ವಿದ್ಯುತ್ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ
ವಿಧವಾ-ವೃದ್ಧಾಪ್ಯ ವೇತನ, ಮನೆಗಳ ಸಕ್ರಮಾತಿ ಸಮಸ್ಯೆ ನಿವಾರಿಸಲು ತಹಶೀಲ್ದಾರ್‌ಗಳಿಗೆ ಡಿಸಿ ಆದೇಶ
Team Udayavani, Mar 30, 2022, 6:02 PM IST
ಕಾರವಾರ: ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಗನ್ ಲೈಸೆನ್ಸ್ ನವೀಕರಣ, ಗೋಮಾಳ, ಪಿಂಚಣಿ, ರೇಶನ್ ಕಾರ್ಡ್, ಆಧಾರ ಕಾರ್ಡ್ ದೊರೆಯದೇ ಇರುವ ಮತ್ತು ಫಾರ್ಮ್ 57 ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಆದೇಶಿಸಿದರು.
ಅವರು ಡಿಸಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಏ.16 ರ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿ ಮಾತನಾಡಿದರು. ಕಂದಾಯ ಸಚಿವರ ಗ್ರಾಮ ವಾಸ್ತವ್ಯ, ಸಚಿವರು ವಾಸ್ತವ್ಯ ಮಾಡುವ ಗ್ರಾಮಕ್ಕೆ ಮಾತ್ರ ಸೀಮಿತವಾಗಿಲ್ಲ, ಜಿಲ್ಲೆಯ ಎಲ್ಲ ಗ್ರಾಮಗಳನ್ನು ಅದು ಅಂದು ಪ್ರತಿನಿಧಿಸುತ್ತದೆ. ಆದ್ದರಿಂದ ಎಲ್ಲ ಇಲಾಖೆಗಳು ಭಾಗವಹಿಸಬೇಕು ಮತ್ತು ಆಯಾ ಇಲಾಖೆಗಳು ವಿವಿಧ ಯೋಜನೆಗಳ ಫಲಾನುಭವಿಗಳನ್ನು ತರಬೇಕು. ಇದಕ್ಕಾಗಿ ಗ್ರಾಮಗಳಲ್ಲಿ ಯಾವ ಅರ್ಹ ಫಲಾನುಭವಿಗೆ ಪಿಂಚಣಿ ಸಿಗುತ್ತಿಲ್ಲ ಮತ್ತು ನಿಂತು ಹೋಗಿದೆ, ಯಾವ ಮನೆಗೆ ವಿದ್ಯುತ್ ಸೌಕರ್ಯವಿಲ್ಲ ಎಂಬುದನ್ನು ಮತ್ತು ವಿಕಲಚೇತನರ ಕುರಿತು ಏ.5 ಅಥವಾ 6 ರೊಳಗೆ ಸಮೀಕ್ಷೆ ಮಾಡಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯವನ್ನು ಸಚಿವರಿಂದ ಕೊಡಿಸುವ ಕಾರ್ಯವಾಗಬೇಕು ಎಂದರು.
ಜನ ಸೇವೆಗಳಿಗೆ ಸಂಬಂಧಿಸಿದ ಗ್ರಾಮ ಒನ್ ಸೆಂಟರ್ ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ 221 ಕೇಂದ್ರಗಳು ಕೆಲಸ ಮಾಡುತ್ತಿದ್ದು, ಕೇವಲ 15 ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಸ್ವೀಕೃತವಾಗಿರುತ್ತವೆ. ನಿರೀಕ್ಷೆ ಮಟ್ಟದಲ್ಲಿ ಅರ್ಜಿಗಳು ಬಂದಿಲ್ಲ, ಯಾವ ಇಲಾಖೆಯ ಯಾವ ಯಾವ ಸೇವೆಯನ್ನು ಗ್ರಾಮ ಒನ್ ಸೆಂಟರ ಮೂಲಕ ಅರ್ಜಿ ಸಲ್ಲಿಸಬಹುದು ಎಂಬುದನ್ನು ಪ್ರಚಾರಗೊಳಿಸಿ, ಗ್ರಾಮದ ಪ್ರತಿಯೊಬ್ಬರಿಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ಒದಗಿಸುವಂತಾಗಬೇಕು. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಇನ್ನುಳಿದಂತೆ ಅಂದಿನ ಕಾರ್ಯಕ್ರಮವನ್ನು ಅತ್ಯಂತ ಸುವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.
ಜಿಪಂ ಸಿಇಒ ಪ್ರಿಯಾಂಕಾ, ಎಡಿಸಿ ರಾಜು ಮೊಗವೀರ, ಎಸಿ ಜಯಲಕ್ಷ್ಮೀ ರಾಯಕೋಡ, ತಹಶೀಲ್ದಾರ್ ಎನ್.ಎಫ್. ನೊರೋನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.