ವಾಲ್ಮೀಕಿ ಜಯಂತಿಗೆ ಅಧಿಕಾರಿಗಳ ಹಾಜರಾತಿ ಕಡ್ಡಾಯ: ಜಿಲ್ಲಾಧಿಕಾರಿ
Team Udayavani, Oct 7, 2019, 1:32 PM IST
ಕಾರವಾರ: ಅ. 13ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದೊಂದಿಗೆ ಎಲ್ಲ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್ ಕುಮಾರ್ ಕೆ. ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ವಾಲ್ಮೀಕಿ ಜಯಂತಿ ಅ.13 ರಂದು ಆಚರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮುನ್ನ ನಡೆಯುವ ಮೆರವಣಿಗೆ ಹಾಗೂ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಮುದಾಯದವರೂ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದರು.
ಡಿಸಿ ಕಚೇರಿಯಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ ನಗರದ ವಿವಿಧ ರಾಜಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಶಿಷ್ಟಾಚಾರದಂತೆ ಎಲ್ಲ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಹಾಗೂ ವಿಶೇಷ ಉಪನ್ಯಾಸ, ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸುವುದು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಗಳ ವಿತರಣೆಗೆ ಕ್ರಮ ವಹಿಸುವಂತೆ ಅವರು ಸೂಚಿಸಿದರು. ವಿವಿಧ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.