ಮೀನುಗಾರ ಮಹಿಳೆಯರ ಪ್ರತಿಭಟನೆ

Team Udayavani, Nov 15, 2019, 2:26 PM IST

uk-tdy-1

ಕುಮಟಾ: ಪುರಸಭೆ ವ್ಯಾಪ್ತಿಯ ಮೀನು ಮಾರುಕಟ್ಟೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಮೀನು ಮಾರಾಟಗಾರಮಹಿಳೆಯರಿಗೆ ಹಲವು ತಿಂಗಳಿಂದ ಯಾವುದೇ ಮೂಲ ಸೌಲಭ್ಯ ದೊರೆಯುತ್ತಿಲ್ಲ. ಆದರೂ ಪುರಸಭೆ ಶುಲ್ಕ ವಸೂಲಿ ಮಾಡುತ್ತಿದೆ. ಇದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ನೂರಾರು ಮೀನುಗಾರ ಮಹಿಳೆಯರು ಗುರುವಾರ ಮೀನು ಮಾರುಕಟ್ಟೆ ಪ್ರಾಂಗಣದಲ್ಲಿ ಪ್ರತಿಭಟನೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಶುಲ್ಕದ ವಿಚಾರದಲ್ಲಿ ಪುರಸಭೆಯವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಮಾರುಕಟ್ಟೆ ಶುಲ್ಕವನ್ನು ಸಂಘದ ಮೂಲಕವೇ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ವಸೂಲಿ ಮಾಡುತ್ತ ಬರಲಾಗಿದೆ. ಇನ್ನು ಮುಂದೆಯೂ ನಮ್ಮ ಸಂಘಕ್ಕೇ ಅವಕಾಶ ಕೊಡಬೇಕು. ಈಗ ಮೀನು ಮಾರುಕಟ್ಟೆ ಕಟ್ಟಡದ ದುರಸ್ತಿ ಕಾರ್ಯ ನಡೆಯುತ್ತಿದೆ.

ಮಳೆ-ಬಿಸಿಲಿಗೆ ಮೈಒಡ್ಡಿಕೊಂಡು ಮಾರುಕಟ್ಟೆ ಹೊರಭಾಗದಲ್ಲೇ ಮೀನು ಮಾರಾಟಕ್ಕೆ ಕುಳಿತುಕೊಳ್ಳುತ್ತಿದ್ದೇವೆ. ಹೀಗಿರುವಾಗ ಸದ್ಯ ಪುರಸಭೆಯವರು ನಮ್ಮಿಂದ ಜಾಗದ ಶುಲ್ಕ ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಶಾಸಕ ದಿನಕರ ಶೆಟ್ಟಿ ಆಗಮಿಸಿ ಸಮಸ್ಯೆ ಬಗೆಹರಿಸುವ ಬಗ್ಗೆ ಭರವಸೆ ನೀಡಿದರಲ್ಲದೇ, ಮೀನುಮಾರಾಟಗಾರ ಮಹಿಳೆಯರು ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೂ ಪೂರ್ವದಲ್ಲಿ ಪುರಸಭೆಗೆ ಯಾವುದೇ ಶುಲ್ಕ ನೀಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ನಂತರ ಪುರಸಭೆ ಮುಖ್ಯಾಧಿಕಾರಿ ಜತೆ ಮಾತನಾಡಿ, ಕಟ್ಟಡ ನಿರ್ಮಾಣಕ್ಕೂ ಮೊದಲೇ ಮೀನು ಮಾರಾಟಗಾರ ಮಹಿಳೆಯರಿಂದ ಶುಲ್ಕ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಜಿಲ್ಲಾಧಿಕಾರಿಗಳಿಗೂ ಮೀನುಗಾರ ಮಹಿಳೆಯರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೇನೆ. ಅವರೂ ಸಹ ಮೀನುಮಾರಾಟಗಾರ ಮಹಿಳೆಯರಿಂದ ಸದ್ಯಕ್ಕೆ ಶುಲ್ಕ ವಸೂಲಿ ಮಾಡುವುದು ಬೇಡ ಎಂದು ತಿಳಿಸಿದ್ದಾರೆ. ಹೀಗಿರುವಾಗಲೂ ನೀವು ಶುಲ್ಕ ವಸೂಲಿಗೆ ಮುಂದಾದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆಯ ಮೀನು ಮಾರುಕಟ್ಟೆ ಕಟ್ಟಡ ದುರಸ್ತಿ ನಡೆದಿದೆ. ಹೀಗಾಗಿ ಮಹಿಳೆಯರು ತೆರೆದ ಜಾಗದಲ್ಲೇ ಮೀನು ಮಾರಾಟ ಮಾಡುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಮೀನು ಮಾರಾಟದ ಮಹಿಳೆಯರಿಂದ ಯಾವುದೇ ರೀತಿಯ ಶುಲ್ಕ ವಸೂಲಿ ಕಾನೂನು ಬಾಹಿರ ಎಂದು ಮುಖ್ಯಾಧಿಕಾರಿಗೆ ಹೇಳಿದ್ದೇನೆ.

