ಹಳೆ ಪಿಂಚಿಣಿ ವ್ಯವಸ್ಥೆ ರದ್ದು: ಡಿ.19 ರಿಂದ ನಡೆಯುವ ಪ್ರತಿಭಟನೆಯಲ್ಲಿ ಭಾಗಿ; ಧರ್ಮಾನಂದ ಭಟ್ಟ
Team Udayavani, Dec 17, 2022, 1:22 PM IST
ಶಿರಸಿ: ರಾಜ್ಯ ಸರಕಾರಿ ನೌಕರರಿಗೆ ಏ.1 2006 ರಲ್ಲಿ ಹಳೆಯ ಪಿಂಚಿಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ನಿಶ್ಚಿತ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಿಂದ ಸರಕಾರಿ ನೌರಕರ ಸೇವಾ ಭದ್ರತೆ ಇಲ್ಲದಂತಾಗಿದೆ. ತಕ್ಷಣ ಸರಕಾರ ಇದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ಪ್ರಕಾಶ ಪೂಜಾರಿ, ತಾಲೂಕು ಘಟಕದ ಅಧ್ಯಕ್ಷ ಧರ್ಮಾನಂದ ಭಟ್ಟ ಹೇಳಿದರು.
ಅವರು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ, ಇದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಡಿ. 19 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿಗೆ ಮುಷ್ಕರ ನಡೆಸಲಿದ್ದೇವೆ. ಈ ಎನ್ ಪಿಎಸ್ ನಿಂದ ಸರಕಾರಿ ನೌರಕರ ಜೀವನಕ್ಕೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ಫಲಿತಾಂಶ ದೊರೆಯುವ ತನಕ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಿದ್ದೇವೆ ಎಂದೂ ಎಚ್ಚರಿಸಿದರು.
ಈಗಾಗಲೇ ಎನ್.ಪಿ.ಎಸ್. ರದ್ದತಿಗೆ ಹಲವು ಹೋರಾಟ ನಡೆಸಲಾಗಿದೆ. ಇದು ಕೊನೆಯ ಹೋರಾಟ ಎಂದು ನಡೆಸುತ್ತಿದ್ದೇವೆ. ಹಳೆ ಪಿಂಚಣಿ ವ್ಯವಸ್ಥೆ ಯನ್ನು ಪಡದೇ ತೀರಬೇಕು ಎಂದು ಹೊರಟಿದ್ದೇವೆ. ಮೊದಲ ಎರಡು ದಿನಗಳ ಕಾಲ ಎಲ್ಲಾ ಜಿಲ್ಲಾ ಘಟಕದಿಂದ ನೌಕರರು ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ನಂತರ ರಾಜ್ಯ ಘಟಕದ ನಿರ್ದೇಶನದ ಮೇರೆಗೆ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಗಣೇಶ ಹೆಗಡೆ ಬಾಳಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಗುಡ್ಡದಮನೆ, ಜನಾರ್ಧನ ಮೊಗೇರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಪಟಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.