ಗ್ರಾಮದೇವಿ ಜಾತ್ರೆಗೆ ಸಿದ್ಧತೆ
Team Udayavani, Jan 4, 2018, 3:06 PM IST
ಯಲ್ಲಾಪುರ: ಜಾತ್ರೆ ಸಂದರ್ಭದಲ್ಲಿ ಕುಡಿವ ನೀರು, ಸ್ವತ್ಛತೆ, ದಾರಿದೀಪ ಹಾಗೂ ರಕ್ಷಣೆ ಬಗೆಗೆ ಹೆಚ್ಚಿನ ಒತ್ತು ನೀಡಿ ಕಾರ್ಯನಿರ್ವಹಿಸಬೇಕು. ಯಾವುದೇ ಮೂಲ ಸೌಲಭ್ಯಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಆರಕ್ಷಕರು ತಾಳ್ಮೆ ಮತ್ತು ಜಾಣ್ಮೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಶಿವರಾಮ ಹೆಬ್ಟಾರ ಹೇಳಿದರು.
ಬುಧವಾರ ಪಟ್ಟಣದ ತಾ.ಪಂ ಸಭಾಭವನದಲ್ಲಿ ಗ್ರಾಮದೇವಿ ಜಾತ್ರೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್ ಕಚೇರಿ ಬಳಿ, ಶಿರಸಿ ಅರ್ಬನ್ ಬ್ಯಾಂಕ್ ಎದುರು ಸಾರ್ವಜನಿಕ ಶೌಚಾಲಯ ಹಾಗೂ ಐಬಿ ರಸ್ತೆ ಬಳಿ ಸಾರ್ವಜನಿಕ ಮೂತ್ರಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಮೊಬೈಲ್ ಶೌಚಾಲಯ ಬಳಸಿಕೊಂಡು ಜಾತ್ರಾರ್ಥಿಗಳಿಗೆ ಅನುಕೂಲತೆ ಕಲ್ಪಿಸಿ ಕೊಡಲಾಗುವುದು ಎಂದು ಪ.ಪಂ.ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾನಿ ಮಾಹಿತಿ ನೀಡಿದರು.
ಜಾತ್ರೆಯಲ್ಲಿ ಪಿಕ್ ಪಾಕೇಟ್
ಆಗದಂತೆ ಸೂಕ್ತ ರಕ್ಷಣೆ ನೀಡಲಾಗುತ್ತದೆ. ಹಾವೇರಿ, ಬೆಳಗಾವಿ, ಧಾರವಾಡ ಇತ್ಯಾದಿಗಳಿಂದ ಮೂರು ಪೊಲೀಸ್ ಸ್ಕ್ವಾಡ್ ನಿಯೋಜಿಸಲಾಗುತ್ತದೆ. ಹೆಚ್ಚುವರಿಯಾಗಿ ಸುಮಾರು 40 ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು ಎಂದು ಸಿಪಿಐ ಮಂಜುನಾಥ ನಾಯಕ ತಿಳಿಸಿದರು. ಜಾತ್ರಾ ಸಂದರ್ಭದಲ್ಲಿ ಬರುವ ವಾಹನಗಳ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ, 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ, ಹೆಚ್ಚುವರಿ ಬಸ್, ಮೊಬೈಲ್ ದೂರವಾಣಿ ಸೇವೆ, ಉಚಿತ ಆರೋಗ್ಯ ಸೇವೆ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಾತ್ರಾ ನಿರ್ವಹಣೆಗೆ ಅನುಭವಿ ಅಧಿಕಾರಿಗಳ ಮಾರ್ಗದರ್ಶನ ಪಡೆದು, ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸೂಚಿಸಿದರು. ಪಾರ್ಕಿಂಗ್, ಬೀದಿ ದೀಪ, ಸಾರಿಗೆ ಮೂಲ ಸೌಕರ್ಯಗಳ ಬಗ್ಗೆ ಮುತುವರ್ಜಿ ವಹಿಸಬೇಕೆಂದು ಸಂಕಲ್ಪ ಅಧ್ಯಕ್ಷ ಪ್ರಮೋದ ಹಗಡೆ ಸೂಚಿಸಿದರು.
ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಮಹೇಶ್ ನಾಯ್ಕ, ಮಹಮ್ಮದ್ ಗೌಸ್, ಜಗದೀಶ್ ನಾಯ್ಕ, ಶೋಭಾ ಹುಲಮನಿ, ಯೋಗೇಶ ಹಿರೇಮಠ, ಸೂರಜ್ ಹೆಗಡೆ, ಕೇಬಲ್ ನಾಗೇಶ್ ಮುಂತಾದವರು ಸಲಹೆ ಸೂಚನೆ ನೀಡಿದರು. ಪ.ಪಂ. ಅಧ್ಯಕ್ಷ
ಶಿರೀಷ್ ಪ್ರಭು, ಉಪಾಧ್ಯಕ್ಷೆ ಬಶೀರಾ ಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷೆ ಪುಷ್ಪಾ ನಾಯ್ಕ, ತಹಶೀಲ್ದಾರ ಡಿ.ಜಿ. ಹೆಗಡೆ, ಗ್ರಾಮದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜೇಂದ್ರ ಪ್ರಸಾದ ಭಟ್ಟ ಮುಂತಾದವರು ಇದ್ದರು.
ಮಾಧ್ಯಮದವರಿಗೂ ಪಾಠ:
ಜಾತ್ರೆ ಸಂದರ್ಭದಲ್ಲಿ ಆಗುವ ಸಣ್ಣಪುಟ್ಟ ಲೋಪದೋಷಗಳನ್ನೇ ಮಾಧ್ಯಮದವರು ವೈಭವೀಕರಿಸುವ ತಮ್ಮ ದೊಡ್ಡಸ್ಥಿಕೆಯೊಂದನ್ನೇ
ತೊರಿಸದೇ ಯಲ್ಲಾಪುರದ ಹೆಸರು ಹಾಳಾಗದಂತೆ ಎಚ್ಚರ ವಹಿಸಿ ಎಂದು ಮಾಧ್ಯಮದವರಿಗೆ ಶಾಸಕರು ಪಾಠ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.