ಇ-ಸ್ವತ್ತಿನ ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ
Team Udayavani, Sep 30, 2019, 2:48 PM IST
ಕುಮಟಾ: ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲೊಂದಾದ ಇ-ಸ್ವತ್ತಿನ ಸಮಸ್ಯೆಯನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರವೇ ಪರಿಹಾರ ಒದಗಿಸಿಕೊಡುವಂತೆ ಶಾಸಕ ದಿನಕರ ಶೆಟ್ಟಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಬಳಿ ಒತ್ತಾಯಿಸಿದರು.
ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಬರಮಾಡಿಕೊಂಡ ಅವರು, ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ ಗಮನಸೆಳೆದರು. ತಾಲೂಕಿನ ಗೋಕರ್ಣ ಸಮೀಪದ ತದಡಿಯ ಗಜನಿ ಪ್ರದೇಶದಲ್ಲಿನ 1800 ಎಕರೆ ಜಾಗದಲ್ಲಿ ಕೈಗಾರಿಕೋದ್ಯಮ ಅಭಿವೃದ್ಧಿ ಪಡಿಸುವ ಕುರಿತು ಚರ್ಚಿಸಿದರು.
ಅದಲ್ಲದೇ, ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅವಶ್ಯವಾಗಿರುವ ಮರಳು ಸರಿಯಾದ ಪ್ರಮಾಣದಲ್ಲಿ ದೊರೆಯುತ್ತಿಲ್ಲ. ಇಂತಹ ಹಲವು ಸಮಸ್ಯೆಗಳಿಗೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ವಿನಂತಿಸಿಕೊಂಡರು. ನಂತರ ಪ್ರತಿಕ್ರಿಯಿಸಿದ ಸಚಿವ ಜಗದೀಶ ಶೆಟ್ಟರ್, ಜಿಲ್ಲೆಯ ಇ-ಸ್ವತ್ತಿನ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಚರ್ಚಿಸುತ್ತೇನೆ.
ಇನ್ನಿತರ ಸಮಸ್ಯೆಗಳ ಬಗ್ಗೆ ಹಂತಹಂತವಾಗಿ ಪರಿಹರಿಸಲಾಗುವುದು ಎಂದರು. ಬಿಜೆಪಿ ಪ್ರಮುಖರಾದ ವಿನೋದ ಪ್ರಭು, ಮಂಡಲಾಧ್ಯಕ್ಷ ಕುಮಾರ ಮಾರ್ಕಾಂಡೆ, ನಾಗರಾಜ ನಾಯ್ಕ ತೊರ್ಕೆ, ಎಂ.ಜಿ.ಭಟ್ಟ, ತಾಲೂಕು ಉಸ್ತುವಾರಿ ನಾಗರಾಜ ನಾಯಕ, ಪ್ರಶಾಂತ ನಾಯ್ಕ, ಜಿ.ಪಂ ಸದಸ್ಯ ಗಜಾನನ ಪೈ, ವಿಶ್ವನಾಥ ನಾಯ್ಕ, ವಿನಾಯಕ ಭಟ್ಟ ಸಂತೇಗುಳಿ, ಮಹೇಶ ನಾಯ್ಕ, ಪುರಸಭಾ ಸದಸ್ಯರಾದ ಸಂತೋಷ ನಾಯ್ಕ, ಅನಿಲ ಹರ್ಮಲಕರ, ಅಂಕೋಲಾ ಘಟಕದ ಪ್ರಮುಖರಾದ ಭಾಸ್ಕರ ನಾರ್ವೇಕರ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.