ಹಳೆದಾಂಡೇಲಿಯ ಕೋವಿಡ್ ಲಸಿಕಾ ಕೇಂದ್ರದಲ್ಲಿ ನೂಕುನುಗ್ಗಲು:ಜನರ ನಿಯಂತ್ರಣಕ್ಕೆ ಪೊಲೀಸ್ ಪ್ರವೇಶ

Team Udayavani, Aug 11, 2021, 6:52 PM IST

ಹಳೆದಾಂಡೇಲಿಯ ಕೋವಿಡ್ ಲಸಿಕಾ ಕೇಂದ್ರದಲ್ಲಿ ನೂಕುನುಗ್ಗಲು:ಜನರ ನಿಯಂತ್ರಣಕ್ಕೆ ಪೊಲೀಸ್ ಪ್ರವೇಶ

ದಾಂಡೇಲಿ : ನಗರದ ವಿವಿದೆಡೆಗಳಲ್ಲಿ ಬುಧವಾರ ಬೆಳಿಗ್ಗೆಯಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆಯನ್ನು ನೀಡಲಾಗಿತ್ತು. ನಗರದ ಒಟ್ಟು 5 ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಒಂದನೇ ಮತ್ತು ಎರಡನೇ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಐದು ಕಡೆಗಳಲ್ಲಿಯೂ ನಿಗಧಿತ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಲಾಗುವುದೆಂದು ಮುಂಚಿತವಾಗಿಯೆ ಸಾರ್ವಜನಿಕ ಆಸ್ಪತ್ರೆ ಮತ್ತು  ತಹಶೀಲ್ದಾರ್ ಕಾರ್ಯಾಲಯ ಪ್ರಕಟಣೆಯ ಮೂಲಕ ತಿಳಿಸಿತ್ತು. ಆದಗ್ಯೂ ನಗರದ ಎಲ್ಲ ಕೋವಿಡ್ ಲಸಿಕಾ ಕೇಂದ್ರಗಳಲ್ಲಿಯೂ ನಿಗಧಿಗಿಂತ ಹೆಚ್ಚು ಜನ ಜಮಾಯಿಸಿದ್ದರು. ಹೀಗಾಗಿ ಕೆಲವೆಡೆ ತಕ್ಕಮಟ್ಟಿಗೆ ಗೊಂದಲ ಏರ್ಪಟ್ಟಿತ್ತು.

ಇನ್ನೂ ನಗರದ ಹಳೆದಾಂಡೇಲಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಾಕ್ಸಿನ್ 2ನೇ ಕೋವಿಡ್ ಲಸಿಕೆ 100 ಹಾಗೂ 1 ಮತ್ತು 2ನೇ ಕೋವಿಶಿಲ್ಡ್ ಕೋವಿಡ್ ಲಸಿಕೆಯು 100 ಮಾತ್ರ ಇದ್ದು, ಆದರೆ ಕೋವಿಡ್ ಲಸಿಕೆಗಿಂತ ದುಪ್ಪಟ್ಟು ಜನ ಆಗಮಿಸಿದ್ದರು. ಟೋಕನ್ ನೀಡುವುದರ ಮೂಲಕ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೆತ್ತಿಕೊಳ್ಳಲಾಗಿದ್ದರೂ, ಟೋಕನ್ ವಿತರಿಸಲು ಹರಸಾಹಸ ಪಡಬೇಕಾದ ಸನ್ನಿವೇಶ ನಿರ್ಮಾಣವಾಗಿತ್ತು. ಜನರ ಗದ್ದಲ, ನೂಕು ನುಗ್ಗಲನ್ನು ಗಮನಿಸಿದ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಈರಣ್ಣಾ ಅವರು ಟೋಕನ್ ತೆಗೆದುಕೊಂಡು ವಿತರಿಸಲು ಮುಂದಾದರು.

ಇದನ್ನೂ ಓದಿ: ಕೋವಿಡ್ : ಸಂಭಾವ್ಯ 3ನೇ ಅಲೆ ಎದುರಿಸಲು ದ.ಕ. ಜಿಲ್ಲಾಡಳಿತ ಸರ್ವ ಸನ್ನದ್ಧ: ಜಿಲ್ಲಾಧಿಕಾರಿ

ಜನರ ನೂಕುನಗ್ಗಲನ್ನು ನಿಯಂತ್ರಿಸಲು ಹರಸಾಹಸ ಪಟ್ಟ ಈರಣ್ಣಾರವರು ಕೊನೆಗೆ ಶಾಲೆಯ ಆವರಣ ಗೋಡೆಯನ್ನೇರಿ ಟೋಕನ್ ವಿತರಿಸಲು ಮುಂದಾದರು. ಸ್ವಲ್ಪ ಹೊತ್ತಿನ ಬಳಿಕ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೂಲಕವೆ ಟೋಕನ್ ವಿತರಿಸಲು ಕ್ರಮವನ್ನು ಕೈಗೊಂಡರು. ಯಾಕಣ್ಣ ಗದ್ದಲ ಮಾಡುವಿರಿ ಎಂದು ಪೊಲೀಸ್ ಈರಣ್ಣಾರವರು ಎಷ್ಟೆ ಕೇಳಿಕೊಂಡರೂ ಲಸಿಕೆಗಾಗಿ ನೂಕುನುಗ್ಗಲನ್ನು ನಿಯಂತ್ರಿಸಲು ಪ್ರಯಾಸ ಪಡಬೇಕಾಯಿತು.

ಸ್ವಲ್ಪ ಹೊತ್ತಿನ ಬಳಿಕ ಎಲ್ಲವೂ ಸರಿಯಾಗತೊಡಗಿತು. ಒಟ್ಟಿನಲ್ಲಿ ಹಳೆದಾಂಡೇಲಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಜನಜಾತ್ರೆಯಾಗಿಯೆ ಪರಿಣಮಿಸಿರುವುದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.