ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸಿ: ಮನವಿ ಸಲ್ಲಿಕೆ
Team Udayavani, Mar 23, 2022, 6:30 PM IST
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆಯ ಮೂಲಕ ಶಿರಾಲಿಯ ವೆಂಕಟಾಪುರದ ಶ್ರೀನಿವಾಸ ಸಭಾಗ್ರಹದಿಂದ ತಾಲೂಕಾ ಆಡಳಿತ ಸೌಧಕ್ಕೆ ಆಗಮಿಸಿ ಹಾಜರಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯಲ್ಲಿ ಸರಕಾರಿ ಆದೇಶ ದಿನಾಂಕ ನವೆಂಬರ್ 4, 2019ನೇದರಲ್ಲಿ ಕರ್ನಾಟಕದಲ್ಲಿ ವಾಸಿಸುವ ಮೊಗೇರ ಜಾತಿಯ ಜನರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಸುತ್ತೋಲೆಯನ್ನು ಹೊರಡಿಸಿದರೂ ಸಹ ಜಿಲ್ಲಾಧಿಕಾರಿಗಳು ಕಾರವಾರವರ ಕಚೇರಿಯಿಂದ ಅಧೀನ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡದೇ ಇರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಸರಕಾರ 2018 ಮೇ 31ರ ಸುತ್ತೋಲೆಯನ್ನು ಹಿಂಪಡೆದು ನವೆಂಬರ್ 4, 2019ರಲ್ಲಿ ಹೊಸದಾಗಿ ಆದೇಶ ಹೊರಡಿಸಿರುವುದರಿಂದ ತಹಸೀಲ್ದಾರ್ ಅವರಿಗೆ ಸೂಕ್ತ ನಿರ್ದೇಶನ ನೀಡಿ ಮೊಗೇರ ಜಾತಿಯವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಬೇಡಿಕೆಗಳಾದ ಉತ್ತರ ಕನ್ನಡದಲ್ಲಿ ವಾಸಿಸುವ ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು, ಕೇಂದ್ರ ಸರಕಾರದ ಪರಿಶಿಷ್ಟ ಜಾತಿಯ ಪಟ್ಟಿಯನ್ನು ಹೊರತುಪಡಿಸಿ, ಇನ್ನುಳಿದ ಹಿಂದುಳಿದ ವರ್ಗ ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗದ ಪಟ್ಟಿಯಿಂದ ಮೊಗೇರ ಜಾತಿಯನ್ನು ಕೈಬಿಡಬೇಕು. ಬಾಕಿರುವ ಸಿಂಧುತ್ವ ಪ್ರಮಾಣ ಪತ್ರವನ್ನು ಕೂಡಲೇ ವಿತರಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಎಂದು ತಮ್ಮ ಸಮುದಾಯದವರ ಮೇಲೆ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂದೂ ಆಗ್ರಹಿಸಲಾಗಿದೆ.
ಸರಕಾರದ ಆದೇಶದ ಪ್ರಕಾರ ತಮ್ಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೊಡುವುದನ್ನು ಪುನ: ಆರಂಭಿಸುವ ತನಕ ಸಮುದಾಯದ ಜನರು ಮಾ.23ರಿಂದ ತಾಲೂಕಿನ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಅನಿರ್ಧಿಷ್ಟಾವಧಿಯ ಧರಣಿ ಸತ್ಯಾಗ್ರಹ, ರಾಸ್ತಾರೋಖೊ ಇತ್ಯಾದಿಗಳನ್ನು ನಡೆಸುತ್ತೇವೆ ಎಂದೂ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.