ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ
ವರದಿ ಜಾರಿಯಿಂದ ಜಿಲ್ಲೆಯ ಜನರಿಗೆ ತೀವೃ ತೊಂದರೆ ; ಸರಕಾರ ಶೀಘ್ರ ಆಕ್ಷೇಪಣಾ ಅರ್ಜಿ ಸಲ್ಲಿಸಲಿ: ದೇಶಪಾಂಡೆ
Team Udayavani, Jul 26, 2022, 5:03 PM IST
ಜೋಯಿಡಾ: ಕಸ್ತೂರಿ ರಂಗನ್ ವರದಿ ಬಹಳಷ್ಟು ಲೋಪದೋಷಗಳಿಂದ ಕೂಡಿದ್ದು, ವರದಿ ಜಾರಿಯಿಂದ ಜಿಲ್ಲೆಯ ಜನ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಎಂದು ಜೋಯಿಡಾ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟದ 56823 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶವನ್ನು ಸುಪ್ರೀಂ ಕೋರ್ಟನ ಆದೇಶದನ್ವಯ ಪರಿಸರ ಸೂಕ್ಷ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಜು. 6 ರಂದು ಕರಡು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 3 ಬಾರಿ ಅಧಿಸೂಚನೆಯನ್ನು ಹೊರಡಿಸಿದ್ದ ಕೇಂದ್ರದ ಈ ಪ್ರಯತ್ನಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಈಗ ಇನ್ನೊಮ್ಮೆ ಅಧಿಸೂಚನೆ ಹೊರಡಿಸಿರುವುದು ರಾಜ್ಯದ ಜನತೆಗೆ ಆತಂಕವನ್ನು ತಂದೊಡ್ಡಿದೆ ಎಂದರು.
ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್ ವರದಿಯಂತೆ ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲಾದ ಪ್ರದೇಶದಲ್ಲಿ ನಮ್ಮ ರಾಜ್ಯದ 10 ಜಿಲ್ಲೆಗಳ 1112 ಗ್ರಾಮಗಳನ್ನು ಮತ್ತು ನಮ್ಮ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಗ್ರಾಮಗಳು ಸೇರ್ಪಡೆಗೊಂಡಿವೆ. ಅತಿ ಹೆಚ್ಚು ಭೂಪ್ರದೇಶ ಸುಮಾರು 206681 ಚದರ ಕಿ.ಮೀ ವಿಸ್ತೀರ್ಣ ಪ್ರದೇಶವು ನಮ್ಮ ರಾಜ್ಯದ ಭಾಗವೇ ಆಗಿದೆ ಎಂದರು.
ಪಶ್ಚಿಮ ಘಟ್ಟಗಳಿಂದಲೇ ಆವರಿಸಿರುವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ, ವಿಶೇಷವಾಗಿ ಜೋಯಿಡಾ ತಾಲೂಕಿನಲ್ಲಿ ಈಗಾಗಲೇ ಹಲವು ಯೋಜನೆಗಳು, ಅಭಯಾರಣ್ಯಗಳು ಇದ್ದು, ಈ ಯೋಜನೆಗಳಿಂದ ಇಲ್ಲಿಯೇ ಬದುಕನ್ನು ಕಟ್ಟಕೊಂಡ ಜನಸಾಮಾನ್ಯರು, ನಿರಾಶ್ರಿತರಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ 96 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದಲ್ಲಿ ಗುರುತಿಸಿಕೊಂಡಿದ್ದು, ತಾಲೂಕಿನ ಕೇಂದ್ರ ಸ್ಥಾನವೂ ಸೇರಿದಂತೆ ಶೇ.90 ರಷ್ಟು ಹೆಚ್ಚಿನ ಪ್ರದೇಶ ಈ ವಲಯದ ವ್ಯಾಪ್ತಿಯಲ್ಲಿ ಬರುತ್ತದೆ.
ಇದರಿಂದ ತಾಲೂಕಿನಲ್ಲಿ ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ. ತಾಲೂಕಿನಲ್ಲಿ ಕಾಡು ಉಳಿದಿರುವುದು ಇಲ್ಲಿಯ ಜನರಿಂದ. ಆದರೆ ಈ ವರದಿ ಜಾರಿಯಾದಲ್ಲಿ ತಾಲೂಕಿನ ಮುಗ್ಧ ಜನ ತೊಂದರೆ ಅನುಭವಿಸಬೇಕಾಗಿದೆ. ಘಟ್ಟಗಳ ಪ್ರದೇಶದ ಅರಣ್ಯ, ಜೀವಸಂಕುಲಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನದ ಜೊತೆಗೆ ಅಭಿವೃದ್ಧಿಯೂ ಆಗಬೇಕು ಎಂದರು.
ಆದ್ದರಿಂದ ರಾಜ್ಯ ಸರ್ಕಾರ ಈ ಯೋಜನೆ ಜಾರಿ ಬಗ್ಗೆ ಶೀಘ್ರ ಆಕ್ಷೇಪಣಾ ಅರ್ಜಿ ಸಲ್ಲಿಸಿ ಪಶ್ಚಿಮ ಘಟ್ಟದಲ್ಲಿ ವಾಸಿಸುವವರ ಹಿತರಕ್ಷಣೆಗೆ ಮುಂದಾಗಬೇಕು. ಪರಿಸರ, ಅರಣ್ಯ ಸಂರಕ್ಷಣೆ, ಜೀವ ವೈವಿಧ್ಯತೆಗಳ ಸಂರಕ್ಷಣೆ ಆದ್ಯತೆಯ ಜೊತೆಗೆ ಇವುಗಳೊಂದಿಗೆ ಸಂಬಂಧ ಬೆಳೆದುಕೊಂಡಿರುವ ಜನರ ಹಿತರಕ್ಷಣೆ ಆಗಬೇಕು. ಸರಕಾರ ನಿಗದಿತ ಅವಧಿಯೊಳಗೆ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಕರಡು ಪ್ರಕಟವಾದ 60 ದಿನಗಳಲ್ಲಿ ಆಕ್ಷೇಪ ಅರ್ಜಿ ಸಲ್ಲಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಸದಾನಂದ ದಬ್ಗಾರ, ರಮೇಶನಾಯ್ಕ, ಸಂಜಯ ಹಣಬರ, ಮಂಗೇಶ ಕಾಮತ್,ದತ್ತಾ ನಾಯ್ಕ, ದಿಗಂಬರ ದೇಸಾಯಿ, ಅರುಣ ಭಗವತಿರಾಜ್, ಅಜಿತ್ ತೋರವತ್,ವಿಜಯ ಪಂಡಿತ, ವಿನಯ ದೇಸಾಯಿ, ಕೃಷ್ಣಾ ದೇಸಾಯಿ, ನಂದು ತೇಲಿ, ಸೇರಿದಂತೆ ಸಾವಿರಾರು ಜನ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.