ಅರಣ್ಯಭೂಮಿ ಮಂಜೂರಿಗೆ ಆಗ್ರಹ
Team Udayavani, Oct 15, 2019, 2:34 PM IST
ಮುಂಡಗೋಡ: ಬೆಳೆಹಾನಿ ಪರಿಹಾರ, ಬೆಳೆಸಾಲ, ಬೆಳೆವಿಮೆ, ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಅರಣ್ಯ ಭೂಮಿ ಮಂಜೂರಿಗೆ ಆಗ್ರಹಿಸಿ ತಾಲೂಕು ಮಟ್ಟದ ಅರಣ್ಯ ಅತಿಕ್ರಮಣದಾರರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು. ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳ ಮುಖಾಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿತು.
ಎರಡು ಸಾವಿರ ಅತಿಕ್ರಮಣದಾರರು ಭಾಗವಹಿಸಿದ್ದರು. ಅತಿವೃಷ್ಟಿ ಪರಿಹಾರ ಪಡೆದುಕೊಳ್ಳುವ ರೈತರ ಜೊತೆ ಅತಿಕ್ರಮಣ ರೈತರನ್ನು ಸೇರಿಸಿ ಪ್ಯಾಕೇಜ್ ವ್ಯವಸ್ಥೆಯಲ್ಲಿ ಪರಿಹಾರ ಬಿಡುಗಡೆಗೊಳಿಸಬೇಕು, ಜಿಲ್ಲೆಯಲ್ಲಿ 3120ಹೆ. ಭತ್ತ, 735ಹೆ. ಗೋವಿನಜೋಳ, 167ಹೆ. ಕಬ್ಬು ಹಾಗೂ ಹತ್ತಿ 23ಹೆ., ಅಡಕೆ 317ಹೆ, ಬಾಳೆ 29 ಹೆ, ತೆಂಗು 33ಹೆ. ಶುಂಠಿ101 ಹೆ. ಅತಿಕ್ರಮಿತ ಭೂಮಿಯಲ್ಲಿ ಬೆಳೆ ಹಾಳಾಗಿದೆ. ಇದರಿಂದ ಅತಿಕ್ರಮಣ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಕೂಡಲೆ ಅವರಿಗೆ ಪರಿಹಾರ ನೀಡಬೇಕು.
ಅರಣ್ಯ ಪ್ರದೇಶದಲ್ಲಿ ಅನಾದಿಕಾಲದಿಂದಲು ಭೂಮಿ ಸಾಗುವಳಿ ಮಾಡಿಕೊಂಡಿದ್ದು ಅರಣ್ಯ ಹಕ್ಕು ಕಾಯ್ದೆ ಅಡಿ ಜಿಪಿಎಸ್ ಆಗಿ ಮಂಜೂರಿ ವ್ಯಾಪ್ತಿಯಲ್ಲಿ ಇರುವಂತಹ ಸಾಗುವಳಿ ಅತಿಕೃಮಣದಾರರಿಗೆ ಬೆಳೆಹಾನಿ ಪರಿಹಾರ ತಕ್ಷಣ ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅರಣ್ಯಭೂಮಿ ಮಂಜೂರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆರ್ಥಿಕ ವರ್ಷದಲ್ಲಿ ಅರಣ್ಯ ಅತಿಕ್ರಮಣದಾರರು ಬೆಳೆಸಾಲ ಪಡೆದು ವ್ಯವಸಾಯಕ್ಕೆ ಸಂಬಂಧಿಸಿ ಸಹಕಾರಿ ಸಂಘದ ಅವಲಂಬಿಸಿರುವುದರಿಂದ ಪ್ರಸಕ್ತ ವರ್ಷದಿಂದ ಸಹಕಾರಿ ಸಂಘಗಳಲ್ಲಿ ಬೆಳೆಸಾಲ ನಿರ್ಬಂಧಿಸಿರುವುದು ರೈತರಿಗೆ ತೊಂದರೆಯಾಗಿದೆ.
ಈ ವರ್ಷದ ಅತಿವೃಷ್ಟಿಯಿಂದಾಗಿ ಅರಣ್ಯ ಅತಿಕ್ರಮಣದಾರರು ತಮ್ಮ ಮನೆ, ಹೊಲ-ಗದ್ದೆಗಳನ್ನು ಕಳೆದುಕೊಂಡು ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿದ್ದು ಎರಡೂವರೆ ತಿಂಗಳು ಕಳೆದರೂ ಸರ್ಕಾರದಿಂದ ಯಾವುದೇ ಆರ್ಥಿಕ ನೆರವು, ಪರಿಹಾರ ದೊರಕದೆ ಇರುವುದು ಸರ್ಕಾರದ ವೈಫಲ್ಯ ಎದ್ದು ತೋರುತ್ತಿದೆ. ಕೂಡಲೆ ಅತಿಕ್ರಮಣ ರೈತರಿಗೆ ಪರಿಹಾರ ಬಿಡುಗಡೆ ಮಾಡುವಂತೆ ತಾವು ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ನ.10ರೋಳಗೆ ಸಮಸ್ಯೆ ಬಗೆ ಹರಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿಗೆ ಸಂಬಂದಪಟ್ಟಂತೆ ಪುನರ್ ಪರಿಶೀಲನಾ ವಿಧಾನವನ್ನು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಬುಡಕಟ್ಟು ಮಂತ್ರಾಲಯ ಸೂಚಿಸಿದ ಮಾರ್ಗಸೂಚಿಯಂತೆ ನಿರ್ದಿಷ್ಟ ಕಾಲದೊಳಗೆ ಮಂಜೂರಿ ಪ್ರಕ್ರಿಯೆ ಜರುಗಿಸುವಂತೆ ಸರಕಾರಕ್ಕೆ ಸೂಚಿಸಬೇಕು. ಅನಾದಿ ಕಾಲದಿಂದಲೂ ಅರಣ್ಯಭೂಮಿ ಸಾಗುವಳಿ, ವಾಸ್ತವ್ಯಕ್ಕೆ ಅವಲಂಬಿತರಾಗಿರುವ ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಇನ್ನಿತರರಿಗೆ ನೀಡುವ ಪರಿಹಾರದ ಮಾದರಿಯಲ್ಲಿಯೇ ಪ್ಯಾಕೇಜ್ ವ್ಯವಸ್ಥೆಯಲ್ಲಿಯೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಶೇಖಯ್ಯ ಹಿರೇಮಠ, ಸಾಧಿಕ್ ಪಠಾಣ, ರಾಮಣ್ಣ ವಡ್ಡರ, ಸೋಮಣ್ಣ ಉಗ್ನಿಕೇರಿ, ರಾಯಪ್ಪ ಕುಡ್ಡಿಕೇರಿ, ಈರಪ್ಪ ದುರ್ಗಮುರ್ಗಿ, ವೀರಭದ್ರಪ್ಪ ಗಳಗಿ, ಸೋಮಸಿಂಗ್ ಶಿಗ್ಗಟ್ಟಿ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.