![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 2, 2023, 7:46 PM IST
ಅಂಕೋಲಾ: ಇತ್ತೀಚೆಗಷ್ಟೆ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಗೌರವ ನೀಡಿ ಗೌರವಿಸಿದ ಪದ್ಮಶ್ರೀ ಡಾ. ತುಳಸಿ ಗೌಡರಿಗೆ ಮತ್ತೊಂದು ಡಾಕ್ಟರೇಟ್ ಗೌರವ ಅರಿಸಿ ಬಂದಿದ್ದು ಕಲಬುರ್ಗಿಯ ಶ್ರೀಸತ್ಯಸಾಯಿಬಾಬಾ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ವತಿಯಿಂದಲೂ ಗೌರವ ಡಾಕ್ಟರೇಟ್ ಗಾಗಿ ಪ್ರತಿಷ್ಠಿತರ ಸಾಲಿನಲ್ಲಿ ಡಾ. ತುಳಸಿ ಗೌಡ ಅವರ ಹೆಸರನ್ನು ಪ್ರಕಟಿಸಿದ್ದಾರೆ. ಇದರಿಂದಾಗಿ ತುಳಸಿ ಗೌಡರಿಗೆ ಡಬಲ್ ಡಾಕ್ಟರೇಟ್ ಗೌರವ ಸಿಕ್ಕಂತಾಗಿದೆ.
ಕಲಬುರ್ಗಿ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವ ಕಾರ್ಯಕ್ರಮ ಜುಲೈ 3 ರಂದು ಸಂಜೆ 4.30 ಕ್ಕೆ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಹಾಗೂ ಸಾಧನೆ ಮಾಡಿದ ದೇಶದ ಆರು ಜನ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು. ಅಂಥವರ ಸಾಲಿನಲ್ಲಿ ಪದ್ಮಶ್ರೀ ಡಾ.ತುಳಸಿ ಗೌಡ ಅವರು ಒಬ್ಬರಾಗಿರುವುದು ಅಂಕೋಲಾ ತಾಲೂಕಿಗೆ ಇನ್ನಷ್ಟು ಹಿರಿಮೆ ಬಂದಂತಾಗಿದೆ.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮಾ, ರಾಜ್ಯದ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ವಿಶ್ವ ವಿದ್ಯಾಲಯದ ಸಂಸ್ಥಾಪಕ ಸದ್ಗುರು ಮಧುಸೂಧನ ಸಾಯಿ, ಕುಲಪತಿ ಬಿ.ಎನ್. ನರಸಿಂಹಮೂರ್ತಿ, ಉಪ ಕುಲಪತಿ ಡಾ.ಶ್ರೀಕಾಂತ ಮೂರ್ತಿ ಪಾಲ್ಗೊಳಲಿದ್ದು, ಅಂಕೋಲಾ ತಾಲೂಕಿನ ಪದ್ಮಶ್ರೀ ತುಳಸಜ್ಜಿ ಇವರನ್ನು ಹಸಿರೀಕರಣ ಮತ್ತು ಸಮಾಜ ಸೇವೆಗಾಗಿ ಗುರುತಿಸಿ, ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.
ಇದನ್ನೂ ಓದಿ: BJP ‘ವಾಷಿಂಗ್ ಮೆಷಿನ್’ ಕಾರ್ಯಾಚರಣೆ ಪುನರಾರಂಭಗೊಂಡಿದೆ: ಕಾಂಗ್ರೆಸ್
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.