Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Team Udayavani, Nov 4, 2024, 11:26 AM IST
ದಾಂಡೇಲಿ: ಧಾರವಾಡದಿಂದ ದಾಂಡೇಲಿ ಗೆ ಬರುತ್ತಿದ್ದೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ಸೋಮವಾರ(ನ.4) ಬೆಳಿಗ್ಗೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ಕಲ್ಲೋಳಿಯವರ ಓಣಿ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಪುಂಡಲಿಕ್ ಚಂದರಗಿ ಎಂಬವರೇ ಹೃದಯಘಾತಕ್ಕೊಳಗಾದ ಪ್ರಯಾಣಿಕರಾಗಿದ್ದಾರೆ.
ಚಂದರಗಿ ಅವರು ಧಾರವಾಡದಿಂದ ಸಾರಿಗೆ ಬಸ್ಸಿನಲ್ಲಿ ದಾಂಡೇಲಿಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ದಾಂಡೇಲಿಗೆ ಬಸ್ ಬರುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ಇನ್ನಿತರ ಪ್ರಯಾಣಿಕರು ನಿರ್ವಾಹಕರಿಗೆ ಮಾಹಿತಿಯನ್ನು ನೀಡಿದ್ದಾರೆ. ಕುಳಿತಲ್ಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇವರು ಏನು ಮಾಡಿದರೂ ಎಚ್ಚರಗೊಳ್ಳದಿದ್ದಾಗ ಬಸ್ಸಿನ ನಿರ್ವಾಹಕ ತಕ್ಷಣವೇ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿಯನ್ನು ನೀಡಿ ಆಂಬುಲೆನ್ಸ್ ತರಿಸಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸಾರ್ವಜನಿಕ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಇವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.