ಸರಕಾರದ ಯೋಜನೆ ಜನರಿಗೆ ತಲುಪಿಸಿ
ಜಿಲ್ಲೆಯ ಸಂಪನ್ಮೂಲ ಸದ್ಬಳಕೆಯಾಗಲು ಅಧಿಕಾರಿಗಳು ಗಮನಹರಿಸಿ
Team Udayavani, May 5, 2022, 10:18 AM IST
ಕಾರವಾರ: ಸರಕಾರದ ಯೋಜನೆಗಳು ಸಾಮಾನ್ಯ ಜನರಿಗೆ, ನಿರುದ್ಯೋಗಿ ಯುವಕ ಯುವತಿಯರಿಗೆ, ಬಡವರಿಗೆ, ಅಶಕ್ತರಿಗೆ ತಲುಪಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆ ಹೇರಳ ಜಲಸಂಪನ್ಮೂಲವನ್ನು ಹೊಂದಿದ್ದು ಅದರ ಸದುಪಯೋಗವಾಗಬೇಕು. ಮೀನುಗಾರಿಕೆಗೆ ಪ್ರಾಶಸ್ತ್ಯ ನೀಡಿ ಮೀನು ಉತ್ಪಾದನೆ, ಮಾರಾಟದಲ್ಲಿ ಅಭಿವೃದ್ಧಿ ಸಾಧಿಸಬೇಕು. ಮೀನುಗಾರರಿಗೆ ಸಬ್ಸಿಡಿಯಲ್ಲಿ ಇಂಧನ, ದೋಣಿ ನೀಡುವಂತಹ ಯೋಜನೆ ಹೆಚ್ಚಿನ ಪ್ರಮಾಣದಲ್ಲಿ ಸಾಕಾರವಾಗಬೇಕು. ಮೀನುಗಾರಿಕೆ ಹಿನ್ನೆಲೆ ಹೊಂದಿದ ಕುಟುಂಬದ ಯುವಕರಿಗೆ ತರಬೇತಿ ನೀಡಿ ಸ್ವ ಉದ್ಯೋಗ ಕೈಗೊಳ್ಳಲು ಸಹಾಯ ಮಾಡಬೇಕು. ಮೂಲಭೂತ ಸವಲತ್ತುಗಳಾದ ವಸತಿ, ನೀರು, ಆಹಾರ ಪೂರೈಕೆಯಲ್ಲಿ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯುವಕರಿಗೆ ಕೆರೆ ನಿರ್ವಹಣೆ ಕುರಿತು ತರಬೇತಿ ನೀಡಬೇಕು. ಕೆರೆ ಹೂಳೆತ್ತುವ ಮೂಲಕ ಮೀನುಗಾರರಿಗೆ ಮೀನುಗಾರಿಕೆಯಲ್ಲಿ ಉತ್ಪಾದನೆ ಹೆಚ್ಚುವಂತೆ ಮಾಡಬೇಕು. ಮೀನುಗಾರರಿಗೆ ಕಿಸಾನ್ ಕಾರ್ಡ್ ಮಾಡಿಕೊಡಬೇಕು. ದೋಣಿ ನೀಡುವ ವ್ಯವಸ್ಥೆಯಾಗಬೇಕು. ಕೆರೆ, ಚೆಕ್‌ಡ್ಯಾಮ್, ಜಲಾಶಯಗಳನ್ನು ಬಳಸಿಕೊಂಡು ಮೀನುಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಟೆಂಡರ್ ನೀಡುವ ಮೂಲಕ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಹಾಗೂ ಇದಕ್ಕೆ ಬೇಕಾದ ಸಂಪನ್ಮೂಲಗಳ ಖರ್ಚುವೆಚ್ಚದ ವರದಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗಣಿ ಇಲಾಖೆಗೆ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನೊಳಗೆ ಆಸಕ್ತ ಜನರಿಗೆ ಮರಳು ತೆಗೆಯುವ ಲೈಸೆನ್ಸ್ ನೀಡಬೇಕು ಆ ಮೂಲಕ ಸರಕಾರದ ಯೋಜನೆಗಳು ಹಾಗೂ ಸಾಮಾನ್ಯ ಜನರ ಕಟ್ಟಡ ಸಂಬಂಧಿತ ಕಾರ್ಯಗಳು ಸುಗಮವಾಗಿ ಪೂರ್ಣಗೊಳ್ಳಲು ಶ್ರಮ ವಹಿಸಬೇಕು. ಸ್ಥಳೀಯ ಮಟ್ಟದಲ್ಲಿ ಸಿಗುವಂತಹ ಮರಳನ್ನು ನಿಗದಿತ ಶುಲ್ಕ ವಿಧಿಸಿ ಬಳಸಿಕೊಳ್ಳಲು ಅವಕಾಶ ನೀಡಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಮೇ 11 ರಂದು ಈ ಬಗ್ಗೆ ಸಭೆ ನಡೆಸಿ ವರದಿ ಸಲ್ಲಿಸುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿ ಭೂಮಿ ನೀಡಿದ ಜನರಿಗೆ ಬೇರೆ ಜಾಗದ ಬೇಡಿಕೆ, ನಿವೇಶನ ನೀಡುವಲ್ಲಿ ನಿಯಾಮಾನುಸಾರ ಸರಿಯಾದ ಪರಿಹಾರ ನೀಡಬೇಕು. ರಸ್ತೆ ಸಂಪರ್ಕ ಕಡಿತಗೊಳ್ಳುವ ಪ್ರದೇಶದಲ್ಲಿ ಪಥ ಬದಲಾವಣೆ ಮಾಡಬೇಕು. ಅಂತಹ ರಸ್ತೆಗಳ ವಿವರವಾದ ಮಾಹಿತಿ ಪಡೆದು ಪುನಃ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪುರಾತತ್ವ, ಪ್ರವಾಸೋದ್ಯಮ, ನಗರಸಭೆ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ಕುರಿತು ವರದಿ ಸಲ್ಲಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ| ಸುಮನ್ ಪೆನ್ನೆಕರ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಎಮ್‌ಎಲ್‌ಸಿ ಗಣಪತಿ ಉಳ್ವೆàಕರ್, ನಿತಿನ್ ಪಿಕಳೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.