ಕಟ್ಟಡ ನಿರ್ಮಾಣಕ್ಕೆ ವಿರೋಧ
ಕಟ್ಟಡ ನಿರ್ಮಾಣಕ್ಕೆ ವಿರೋಧ •ಕ್ರೀಡಾಂಗಣದಲ್ಲಿ ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ
Team Udayavani, May 1, 2019, 1:32 PM IST
ಅಂಕೋಲಾ: ಅನಾದಿ ಕಾಲದಿಂದ ಶಾಲಾ ವಿದ್ಯಾರ್ಥಿಗಳು, ಊರ ನಾಗರಿಕರು, ಯುವಕ ಸಂಘದವರು ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಂಡು ಬಂದಿರುವ ಕ್ರೀಡಾಂಗಣದಲ್ಲಿ ಯಾವುದೇ ಕಟ್ಟಡ ಕಟ್ಟಬಾರದು ಎಂದು ಗೋಕರ್ಣ ಅರ್ಬನ್ ಬ್ಯಾಂಕಿನ ನಿರ್ದೇಶಕ ಮಹೇಶ ನಾಯಕ ಹೇಳಿದರು.
ಅವರು ಪ್ರಭಾರ ಉಪ ತಹಶೀಲ್ದಾರ್ ಎಸ್.ಟಿ ಹರಿಕಂತ್ರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಮಾದನಗೇರಿ ಹಿ.ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ಶಾಲೆ ಪ್ರಾರಂಭವಾದಾಗಿನಿಂದ ಇದೊಂದೇ ಕ್ರೀಡಾಂಗಣವಿದ್ದು ಅಂಕೋಲಾ ಮತ್ತು ಕುಮಟಾ ತಾಲೂಕಿನ ಕ್ರೀಡಾಸಕ್ತರು ಈ ಕ್ರೀಡಾಂಗಣದಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆಕಸ್ಮಿಕವಾಗಿ ಈ ಕ್ರೀಡಾಂಗಣದಲ್ಲಿಯೇ ರೈತಸಂಪರ್ಕ ಕೇಂದ್ರವನ್ನು ನಿರ್ಮಿಸುವ ಕಾರ್ಯಕ್ಕೆ ಕೃಷಿ ಇಲಾಖೆ ಮುಂದಾಗಿದೆ. ಕ್ರೀಡಾಂಗಣದ ಸ್ಥಳ ಬಿಟ್ಟು ಖಾಲಿ ಇರುವ ಸ್ಥಳದಲ್ಲಿ ರೈತ ಸಂಪರ್ಕ ಕೇಂದ್ರ ನಿರ್ಮಿಸಲಿ ಎಂದರು.
ಸಗಡಗೇರಿ ಗ್ರಾಪಂ ಸದಸ್ಯ ಸತೀಶ ಗೌಡ ಮಾತನಾಡಿ ಸಂಬಂದಪಟ್ಟ ಅಕಾರಿಗಳು ಈ ಕುರಿತು ಗಮನಹರಿಸಿ ಕ್ರೀಡಾಂಗಣವನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದರು. ಸಗಡಗೇರಿ ಗ್ರಾಪಂ ಮಾಜಿ ಉಪಾದ್ಯಕ್ಷ ನಾಗರಾಜ ನಾಯಕ ಮಾತನಾಡಿ ಬಳಲೆ ಮತ್ತು ಮಾದನಗೇರಿಯ ಈ ಕ್ರೀಡಾಂಗಣ ಬಹಳ ಹಳೆಯ ಕ್ರೀಡಾಂಗಣವಾಗಿದ್ದು ಅಧಿಕಾರಿಗಳು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಮುಂದಾಗಲಿ ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರ ನಾಯ್ಕ, ಎನ್.ಜಿ. ಅಂಬಿಗ, ರಮೇಶ ಲಮಾಣಿ, ಗ್ರಾಮ ಲೆಕ್ಕಾಧಿಕಾರಿ ಸಿ.ಎನ್ ಗುನಗಾ, ತೊರ್ಕೆ ಗ್ರಾಪಂ ಸದಸ್ಯ ನಾರಾಯಣ ನಾಯ್ಕ, ಗೋಕರ್ಣ ಅರ್ಬನ್ ಬ್ಯಾಂಕ್ ನಿರ್ದೇಶಕ ತಿಮ್ಮಣ್ಣ ನಾಯಕ, ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷ ರಾಜು ಹರಿಕಂತ್ರ, ಸದಸ್ಯ ಕೇಶವ ಗೌಡ, ಕಿರಣ ಹೊಸಕಟ್ಟಾ, ಗುರು ಗೌಡ, ಸುದಾಕರ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.