Dandeli: ಹಿಟ್ & ರನ್ ಕಾಯ್ದೆ ವಿರುದ್ಧ ಸಂಘಟನೆಗಳಿಂದ ಪ್ರತಿಭಟನೆ
ಖಾಸಗಿ ಪ್ರಯಾಣಿಕ ಮತ್ತು ವಾಣಿಜ್ಯ ಸೇವಾ ವಾಹನಗಳ ಚಾಲಕರ ಸಂಘಟನೆಗಳಿಂದ ಪ್ರತಿಭಟನೆ
Team Udayavani, Jan 17, 2024, 12:18 PM IST
ದಾಂಡೇಲಿ: ಕೇಂದ್ರ ಸರಕಾರ ಪ್ರಸ್ತಾಪಿಸಿರುವ ಅಪಘಾತದ ವೇಳೆ ಹಿಟ್ & ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾಲಕರಿಗೆ ಶಿಕ್ಷೆ ವಿಧಿಸುವ ವಿಧೇಯಕವನ್ನು ವಿರೋಧಿಸಿ ರಾಷ್ಟ್ರದಾದ್ಯಂತ ನಡೆಯುತ್ತಿರುವ ಮುಷ್ಕರವನ್ನು ಬೆಂಬಲಿಸಿ ಬುಧವಾರ ದಾಂಡೇಲಿಯಲ್ಲಿಯೂ ಖಾಸಗಿ ಪ್ರಯಾಣಿಕ ಮತ್ತು ವಾಣಿಜ್ಯ ಸೇವೆ ವಾಹನಗಳ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಆಟೋ ಟ್ಯಾಕ್ಸಿ ಹಾಗೂ ಖಾಸಗಿ ಪ್ರಯಾಣಿಕ ವಾಹನಗಳ ಚಾಲಕರು ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಖಾಸಗಿ ಪ್ರಯಾಣಿಕ ಹಾಗೂ ಖಾಸಗಿ ವಾಣಿಜ್ಯ ವಾಹನಗಳ ಚಾಲಕರು ನಗರದ ಬಸ್ ನಿಲ್ದಾಣದಿಂದ ಕೆ.ಸಿ.ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ಆನಂತರ ಕೆ.ಸಿ ವೃತ್ತದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಮೂಲಕ ಪ್ರಧಾನ ಮಂತ್ರಿಗಳಿಗೆ ಈ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ರಾಜೇಸಾಬ್ ಕೇಸನೂರು, ಖಾಸಗಿ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳ ಚಾಲಕರ ಸಂಘಟನೆಗಳ ಪ್ರಮುಖರುಗಳಾದ ಬಾಬಾಸಾಬ ಜಮಾದಾರ, ಅರುಣ್ ಕುಮಾರ್, ಮುಸ್ತಾಫ ಹಕೀಂ, ನಾಗೇಶ ವಾಲೀಕರ, ಆನಂದ ಕುಮಾರ, ಇಲಿಯಾಸ್, ರಮೇಶ ಭಂಡಾರಿ, ಬಾಬಾ ಅಕ್ಬರ್ ಮನಿಯಾರ, ಗೌಸ್ ಕಿತ್ತೂರ, ಅಶೋಕ ನಾಯ್ಕ, ಬಸವರಾಜ ಪಾಟೀಲ್, ಮಕ್ತುಂ ಕಿತ್ತೂರ, ಮೆಹಬೂಬ ಹಾಗೂ ಸಂಘಟನೆಯ ಪಧಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.