ಮುಂಗಾರು ಹಂಗಾಮಿಗೆ ತಯಾರಿ

ಭತ್ತ ಬಿತ್ತನೆ ಕಾರ್ಯ ಆರಂಭ

Team Udayavani, May 18, 2020, 5:29 PM IST

UK-TDY-2

ಕುಮಟಾ: ಮುಂಗಾರು ಹಂಗಾಮಿಗೆ ತಾಲೂಕಿನ ರೈತಾಪಿ ಸಮುದಾಯ ಸನ್ನದ್ಧವಾಗಿದ್ದು, ಈಗಾಗಲೇ ಕೆಲ ಪ್ರದೇಶಗಳಲ್ಲಿ ಭತ್ತದ ಬಿತ್ತನೆ ಆರಂಭವಾಗಿದೆ. ಕೆಲ ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯು ಭತ್ತದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟೂ 2.860 ಹೆಕ್ಟೇರ್‌ ಭತ್ತ ಬೆಳೆಯುವ ಪ್ರದೇಶವಿದ್ದು, ಕೂಜಳ್ಳಿ ಹಾಗೂ ಅಳ್ವೆಕೋಡಿ ಭಾಗದಲ್ಲಿನ ರೈತರು ಈಗಾಗಲೇ ಭೂಮಿಹದಗೊಳಿಸಿ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ಆಗಾಗ ಮಳೆಯಾಗುತ್ತಿರುವುದರಿಂದ ಭೂಮಿಯಲ್ಲಿ ತೇವಾಂಶ ಅಧಿಕವಾಗುತ್ತಿದ್ದು, ಇದು ಭತ್ತದ ಬಿತ್ತನೆ ಕಾರ್ಯಕ್ಕೆ ವರದಾನವಾಗಿ ಪರಿಣಮಿಸಿದೆ.

ತಾಲೂಕಿನ ಕುಮಟಾ, ಕೂಜಳ್ಳಿ, ಮಿರ್ಜಾನ ಹಾಗೂ ಗೋಕರ್ಣ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ತಾಲೂಕು ವ್ಯಾಪ್ತಿಯಲ್ಲಿ ನೀರು ಬಿತ್ತನೆ ಹಾಗೂ ಹೋಬಳಿ ಭಾಗಗಳಲ್ಲಿ ಸಾಲು ನಾಟಿ ಅಧಿಕವಾಗಿದೆ. ಮೊದಲ ಹಂತದಲ್ಲಿ 440 ಕ್ವಿಂಟಾಲ್‌ ಜಯಾ ಭತ್ತದ ಬೀಜ ಬಂದಿದ್ದು, 725 ರೈತರಿಗೆ 251 ಕ್ವಿಂಟಾಲ್‌ ಬೀಜವನ್ನು ವಿತರಿಸಲಾಗಿದೆ.  ಎಂಟಿಯು-1.000 ತಳಿಯ 220 ಕ್ವಿಂಟಾಲ್‌ ಬೀಜ ದಾಸ್ತಾನಿದ್ದು, 217 ರೈತರಿಗೆ 75 ಕ್ವಿಂಟಾಲ್‌ ಹಾಗೂ ಹೈಬ್ರಿಡ್‌ ಪಿ.ಎ.ಸಿ-837 ಭತ್ತದ ತಳಿಯ 10.5 ಕ್ವಿಂಟಾಲ್‌ ದಾಸ್ತಾನಿದ್ದು, ಇದನ್ನು 8 ರೈತರು ಮಾತ್ರ ಪಡೆದುಕೊಂಡಿದ್ದಾರೆ. ಈ ಎಲ್ಲ ಬೀಜವನ್ನು ಸಹಾಯ ಧನದಲ್ಲಿ ರೈತರಿಗೆ ವಿತರಿಸಲಾಗುತ್ತಿದೆ.

ಬೇಡಿಕೆಗೆ ತಕ್ಕಂತೆ ಮೂರು ಹಂತಗಳಲ್ಲಿ ಬಿತ್ತನೆ ಬೀಜವನ್ನು ತರಿಸಿಕೊಡಲಾಗುವುದು. ತಾಲೂಕಿ ನಲ್ಲಿ ಬೀಜ ಭತ್ತದ ಒಟ್ಟೂ ಬೇಡಿಕೆ ಸರಿ ಸುಮಾರು 950 ಕ್ವಿಂಟಾಲ್‌ ಗಳಿವೆ. ಆದರೆ ಕಳೆದ ವರ್ಷ ನೆರೆ ಹಾವಳಿಯಿಂದ ಭತ್ತದ ಬೆಳೆ ಹಾಳಾಗಿರುವುದರಿಂದ ಈ ವರ್ಷ 1 ಸಾವಿರ ಕ್ವಿಂಟಾಲ್‌ ಗಿಂತಲೂ ಅಧಿಕ ಬೇಡಿಕೆ ಬರುವ ನಿರೀಕ್ಷೆಯಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶಂಕರ ಹೆಗಡೆ ಮಾಹಿತಿ ನೀಡಿದ್ದಾರೆ. ಕೃಷಿ ಚಟುವಟಿಕೆಗೆ ಕೂಲಿ ಕಾರ್ಮಿಕರ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಲಾಕ್‌ ಡೌನ್‌ನಿಂದ ಕೃಷಿ ಕಾರ್ಯ ವಿಳಂಬವಾಗಿದೆ. ಇದರಿಂದ ಆರ್ಥಿಕ ಸಂಕಷ್ಟವಾಗಲಿದ್ದು, ಸರ್ಕಾರ ರೈತರ ಸಹಾಯಕ್ಕೆ ನಿಲ್ಲಬೇಕು ಎನ್ನುತ್ತಾರೆ ಕೂಜಳ್ಳಿಯ ರೈತ ಮಾದೇವ ನಾಯ್ಕ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.