ಕೋವಿಡ್ 19 ತಡೆಗಟ್ಟಲು ಜನರ ಸಹಕಾರ ಅಗತ್ಯ
Team Udayavani, Mar 30, 2020, 6:33 PM IST
ಕಾರವಾರ: ಸರ್ಕಾರದೊಂದಿಗೆ ಪ್ರತಿಯೊಬ್ಬ ವ್ಯಕ್ತಿಯೂ ಸಹಕರಿಸಿದಾಗ ಮಾತ್ರ ಕೋವಿಡ್ 19 ಮಹಾಮಾರಿಯ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.
ಜಿಲ್ಲಾಧಿಧಿಕಾರಿ ಕಚೇರಿಯಲ್ಲಿ ಭಾನುವಾರ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಕುರಿತು ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಜನರ ಅರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೆಲ ಕಠಿಣ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಸಹಕರಿಸಬೇಕು. ಇದರ ಕುರಿತು ಅಧಿಕಾರಿಗಳು ಕೂಡ ತಿಳಿವಳಿಕೆ ನೀಡಬೇಕು. ಯಾವುದೇ ಹಣಕಾಸಿನ ತೊಂದರೆ ಇಲ್ಲ. ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದರು.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಪ್ರಧಾನಿಯವರು ಘೋಷಿಸಿರುವ ಪ್ಯಾಕೇಜ್‌ನಲ್ಲಿ ಮೀನುಗಾರರ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದಾಗ, ಇದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಶಾಸಕಿ ರೂಪಾಲಿ ಎಸ್. ನಾಯ್ಕ, ಕಲ್ಲಂಗಡಿ ಬೆಳೆದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದಾಗ ಜಿಲ್ಲಾ ಉಸ್ತುವಾರಿ ಸಚಿವೆ ಇದರ ಬಗ್ಗೆ ಗೋವಾ ರಾಜ್ಯದ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ಮುಂದುವರಿಸಿ ಎಂದರು.
ಜಿಲ್ಲಾಧಿಕಾರಿ ಡಾ| ಹರೀಶ ಕುಮಾರ ಮಾತನಾಡಿ, ಮಾ. 15ರ ನಂತರ ವಿದೇಶದಿಂದ ಹಿಂದಿರುಗಿದ ಭಟ್ಕಳ ಜನರನ್ನು, ಅವರ ಕುಟುಂಬದವರಿಗೆ ಕೋವಿಡ್ 19 ಹರಡುವಿಕೆ ತಡೆಗಟ್ಟುವ ದೃಷ್ಟಿಯಿಂದ ಪ್ರತ್ಯೇಕ ಕ್ವಾರೆಂಟೈನ್ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದರು. ಕೋವಿಡ್ 19 ಪಾಜಿಟಿವ್ ಇದೆ ಎಂದು ಗುರುತಿಸಲಾದವರ ಜೊತೆ, ಪ್ರಾಥಮಿಕ ಹಂತದ ಸಂಪರ್ಕಿತರನ್ನು ಈಗಾಗಲೇ ಸರ್ಕಾರಿ ಕ್ವಾರಂಟೈನ್‌ದಲ್ಲಿ ಇಡಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಎಸ್‌ಪಿ ಶಿವಪ್ರಕಾಶ್ ದೇವರಾಜ್, ಜಿಪಂ ಸಿಇಒ ಎಂ. ರೋಶನ್, ಡಿಎಚ್‌ಒ ಡಾ| ಜಿ.ಎನ್. ಅಶೋಕ ಕುಮಾರ, ತಾಲೂಕು ಆರೋಗ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.