ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ


Team Udayavani, Sep 13, 2024, 3:22 PM IST

ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ

■ ಉದಯವಾಣಿ ಸಮಾಚಾರ
ಶಿರಸಿ: ರಾಜ್ಯ ಸರ್ಕಾರ ಶರಾವತಿ ಭೂಗತ ಜಲವಿದ್ಯುತ್‌ ಯೋಜನೆ ಕೈಬಿಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ
ಸಾಗಿಸುವ ಯೋಜನೆ ಕೈಗೆತ್ತಿಕೊಳ್ಳಬಾರದು. ಶರಾವತಿ ನದಿಗೆ ಅಘನಾಶಿನಿ ನದಿ ತಿರುಗಿಸುವ ಯೋಜನೆ ರೂಪಿಸುವ ಹಿಂಬಾಗಿಲ ಪ್ರಯತ್ನ ನಡೆದಿದೆ ಎಂದೂ ಹೇಳಿದರು.

ಅಘನಾಶಿನಿ ಕಣಿವೆ ಜನತೆ ಎಚ್ಚರದಿಂದ ಇರಬೇಕು. ಹಾವೇರಿ ಜಿಲ್ಲೆಯಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವರು ಆಶ್ವಾಸನೆ ನೀಡುತ್ತಿರುವ ಸಂಗತಿ ಬಗ್ಗೆ ಬೇಡ್ತಿ ಕಣಿವೆ ಜನತೆ ಜಾಗೃತಿ ವಹಿಸಬೇಕಿದೆ. ಪ್ರಚಲಿತ ಭೂ ಕುಸಿತ, ಮೇಘಸ್ಫೋಟ, ಮಲೆನಾಡಿನ ಮಹಾಮಳೆಯಿಂದ ಪಶ್ಚಿಮ ಘಟ್ಟ ತತ್ತರಗೊಂಡಿದೆ. ಇನ್ನಷ್ಟು ಬೃಹತ್‌ ಅಭಿವೃದ್ಧಿ
ಯೋಜನೆಗಳನ್ನು ತಡೆದುಕೊಳ್ಳುವ ಧಾರಣಾ ಸಾಮರ್ಥ್ಯ ಇಲ್ಲವಾಗಿದೆ ಎಂದರು. ಕರಾವಳಿ ತಿರದ ಮೀನುಗಾರರು, ರೈತರು ಉಪ್ಪು ನೀರು ಹೆಚ್ಚಾಗಿ ಅತಂತ್ರರಾಗುವ ಪರಿಸ್ಥಿತಿ ಬರಲಿದೆ.

ಶರಾವತಿ-ಅಘನಾಶಿನಿ ಕೆಳಭಾಗಕ್ಕೆ ಸಿಹಿನೀರು ಬಾರದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಧಾರಣಾ ಸಾಮರ್ಥ್ಯ ವರದಿ, ಶರಾವತಿ ಮತ್ತು ಅಘನಾಶಿನಿ ಕಣಿವೆ ಅಧ್ಯಯನ ವರದಿಗಳ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನ ಮಾಡಬೇಕು ಎಂದರು.

2021 ರ ಭೂಕುಸಿತ ಅಧ್ಯಯನ ವರದಿ ಶಿಫಾರಸು ಜಾರಿ ಮಾಡಬೇಕು. ಈಗಾಗಲೇ ಈ ಘಟ್ಟಗಳು ಸಡಿಲಗೊಂಡಿವೆ. ಬೃಹತ್‌ ಯೋಜನೆಗ ಳಿಂದ ಅರಣ್ಯ, ಪರಿಸರ, ವನ್ಯಜೀವಿ, ಜೀವವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿವೆ. ಜಲ, ಸಿಆರ್‌ ಜಡ್‌ ಮಾಲಿನ್ಯ ಮುಂತಾದ ಕಾನೂನು ಭಂಗ ಆಗುವ, ಶರಾವತಿ ಅಭಯಾರಣ್ಯ, ಅಘನಾಶಿನಿ ಸಂರಕ್ಷಿತ ಪ್ರದೇಶ, ಬೇಡ್ತಿ-ಶಾಲ್ಮಲಾ ಸಂರಕ್ಷಿತ ಪ್ರದೇಶಗಳು ಛಿದ್ರವಾಗಲಿದೆ ಎಂದರು.

