಾಳ, ಸಿಪಿಐ ಬಿ. ಪ್ರಮೋದಕುಮಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ವಶಕ್ಕೆ ಪಡೆದ ಅಜಯ ಪ್ರಭುನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯದಲ್ಲಿ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.