ಮೈಸೂರು ದಸರಾದಲ್ಲಿ ಮುರ್ಡೇಶ್ವರ ಮಧುಕೇಶ್ವರ ದೇವಾಲಯ ಪ್ರದರ್ಶನ
Team Udayavani, Sep 21, 2019, 11:26 AM IST
ಕಾರವಾರ: ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬಕ್ಕೆ ಉತ್ತರ ಕನ್ನಡದ ಟ್ಯಾಬ್ಲೋ ಮುರ್ಡೇಶ್ವರ ಮತ್ತು ಬನವಾಸಿಯ ಮಧುಕೇಶ್ವರ ದೇವಾಲಯದ ಪ್ರತಿಕೃತಿಗಳನ್ನು ಮಾಡಿ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಜಿಪಂ ಸಿಇಒ ರೋಶನ್ ತಿಳಿಸಿದ್ದಾರೆ.
ಜಿಲ್ಲೆಯ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರಗಳಾಗಿರುವ ಮುರ್ಡೇಶ್ವರ ಮತ್ತು ಬನವಾಸಿ ಮಧುಕೇಶ್ವರ ದೇವಾಲಯಗಳು ಐತಿಹಾಸಿಕ ಮಹತ್ವ ಹೊಂದಿವೆ. ಅಲ್ಲದೇ ರಾಜ್ಯದ ಪ್ರವಾಸಿಗರನ್ನು, ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯುತ್ತಿವೆ. ಮುರುಡೇಶ್ವರ ಪುರಾಣ ಪ್ರಸಿದ್ಧಿ ಪಡೆದಿದ್ದರೆ, ಬನವಾಸಿಯ ಮಧುಕೇಶ್ವರ ದೇವಾಲಯ ಕದಂಬ ಅರಸರ ಜೊತೆ ನಂಟು ಇದೆ. ಕದಂಬರು ಕನ್ನಡಿಗರನ್ನು ಆಳಿದ ಪ್ರಥಮ ರಾಜ ಮನೆತನ. ಅಲ್ಲದೇ ಪಂಪ ಮಹಾಕವಿ ಬನವಾಸಿಯನ್ನು ತನ್ನ ಕಾವ್ಯದಲ್ಲಿ ವರ್ಣಿಸಿದ್ದಾನೆ. ಹಾಗಾಗಿ ಬನವಾಸಿಯ ಚಿತ್ರವನ್ನು ಮೈಸೂರು ದಸರಾಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ. ಕಲಾವಿದರನ್ನು ಶನಿವಾರ ನಿರ್ಧರಿಸಲಾಗುತ್ತಿದೆ.
ಟ್ಯಾಬ್ಲೋ ಹೇಗಿರಬೇಕು ಎಂಬುದನ್ನು ಸಹ ಶನಿವಾರ ನಿರ್ಣಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಲ್ಲಿ ಮುರ್ಡೇಶ್ವರ ಮತ್ತು ಬನವಾಸಿ ಪ್ರಮುಖ ಸ್ಥಾನ ಪಡೆದಿವೆ. ಈ ಧಾರ್ಮಿಕ ಮತ್ತು ಸಾಹಿತ್ಯಿಕ ಪ್ರಮುಖ ತಾಣಗಳನ್ನು ಪ್ರವಾಸೋದ್ಯಮವನ್ನು ಮತ್ತಷ್ಟು ಪ್ರಚುರ ಪಡಿಸುವ ದೃಷ್ಟಿಯಿಂದ ಟ್ಯಾಬ್ಲೋ ಮಾಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.