ಪರಿಹಾರ ಕಾರ್ಯ ಮಹತ್ವದ್ದು
•ಪ್ರವಾಹ ಪೀಡಿತರ ಮುಂದಿನ ಜೀವನಕ್ಕೆ ಆಧಾರವಾಗಿದೆ ಈ ಹಣ: ಮನೀಷ
Team Udayavani, Aug 13, 2019, 1:02 PM IST
ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಯಿತು.
ಕಾರವಾರ: ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನೀರಿನ ಮಟ್ಟ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಂತರ ಪರಿಹಾರ ಕಾರ್ಯಗಳು ಅತೀ ಮಹತ್ವದ್ದಾಗಿದ್ದು, ಅಧಿಕಾರಿಗಳು ಸಮನ್ವಯ, ಸಹಕಾರದಿಂದ ಎಲ್ಲಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ತಿಳಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನೀರಿನ ಮಟ್ಟ ಇಳಿಮುಖವಾಗುತ್ತಿದೆ. ಅಪಾರ ಆಸ್ತಿ-ಪಾಸ್ತಿ ಹಾನಿಗಳಾಗಿರುವುದರಿಂದ ಸಂತ್ರಸ್ತರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಅಧಿಕಾರಿಗಳು ಉದಾರತೆ, ಪ್ರಾಮಾಣಿಕತೆ ಪ್ರದರ್ಶಿಸಿ ಪ್ರವಾಹ ನಂತರದ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.
ಸಂಬಂಧಿಸಿದ ಮೇಲಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಸಹಕಾರದಿಂದ ಸಮನ್ವಯತೆ ಸಾಧಿಸಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಪರಿಹಾರ ಕಾರ್ಯಕ್ಕೆ ಅನುದಾನ ಕೊರತೆಯಿಲ್ಲ. ಸಂತ್ರಸ್ತರಿಗೆ ಹಾಗೂ ಜಾನುವಾರುಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸತಕ್ಕದ್ದು. ಪ್ರತಿಕೇಂದ್ರದಲ್ಲಿ ಅಗತ್ಯ ಆಹಾರಧಾನ್ಯಗಳನ್ನು ಸಂಗ್ರಹಿಸಲಾಗಿದ್ದು, ಅಕ್ಕಿ, ಗೋದಿ, ಎಣ್ಣೆ, ತರಕಾರಿ, ಗ್ಯಾಸ್ ಸಿಲಿಂಡರ್‌ಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸತಕ್ಕದ್ದು ಎಂದರು.
ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಮಾತನಾಡಿ, ಆಹಾರ, ಆರೋಗ್ಯ, ಶೌಚಾಲಯ, ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಿ, ತಿನ್ನುವ ಆಹಾರ ಪ್ಯಾಕೇಟ್‌ಗಳ ಎಕ್ಸ್‌ಪೈರ್ ದಿನಾಂಕ ಚೆಕ್ ಮಾಡಿರಿ. ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಅಧಿಕಾರಿಗಳು ಮುಂಜಾಗ್ರತೆಯಾಗಿ ಕ್ರಮವಹಿಸಿ, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಔಷಧ ದಾಸ್ತಾನು ಇಡುವಂತೆ ಅವರು ಸೂಚಿಸಿದರು.
ಜಾನುವಾರುಗಳಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿ. ಔಷಧ ಹಾಗೂ ಮೇವಿನ ಕೊರತೆ ಯಾಗದಂತೆ ಎಚ್ಚರ ವಹಿಸಿ ಎಂದರು.
ಜಂಟಿ ಕೃಷಿ ನಿರ್ದೇಶಕರು ಮಾತನಾಡಿ ನೆರೆ ಹಾವಳಿಯಿಂದ ಜಿಲ್ಲೆಯ 504 ಗ್ರಾಮಗಳ 9908.20 ಹೆಕ್ಟೇರ್ ಪ್ರದೇಶ ಜಲಾವೃತ್ತವಾಗಿದ್ದು, ಅಂದಾಜು ರೂ. 5599.02500 ಲಕ್ಷ ನಷ್ಟವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಡಿಡಿಪಿಐ ಮಾತನಾಡಿ ಮಳೆಯಿಂದಾಗಿ ಜಿಲ್ಲೆಯಲ್ಲಿ 265 ಶಾಲೆಗಳು ಹಾನಿಗೊಳಗಾಗಿದ್ದು, ರಸ್ತೆ ಸಂಪರ್ಕ ಕಳೆದುಕೊಂಡ ಗ್ರಾಮಗಳ ಶಾಲೆ ಹಾಗೂ ಗಂಜೀ ಕೇಂದ್ರಗಳನ್ನು ತೆರೆಯಲಾಗಿರುವ ಶಾಲೆಗಳಿಗೆ ಮಾತ್ರ ರಜೆ ಮುಂದುವರಿಸುವಂತೆ, ಉಳಿದ ಶಾಲೆಗಳನ್ನು ಮಂಗಳವಾರದಿಂದ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಪರ ಜಿಲ್ಲಾಕಾರಿ ನಾಗರಾಜ ಸಿಂಗ್ರೇರ್ ಸೇರಿದಂತೆ ಎಲ್ಲ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.