ಮುರುಡೇಶ್ವರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲು: ಮೂವರ ರಕ್ಷಣೆ
Team Udayavani, Jun 10, 2022, 11:49 AM IST
ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಈಜಲು ತೆರಳಿದ್ದವರಲ್ಲಿ ಇಬ್ಬರು ನೀರು ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.
ಸುಶಾಂತ್ ಎಂ.ಎಸ್. (23) ಮೃತ ದುರ್ದೈವಿ. ಅಬ್ರಾರ್ ಶೇಖ್ (21) ನೀರಿನಲ್ಲಿ ನಾಪತ್ತೆಯಾದ ಯುವಕ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಸಮುದ್ರ ಸ್ನಾನಕ್ಕೆಂದು ತೆರಳಿರುವಾಗ ಇದ್ದಕ್ಕಿದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಇಬ್ಬರನ್ನು ರಕ್ಷಣೆ ಮಾಡಿದ್ದು, ಅಬ್ರಾರ್ ಶೇಖ್ ನೀರು ಪಾಲಾಗಿದ್ದಾನೆ.
ಇನ್ನೊಂದು ತಂಡ ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಪ್ರವಾಸಕ್ಕೆ ಬಂದಿದ್ದು, ಇವರಲ್ಲಿ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ, ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಯ ರಭಸಕ್ಕೆ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಓರ್ವನನ್ನು ರಕ್ಷಿಸಲು ಸಾಧ್ಯವಾಗಿದೆ. ಈ ವೇಳೆ ಸುಶಾಂತ್ ಮುಳುಗಿ ಸಾವನ್ನಪ್ಪಿದ್ದು, ಶವ ಪತ್ತೆಯಾಗಿದೆ. ಅಬ್ರಾರ್ ಅವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಅಬ್ರಾರ್ ಅವರ ಕುಟುಂಬಸ್ಥರು ಮುರುಡೇಶ್ವರ ತಲುಪಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ:ಪ್ರೀತಿ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಯುವತಿಗೆ ಮಾರಣಾಂತಿಕ ಹಲ್ಲೆ
ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಪರಮಾನಂದ ಕೋಣ್ಣುರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.