ಚತುಷ್ಪಥ ಕೆಲಸ ಅವೈಜ್ಞಾನಿಕ: ಐಆರ್‌ಬಿ ವಿರುದ್ಧ ಆಕ್ರೋಶ
Team Udayavani, Aug 2, 2019, 2:31 PM IST
ಅಂಕೋಲಾ: ಬೆಳಸೆ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಅಂಕೋಲಾ: ಚತುಷ್ಪಥ ಹೆದ್ದಾರಿ ಕಾಮಗಾರಿ ಕೈಗೊಂಡ ಐಆರ್‌ಬಿ ಕಂಪನಿ ಅವೈಜ್ಞಾನಿಕ ಕಾಮಗಾರಿಯಿಂದ ಬೆಳಸೆಯ 40 ಎಕರೆ ಕೃಷಿ ಭೂಮಿ ಜಲಾವೃತಗೊಂಡು ಕೃಷಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಬಂದು ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಬೆಳಸೆ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಐಆರ್‌ಬಿ ಕಂಪನಿಯವರು ಬೆಳಸೆ ರೈಲ್ವೆ ಸೇತುವೆ ಅಡಿಯಿಂದ ರಸ್ತೆ ಹಾಗೂ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಲುವಾಗಿ ರೈತರ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡು ಕೃಷಿ ಭೂಮಿಯನ್ನು ಸಮತಟ್ಟುಗೊಳಿಸಿ ರಸ್ತೆ ಹಾಗೂ ಸೇತುವೆ ನಿರ್ಮಿಸಲು ಮಣ್ಣು ಹಾಕಲಾಗಿದೆ. ಸ್ವಾಧೀನಪಡಿಸಿಕೊಂಡ ಜಮೀನಿನ ಮಧ್ಯ ಭಾಗದಲ್ಲಿ ಹಳ್ಳ ಹರಿಯುತ್ತಿದ್ದು, ಈ ಹಳ್ಳಕ್ಕೆ ಸೇತುವೆ ನಿರ್ಮಿಸುವ ಸಂದರ್ಭದಲ್ಲಿ ಹೂಳು ತುಂಬಿಕೊಂಡಿದೆ. ಮಳೆಗಾಲದಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ನೀರು ಸರಿಯಾಗಿ ಹರಿದು ಹೋಗಲಾರದೆ 40 ಎಕರೆ ಅಕ್ಕ ಪಕ್ಕದ ಕೃಷಿ ಭೂಮಿ ಮುಳುಗಡೆಯಾಗಿ ತೊಂದರೆಯಾಗಿದೆ. ಕಂಪನಿಯವರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ತಹಶೀಲ್ದಾರ್ ಅಶೋಕ ಗುರಾಣಿ ಮನವಿ ಸ್ವೀಕರಿಸಿ ಕಂಪನಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಹಾರದ ಕುರಿತು ಚರ್ಚಿಸುವ ಭರವಸೆ ನೀಡಿದರು. ಜಿಪಂ ಸದಸ್ಯ ಜಗದೀಶ ನಾಯಕ ಮೊಗಟಾ, ಬೆಳಸೆ ಗ್ರಾಪಂ ಅಧ್ಯಕ್ಷ ಶಂಕರ ಗೌಡ, ತಾಪಂ ಸದಸ್ಯ ಬೀರಾ ಗೌಡ, ಗ್ರಾಪಂ ಸದಸ್ಯರಾದ ಸೋಮು ಗೌಡ, ರಮೇಶ ಗೌಡ, ತಿಮ್ಮಾ ಗೌಡ, ಪ್ರಮುಖರಾದ ಬೊಮ್ಮಯ್ಯ ಗೌಡ, ಮಾರುತಿ ಗೌಡ, ಲಕ್ಷ್ಮಣ ಗೌಡ, ನಾಗಪ್ಪ ಗೌಡ, ಮಂಜುನಾಥ ಗೌಡ, ನಾಗರಾಜ ಗೌಡ, ಮಣಿಕಂಠ ಗೌಡ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.