ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ
Team Udayavani, Nov 13, 2020, 9:41 PM IST
ದಾಂಡೇಲಿ: ಊರಿನ ಶಾಂತಿ ಸೌಹಾರ್ದತೆಯಲ್ಲಿ ಪೊಲೀಸರ ಜೊತೆ ನಾಗರಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ್ ಹೇಳಿದರು. ಅವರು ನಗರದ ಗ್ರಾಮೀಣ ಠಾಣೆ ಆವರಣದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಥಳೀಯವಾಗಿ ಸುಗಮ ಸಂಚಾರಕ್ಕೆ ಸಂಬಂಧಪಟ್ಟಂತೆ ಟ್ರಾಫಿಕ್ ಸಮಸ್ಯೆಯನ್ನು ಸಾರ್ವಜನಿಕರ ಸಹಕಾರದಲ್ಲಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೋನಸ್‌ಸಮಯದಲ್ಲಷ್ಟೆ ಅಲ್ಲದೇ ಯಾವುದೇ ಸಮಯದಲ್ಲೂ ಜೂಜಾಟ ನಡೆದಲ್ಲಿ, ನೇರವಾಗಿ ನನ್ನ ಗಮನಕ್ಕೆ ತಂದರೆಮೂಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ನಾಗರಿಕರ ಮತ್ತು ಸಮಾಜದ ಹಿತಕ್ಕಾಗಿ ಇಲಾಖೆ ಕಂಕಣಬದ್ಧವಾಗಿದೆ. ವಾಹನಗಳ ಪಾರ್ಕಿಂಗ್ ಬಗ್ಗೆಯು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಜನಮೆಚ್ಚುವ ಕಾರ್ಯ ಮಾಡಿರುವುದನ್ನು ಶ್ಲಾಘಿಸಿದರು.
ನಗರಸಭಾ ಸದಸ್ಯ ಆದಂ ದೇಸೂರು, ಮಾಜಿ ಸದಸ್ಯರಾದ ಅಬ್ದುಲ್ ವಹಾಬ್ ಮುನ್ನಾ, ತಸ್ವರ ಸೌದಗಾರ, ಪತ್ರಕರ್ತಸಂದೇಶ್ ಜೈನ್, ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಸಂತೋಷ ಸೋಮನಾಚೆ, ಆದಿಜಾಂಬವಂತ ಸಂಘದ ಅಧ್ಯಕ್ಷ ಚಂದ್ರಕಾಂತ ನಾಡಿಗೇರ, ಮೌಳಂಗಿ ದಲಿತ ಸಂಘಟನೆ ಮುಖಂಡ ಸಹದೇವಕಾಂಬಳೆ, ಕಾಂಗ್ರೆಸ್ ಮುಖಂಡ ದಾದಾಪೀರ್ ನದಿಮುಲ್ಲಾ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಷ್ಣುನಾಯರ್ ಮೊದಲಾದವರು ಸಲಹೆ ನೀಡಿದರು. ಡಿವೈಎಸ್ಪಿ ಶಿವಾನಂದ ಚಲವಾದಿ, ಸಿಪಿಐ ಪ್ರಭು ಗಂಗನಹಳ್ಳಿ, ಪಿಎಸೈಗಳಾದ ಹನುಮಂತ ಬಿರದಾರ, ಯಲ್ಲಪ್ಪಾ ಎಸ್, ಸತ್ಯಪ್ಪ ಹುಕ್ಕೇರಿ, ಮಹಾದೇವಿ ನಾಯ್ಕವಾಡಿ ಮೊದಲಾದವರು ಉಪಸ್ಥಿತರಿದ್ದರು.
ನಗರಸಭಾ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಮಾಜ ಸೇವಕರು, ರಾಜಕೀಯಮುಖಂಡರು ಉಪಸ್ಥಿತರಿದ್ದರು. ಸಿಪಿಐ ಪ್ರಭು ಗಂಗನಹಳ್ಳಿ ಸ್ವಾಗತಿಸಿದರು. ಹನುಮಂತ ಬಿರದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.