ಸೀಬರ್ಡ್‌ ನೌಕಾನೆಲೆಗೆ ರಾಜನಾಥ ಸಿಂಗ್‌ ಭೇಟಿ

ದೇಶದ ಸ್ವಾಭಿಮಾನ ರಕ್ಷಿಸುವಲ್ಲಿ ರಕ್ಷಣಾ ಪಡೆಗಳ ಪಾತ್ರ ದೊಡ್ಡದು

Team Udayavani, May 27, 2022, 10:42 AM IST

5

ಕಾರವಾರ: ದೇಶದ ಸ್ವಾಭಿಮಾನ ರಕ್ಷಿಸುವಲ್ಲಿ ರಕ್ಷಣಾ ಪಡೆಗಳ ಪಾತ್ರ ದೊಡ್ಡದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಕಾರವಾರದ ಸೀಬರ್ಡ್‌ ನೌಕಾನೆಲೆ ಭೇಟಿಗೆ ಆಗಮಿಸಿರುವ ಅವರು ನೌಕಾನೆಲೆ ಸಿಬ್ಬಂದಿ ಹಾಗೂ ಕುಟುಂಬದವರ ಜತೆ ಮಾತನಾಡಿ, ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ದೊಡ್ಡದಾಗಿದೆ. ದೇಶಕ್ಕಾಗಿ ತ್ಯಾಗ ಮಾಡುವ ಅವರನ್ನು ಸದಾ ಗೌರವಿಸಬೇಕು ಎಂದರು.

ಸೈನಿಕರಲ್ಲಿ ಕರ್ತವ್ಯಪ್ರಜ್ಞೆ ಹೆಚ್ಚಾಗಿರುತ್ತದೆ. ಭಾರತ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಲು ನಮ್ಮ ಸೈನ್ಯದ ಕೊಡುಗೆ ಅಪಾರ. ಸೈನಿಕರು ತಮ್ಮ ಕುಟುಂಬವನ್ನು ಮರೆತು ಸದಾ ದೇಶಸೇವೆಯಲ್ಲಿ ತೊಡಗಿರುತ್ತಾರೆ. ಹಿಂದೊಮ್ಮೆ ನನಗೆ ಜಲಾಂತರ್ಗಾಮಿಯಲ್ಲಿ ಹೋಗುವ ಅವಕಾಶ ಒದಗಿ ಬಂದಿತ್ತು. ಅಲ್ಲಿ ಜೀವನ ಅತ್ಯಂತ ಕಠಿಣವಾಗಿದ್ದು, ನೀರನ್ನು ಮಿತವಾಗಿ ಅಳೆದು ಬಳಸಬೇಕು. ಇಂತಹ ಸ್ಥಿತಿಯಲ್ಲಿ ಸೈನಿಕರು ತಿಂಗಳುಗಟ್ಟಲೇ ಕುಟುಂಬದಿಂದ ದೂರವಿರುತ್ತಾರೆ. ಎಲ್ಲಿ ನೋಡಿದರಲ್ಲಿ ನೀರು. ಮಾತನಾಡಲು ಬೇರೇನೂ ಇಲ್ಲದೆ ಸಮುದ್ರದ ಅಲೆಯ ಶಬ್ದವನ್ನೇ ಕೇಳುತ್ತಿರುತ್ತಾರೆ. ಇದು ಕಷ್ಟಸಾಧ್ಯ ಎಂದು ಹೇಳಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಭಾರತವನ್ನು ಇತರೆ ದೇಶಗಳು ನೋಡುವ ರೀತಿಯೇ ಬದಲಾಗಿದೆ. ಭಾರತ ಇಂದು ಜಗತ್ತಿನ ಪ್ರಭಾವಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತಕ್ಕೆ ಜಗತ್ತಿನಲ್ಲಿ ಎಲ್ಲರಿಗಿಂತಲೂ ಹೆಚ್ಚು ಗೌರವ ಸಿಗುತ್ತಿದೆ ಎಂದೂ ಹೇಳಿದರು.

ಸೀಬರ್ಡ್‌ ನೌಕಾನೆಲೆಗೆ ಕದಂಬ ರಾಜಮನೆತನದ ಹೆಸರನ್ನಿಡಲಾಗಿದೆ. ಭಾರತದ ಇತಿಹಾಸದಲ್ಲಿ ಕದಂಬರದ್ದು ಅತ್ಯಂತ ಸುವರ್ಣಾಕ್ಷರಗಳಿಂದ ಬರೆದಿಡುವ ಕಾಲ. ಕದಂಬ ನೌಕಾನೆಲೆ ಕದಂಬರ ನಾಡಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಅತ್ಯಂತ ಸಂತಸದ ವಿಷಯ ಎಂದರು.

ರಾಜನಾಥ್‌ ಸಿಂಗ್‌ ಅವರನ್ನು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಆರ್‌ ಹರಿಕುಮಾರ್‌ ಮತ್ತು ವೈಸ್‌ ಅಡ್ಮಿರಲ್‌ ಅಜೇಂದ್ರ ಬಹದ್ದೂರ್‌ ಸಿಂಗ್‌, ಕಮಾಂಡಿಂಗ್‌ ಇನ್‌ ಚೀಫ್‌ ಅವರು ಸ್ವಾಗತಿಸಿದರು. ವೆಸ್ಟರ್ನ್ ನೇವಲ್‌ ಕಮಾಂಡ್‌ ಜತೆಗೆ ರಿಯರ್‌ ಅಡ್ಮಿರಲ್‌ ಅತುಲ್‌ ಆನಂದ್‌, ಫ್ಲಾಗ್‌ ಆಫೀಸರ್‌ ಕಮಾಂಡಿಂಗ್‌ ಕರ್ನಾಟಕ ನೇವಲ್‌ ಏರಿಯಾ (ಎಫ್‌ಒಕೆ) ಉಪಸ್ಥಿತರಿದ್ದರು. ಸಿಂಗ್‌ ಅವರು ಶುಕ್ರವಾರ ಭಾರತೀಯ ನೌಕಾ ಜಲಾಂತರ್ಗಾಮಿ ನೌಕೆಯಲ್ಲಿ ಪಯಣಿಸಲಿದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.