ಕತ್ತಲೆಕಾನು, ಸಿಂಗಳೀಕ, ಕರಿಕಾನಬೆಟ್ಟ, ಯಾಣ ಶಿಖರ, ರಾಮ್‌ಸಾರ್‌ಸೈಟ್‌, ಮಿರಿಸ್ಟಿಕಾ ಸ್ಟಾಂಪ್ಸ್‌, ವಿನಾಶದ ಅಂಚಿನ ವೃಕ್ಷ ಸಮೂಹ ಸೇರಿ ಅಪಾರ ಸಸ್ಯ ವನ್ಯಜೀವಿಗಳ ಆವಾಸಕ್ಕೆ ಧಕ್ಕೆ ಬರಲಿದೆ. ಹಲವು ಅರಣ್ಯ ಬುಡಕಟ್ಟು ಜನಾಂಗದವರು ನೆಲೆ ಕಳೆದುಕೊಳ್ಳಲಿದ್ದಾರೆ ಎಂದರು.

ಮಲೆನಾಡಿಗೆ ಮಾರಕವಾದ ಬೃಹತ್‌ ಯೋಜನೆಗಳು ಬೇಡ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ ಅರಣ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ ಜಾರಿ ಮಾಡಬೇಕು ಎಂದು ರೈತರು, ಮೀನುಗಾರರು, ವನವಾಸಿಗಳು ಒತ್ತಾಯಿಸಿದ್ದಾರೆ. ಈ ಮೇಲಿನ ಎಲ್ಲ ಅಂಶಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಧ್ವನಿ ಎತ್ತಬೇಕು. ಮಲೆನಾಡಿನ ಜನಪ್ರತಿನಿಧಿಗಳು ಒಂದಾಗಿ ಹೋರಾಟ ನಡೆಸಬೇಕು. ಇದಕ್ಕಾಗಿ ವಿಧಾನ ಸಭೆ ವಿಶೇಷ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸಿದರು.

ಅರಣ್ಯ ಸಚಿವರು ಪಶ್ಚಿಮ ಘಟ್ಟದಲ್ಲಿ ಇಂತಹ ಬೃಹತ್‌ ಯೋಜನೆಗಳ ಅರಣ್ಯ ಪರವಾನಿಗೆ ನೀಡಬಾರದು. ವನ್ಯಜೀವಿ ಪರವಾನಗಿ ನೀಡಬಾರದು. ಶರಾವತಿ ಭೂಗತ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು. ಕೇಂದ್ರ ಪರಿಸರ ಅರಣ್ಯ ಮಂತ್ರಾಲಯ ಶರಾವತಿ ಅಘನಾಶಿನಿ, ಬೇಡ್ತಿ ಕಣಿವೆ ಪರಿಸ್ಥಿತಿ ಪರಿಶೀಲನೆಗೆ ಉನ್ನತ ಅಧಿಕಾರಿಗಳ ತಂಡ ಕಳಿಸಬೇಕು ಎಂದರು. ಈ ವೇಳೆ ವಕ್ಷಲಕ್ಷ ಆಂದೋಲನದ ವಿಶ್ವನಾಥ, ಗಣಪತಿ ಬಿಸಲಕೊಪ್ಪ ಇದ್ದರು.

ಪಶ್ಚಿಮ ಘಟ್ಟದಲ್ಲಿ ಹಲವು ಪರಿಸರ ನಾಶಿ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದ ವೇಳೆ ಹೋರಾಟದ
ಮೂಲಕ ಸ್ಥಗಿತಗೊಳಿಸಲಾಗಿದೆ.
●ಅನಂತ ಹೆಗಡೆ ಅಶೀಸರ,
ಅಧ್ಯಕ್ಷರು, ವೃಕ್ಷಲಕ್ಷ ಆಂದೋಲನ.

ಟಾಪ್ ನ್ಯೂಸ್

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.