ಬಡ ಮೀನುಗಾರ ಮಹಿಳೆಯರಿಂದ ಹಣ ವಸೂಲಿ ಮಾಡಿ ಸರ್ಕಾರಕ್ಕೆ ಭರಣ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿ ವಿಷಯ ತಿಳಿಸಿದ್ದೇನೆ. ಕನಿಷ್ಠ ಶೆಡ್‌ ಕೂಡಾ ಇಲ್ಲದ ಕುಮಟಾ ಮೀನು ಮಾರುಕಟ್ಟೆಯಲ್ಲಿ ಬಿಸಿಲಲ್ಲಿ ಕುಳಿತು ಮಾರಾಟ ನಡೆಸುವ ಮಹಿಳೆಯರಿಂದ ಶುಲ್ಕ ವಸೂಲಿ ಮಾಡುವುದು ಸರಿಯಲ್ಲ ಎಂಬುದನ್ನು ಅವರೂ ಒಪ್ಪಿಕೊಂಡಿದ್ದಾರೆ. ಅದಲ್ಲದೇ, ವಸೂಲಿ ಮಾಡುವುದು ಬೇಡ ಎಂದು ಅವರೂ ತಿಳಿಸಿದ್ದಾರೆ.

ಸದ್ಯ ಮೀನಿನ ಕ್ಷಾಮ ಇದೆ. ಆದ್ದರಿಂದ ಬಡ ಮೀನುಗಾರ ಮಹಿಳೆಯರಿಗೆ ಬೆಂಬಲವಾಗಿ ನಿಂತಿದ್ದೇನೆ. ಪುರಸಭೆಗೆ ಶುಲ್ಕ ಕೊಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದೇನೆ. ಸರ್ಕಾರ ಅವರಿಗೆ ಸಹಾಯ ಮಾಡುತ್ತದೆ. ಸಮಸ್ಯೆ ಬಗೆಹರಿಸಿಕೊಡುತ್ತೇನೆ ಎಂದು ತಿಳಿಸಿದರು.

ಜಿ.ಪಂ ಸದಸ್ಯ ಗಜಾನನ ಪೈ, ಪುರಸಭೆ ಸದಸ್ಯ ನಾಗರಾಜ ಹರಿಕಂತ್ರ, ಮೀನುಗಾರರಾದ ಜೈವಿಠuಲ ಕುಬಾಲ, ರಾಮಕೃಷ್ಣ ಹರಿಕಂತ್ರ, ರಾಘವೇಂದ್ರ ಜಾಧವ್‌, ಮೀನು ಮಾರಾಟಗಾರ ಮಹಿಳೆಯರಾದ ನಾಗಮ್ಮಾ ಹರಿಕಾಂತ, ದೇವಿ ಹರಿಕಾಂತ, ಮೀನಾಕ್ಷಿ ಹರಿಕಂತ್ರ, ರೇಣುಕಾ ಅಂಬಿಗ, ಹಬಿಬಾ ಅಕºರ್‌, ವೀಣಾ ಹರಿಕಂತ್ರ, ಗೌರೀಶ ಕುಬಾಲ್‌, ಸುಧಾಕರ ತಾರಿ, ಎಲ್‌.ಎಸ್‌. ಅಂಬಿಗ, ಮಾಲಾ ಅಂಬಿಗ ಸೇರಿದಂತೆ ನೂರಾರು ಮೀನುಗಾರ ಮಹಿಳೆಯರು ಇದ್ದರು.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.