ಬ್ಯಾಂಕ್ ವಿಲೀನ ವಿರುದ್ಧ ಪ್ರತಿಭಟನೆ
Team Udayavani, Sep 2, 2019, 1:05 PM IST
ಕಾರವಾರ: ಬ್ಯಾಂಕ್ ವಿಲೀನಿ ವಿರೋಧಿಸಿ ಬ್ಯಾಂಕ್ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಾರವಾರ: ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಒಳಗೊಂಡು 10 ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲಿನೀಕರಣ ಮಾಡಿದ ಕೇಂದ್ರ ಬಿಜೆಪಿ ಸರಕಾರದ ನಿರ್ಧಾರ ವಿರೋಧಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕರರು ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಾರ್ಯಾಲಯದ ಎದುರು ಪ್ರತಿಭಟನೆ ಮಾಡಿದರು.
ಸಿಂಡಿಕೇಟ್ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಮಾಂಜ್ರೇಕರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಈ ಡಿಸೆಂಬರ್ 30 ಬ್ಯಾಂಕಿಂಗ್ ಕ್ಷೇತ್ರಕ್ಕೆ ಒಂದು ಕರಾಳ ದಿನವಾಗಲಿದೆ ಎಂದರು. ಕೇಂದ್ರ ಸರ್ಕಾರ ಉಳ್ಳವರ ಪರ ನೀತಿ ಅನುಸರಿಸುತ್ತಿದೆ. ಮಧ್ಯಮ ವರ್ಗದವರು ಬದುಕುವುದೇ ಕಷ್ಟದ ಸ್ಥಿತಿಯನ್ನು ಸರ್ಕಾರಗಳು ಸೃಷ್ಟಿಸುತ್ತಿವೆ. ಕೇಂದ್ರದ ಆರ್ಥಿಕ ನೀತಿ ಜನಪರವಾಗಿಲ್ಲ. ಬ್ಯಾಂಕ್ ಉದ್ಯೋಗಿಗಳನ್ನು ಸಹ ರಕ್ಷಿಸುತ್ತಿಲ್ಲ ಎಂದರು.
ಬ್ಯಾಂಕ್‌ಗಳ ವಿಲಿನೀಕರಣದಿಂದ ಎಲ್ಲ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕರರ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದ್ದು ನೌಕರರನ್ನು ಕಡ್ಡಾಯ ನಿವೃತ್ತಿ ಮಾಡಲಾಗುವುದು ಎಂದು ವಿಷಾದ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಪದಾಧಿಕಾರಿ ಎಂ.ಪಿ. ಕಾಮತ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕ ಪೀರಸಾಬ ಪಿಂಜರ್, ಮೊಹಮ್ಮದ ನಿಝಾಮ್, ಕಾರ್ಪೋರೇಶನ್ ಬ್ಯಾಂಕ್‌ನ ವಿನೋದ ಬಾಂದೇಕರ, ಸಿಂಡಿಕೇಟ್ ಬ್ಯಾಂಕ್‌ನ ಅಧಿಕಾರಿಗಳು ಹಾಗೂ ನೌಕರರು ಸಕ್ರೀಯವಾಗಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.