21ರಿಂದ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ?
Team Udayavani, Sep 5, 2020, 4:56 PM IST
ಕಾರವಾರ: ಜಿಲ್ಲೆಯಲ್ಲಿ ಷರತ್ತುಬದ್ದ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿಸಲು ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಿದೆ. ಜಿಲ್ಲಾಡಳಿತವೂ ಮರಳು ಗಣಿಗಾರಿಕೆಗೆ ನಿಯಮಾನುಸಾರ ಅನುಮತಿ ನೀಡಲು ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ಮರಳು ತೆಗೆಯುವುದನ್ನು ಪುನಾರಂಭಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ 12 ಮಾರ್ಚ 2020ರಂದು ನೀಡಿರುವ ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರದ ಷರತ್ತಿನಂತೆ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಮಳೆಗಾಲದ ಅವಧಿಯಲ್ಲಿ ನಿಷೇಧವಿತ್ತು. ಮುಂಗಾರು ಮಳೆಯ ಸಮಯದಲ್ಲಿ ಮೀನು ಮತ್ತು ಇತರೆ ಜಲಚರಗಳು ಮೊಟ್ಟೆ ಇಡುವ ಹಾಗೂ ಸಂತಾನೋತ್ಪತ್ತಿ ಸಮಯವಾದ್ದರಿಂದ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿ ಮರಳು ದಿಬ್ಬಗಳಿಂದ ಮರಳನ್ನು ತೆಗೆಯುವಿಕೆ ಮತ್ತು ಸಾಗಾಣಿಕೆಯನ್ನು 8 ಜೂನ್ 2020ರಿಂದ ಸ್ಥಗಿತಗೊಳಿಸಲಾಗಿತ್ತು. ಈಗ ಮಳೆ ಇಳಿಮುಖವಾಗಿದ್ದು, ಇದೇ ತಿಂಗಳಲ್ಲಿ ಮರಳುಗಾರಿಕೆ ಪ್ರಾರಂಭದ ಸುಳಿವನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಪ್ರಸ್ತುತ ಮುಂಗಾರು ಮಳೆ ಕ್ಷೀಣಿಸುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಮನೆ ನಿರ್ಮಾಣ ಕಾಮಗಾರಿಗಳಿಗೆ ಮರಳಿನ ಅವಶ್ಯಕತೆ ಇದ್ದುದರಿಂದ ಸೆ. 21ರಿಂದ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಪದ್ದತಿಯಲ್ಲಿ ಮರಳು ತೆರವುಗೊಳಿಸುವುದನ್ನು ಪ್ರಾರಂಭಿಸುವಲ್ಲಿ ಅನುಮತಿ ನೀಡಲು ಸಿದ್ಧತೆ ಮಾಡಿಕೊಳ್ಳಲು ಗಣಿ ಮತ್ತು ವಿಜ್ಞಾನ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
2020-21ನೇ ಸಾಲಿನಲ್ಲಿ ತಾತ್ಕಾಲಿಕ ಮರಳು ಪರವಾನಗಿ ಕೋರಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ನ್ಯಾಯಲುತವಾಗಿ ಇತ್ಯರ್ಥ ಪಡಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಪರ ಜಿಲ್ಲಾಧಿಕಾರಿ, ಪರಿಸರ ಅಧಿಕಾರಿ, ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಹಾಗೂ ಗಣಿ ಇಲಾಖೆಯ ಉಪ ನಿರ್ದೇಶಕರನ್ನೊಳಗೊಂಡ ಉಪ ಸಮಿತಿ ರಚಿಸಲಾಗಿದೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಕುರಿತು ಈ ಉಪ ಸಮಿತಿಯ ವರದಿ ಬಂದ ನಂತರ ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಪಂ ಸಿಇಒ ಮೊಹಮ್ಮದ ರೋಷನ್, ಎಸ್ಪಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್. ಕೆ., ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ, ಪರಿಸರ ಅಧಿಕಾರಿ ಪ್ರಸನ್ನ ಪಟಗಾರ, ಗಣಿ ಇಲಾಖೆ ಉಪ ನಿರ್ದೇಶಕ ಸೋಮಶೇಖರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.