ಸಹಕಾರಿ ರಂಗದಲ್ಲಿ ರಾಜಕೀಯ ಪ್ರವೇಶ ಸಲ್ಲ
ಬೆಳಕೆ ವ್ಯವಸಾಯ ಸೇವಾ ಸಹಕಾರಿ ಸಂಘ ನೂತನ ಕಟ್ಟಡ ಉದ್ಘಾಟನೆ
Team Udayavani, May 16, 2022, 5:50 PM IST
ಭಟ್ಕಳ: ಸಹಕಾರಿ ಕ್ಷೇತ್ರದಲ್ಲಿ ಉತ್ತಮವಾಗಿ ಬೆಳವಣಿಗೆ ಹೊಂದಲು ಬೆಳಕೆ ವ್ಯವಸಾಯ ಸೇವಾ ಸಹಕಾರಿ ಸಂಘವು ಒಂದು ಉತ್ತಮ ಮಾದರಿಯಾಗಿದೆ ಎಂದು ರಾಜ್ಯ ಸರಕಾರದ ಕಾರ್ಮಿಕ ಸಚಿವ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಟಾರ್ ಹೇಳಿದರು.
ಅವರು ಬೆಳಕೆ ವ್ಯವಸಾಯ ಸೇವಾ ಸಹಕಾರಿ ಸಂಘ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಹಕಾರಿ ರಂಗದಲ್ಲಿ ರಾಜಕೀಯ ಪ್ರವೇಶ ಸಲ್ಲ, ರಾಜಕೀಯ ಚುನಾವಣೆಗಷ್ಟೇ ಸೀಮಿತವಾಗಿರಬೇಕು ಎಂದೂ ಹೇಳಿದರು. ಸರಕಾರ ವೈದ್ಯನಾಥ ವರದಿಯ ನಂತರ ಸರಕಾರಿ ಕ್ಷೇತ್ರ ಸ್ವತಂತ್ರ ಕಾರ್ಯನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿದ್ದು ಇಂದು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳಾಗಿದ್ದು ಸ್ವತಂತ್ರ ನಿರ್ವಹಣೆಗೆ ಸಹಕಾರಿಯಾಗಿದೆ ಎಂದೂ ಹೇಳಿದರು. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತಮವಾಗಿ ಬೆಳೆದಿದ್ದು ಕೆಡಿಸಿಸಿ ಬ್ಯಾಂಕಿಗೆ 102 ವರ್ಷಗಳ ಇತಿಹಾಸವಿದ್ದು ಜಿಲ್ಲೆಯ ಅನೇಕ ಧುರೀಣರು ಈ ಬ್ಯಾಂಕನ್ನು ಮುನ್ನಡೆಸಿದ್ದಾರೆ ಎಂದ ಅವರು, ಜಿಲ್ಲೆಯ ಸಹಕಾರಿಗಳ ಸಹಕಾರವೂ ಕೆಡಿಸಿಸಿ ಬ್ಯಾಂಕಿನ ಬೆಳವಣಿಗೆಯಲ್ಲಿ ಮುಖ್ಯಪಾತ್ರ ವಹಿಸಿದೆ ಎಂದೂ ಹೇಳಿದರು.
ಸಂಘದ ನೂತನ ಕಟ್ಟಡ ಉದ್ಘಾಟಿಸಿದ ಉಜಿರೆಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಪ್ರತಿಯೊಬ್ಬರೂ ಧರ್ಮವನ್ನು ಪಾಲಿಸಿದರೆ, ಅಲ್ಲಿ ಸುಖ, ಸಂತೋಷ, ಅಭಿವೃದ್ಧಿಯಿರುತ್ತದೆ. ಇದು ಒಂದು ಹಣಕಾಸು ಸಂಸ್ಥೆಯಾಗಿದ್ದು ಇಲ್ಲಿ ಹಣಕಾಸು ಧರ್ಮ ಪಾಲನೆ ಮುಖ್ಯವಾಗಿದೆ ಎಂದರು.
ಹಿಂದೆ ಖಾಸಗಿ ಬ್ಯಾಂಕುಗಳು ಉಳ್ಳವರ ಪಾಲಾಗಿದ್ದುದರಿಂದ ಕೇಂದ್ರ ಸರಕಾರ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಎಲ್ಲರ ಬ್ಯಾಂಕಾಗಿಸಿತು. ನಂತರದ ದಿನಗಳಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದಿದ ಸಹಕಾರಿ ಕ್ಷೇತ್ರದಿಂದಾಗಿ ಜನ ಸಾಮಾನ್ಯರು ತಮ್ಮ ತುರ್ತು ಅವಶ್ಯಕತೆಗೆ ಸಹಕಾರಿ ಬ್ಯಾಂಕ್‌ಗಳನ್ನು ನಂಬುವಂತಾಗಿದೆ. ಜನಸಾಮಾನ್ಯರಿಗೆ ತುರ್ತು ಅವಶ್ಯಕತೆಗೆ ಸ್ಪಂದಿಸುವ ಸಹಕಾರಿ ಸಂಘಗಳು ಎಲ್ಲಾ ರೀತಿಯ ಸೇವೆ ನೀಡುವ ಮೂಲಕ ಜನರನ್ನು ತಲುಪಲು ಯಶಸ್ವಿಯಾಗಿವೆ ಎಂದರು.
ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯ್ಕ, ಬೆಳಕೆ ಗ್ರಾಪಂ ಅಧ್ಯಕ್ಷೆ ಶಾಂತಿ ಮೊಗೇರ, ಕುಮಟಾ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗಭೂಷಣ ಕಲ್ಮನೆ, ಉಪಾಧ್ಯಕ್ಷ ನಾರಾಯಣ ನಾಯ್ಕ, ನಿರ್ದೇಶಕರಾದ ವಾಸು ನಾಯ್ಕ, ಕೃಷ್ಣ ಮೊಗೇರ, ಪಾಂಡುರಂಗ ನಾಯ್ಕ, ದೇವಯ್ಯ ನಾಯ್ಕ, ದೇವಾನಂದ ಮೊಗೇರ, ರಮೇಶ ಗೊಂಡ, ಮಹಾದೇವ ನಾಯ್ಕ, ನಾಗೇಶ ನಾಯ್ಕ, ವೆಂಕಟೇಶ ನಾಯ್ಕ, ಲಲಿತಾ ನಾಯ್ಕ, ಜ್ಯೋತಿ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
ಸುದೀರ್ಘ ಸೇವೆ ಸಲ್ಲಿಸಿದ್ದ ದಿ| ಎಂ.ಎಸ್. ನಾಯ್ಕ ಬೆಳಕೆ ಅವರ ಹೆಸರಿನ ಸಭಾ ಭವನವನ್ನು ಉದ್ಘಾಟಿಸಲಾಯಿತು. ಸಂಘಕ್ಕೆ ನಿವೇಶನ ಕೊಡಿಸುವಲ್ಲಿ ಸಹಕರಿಸಿದ್ದ ಮಾಜಿ ಶಾಸಕ ಮಂಕಾಳ ವೈದ್ಯ, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಹಾಲಿ ಅಧ್ಯಕ್ಷ ಮಂಜುನಾಥ ನಾಯ್ಕ, ಮುಖ್ಯ ಕಾರ್ಯನಿರ್ವಾಹಕ ಅಣ್ಣಪ್ಪ ನಾಯ್ಕ ಅವರನ್ನು ಸಹ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮಂಜುನಾಥ ಲಚ್ಮಯ್ಯ ನಾಯ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಣ್ಣಪ್ಪ ನಾಯ್ಕ ಸಂಘದ ವರದಿ ವಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.