ನದಿ ಜೋಡಣೆ ಜೀವವೈವಿಧ್ಯತೆಗೆ ಮಾರಕ
Team Udayavani, Jul 14, 2021, 8:13 PM IST
ಸರಕಾರ ಈ ಯೋಜನೆ ಕೈಬಿಡಲಿ- ಸ್ವರ್ಣವಲ್ಲಿ ಶ್ರೀ! ಜೀವ ವೈವಿಧ್ಯ ಜಾಗೃತಿ ಅಭಿಯಾನ ಉದ್ಘಾಟನೆ
ಸಿದ್ದಾಪುರ: ನದಿ ತಿರುವು ಯೋಜನೆಯನ್ನು ಸರಕಾರ ನದಿ ಜೋಡಣೆ ಯೋಜನೆ ಎಂದು ಹೇಳುತ್ತಿದೆ. ಶಬ್ಧಗಳ ಬದಲಾವಣೆ ಮೂಲಕ ಜನರಲ್ಲಿಯ ಭಾವನೆಯನ್ನು ತಣ್ಣಗಾಗಿಸುವ ಪ್ರಯತ್ನ ಜೀವ ವೈವಿಧ್ಯತೆಗೆ ಮಾರಕವಾಗಿ ಪರಿಣಮಿಸುತ್ತದೆ. ಸರಕಾರ ನದಿ ಜೋಡಣೆ ಯೋಜನೆ ಕೈಬಿಡಬೇಕು ಎಂದು ಸ್ವರ್ಣವಲ್ಲೀ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದರು.
ಅವರು ತಾಲೂಕಿನ ಹೇರೂರಿನಲ್ಲಿ ರಾಜ್ಯ ಜೀವವೈವಿಧ್ಯ ಮಂಡಳಿ, ಶಿರಸಿ ಅರಣ್ಯ ಇಲಾಖೆ ವಿಭಾಗ, ಜಿಪಂ ಹಾಗೂ ತಾಪಂ ಮತ್ತು ಅಣಲೇಬೈಲ್ ಗ್ರಾಪಂ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಜೀವ ವೈವಿಧ್ಯ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ನದಿ ಜೋಡಣೆಯಿಂದ ತೊಂದರೆ ಆಗುತ್ತಿರುವುದು ಎತ್ತಿನಹೊಳೆ ಯೋಜನೆ ಪ್ರತ್ಯಕ್ಷ ನಿದರ್ಶನ. ಮನುಷ್ಯನಿಂದ ಅನೇಕ ಜೀವಿಗಳಿಗೆ ತೊಂದರೆಯಾಗುತ್ತಿದ್ದು, ಅವುಗಳ ವಿನಾಶಕ್ಕೆ ಕಾರಣನಾಗಿದ್ದಾನೆ. ಮನುಷ್ಯನ ಜೀವನ ಕ್ರಮವೇ ಪರಿಸರದ ಅಸಮತೋಲನಕ್ಕೆ ಕಾರಣವಾಗಿದೆ. ಈ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಜೀವ ವೈವಿಧ್ಯತೆಯ ದಾಖಲೆಯನ್ನು ಸರಕಾರಕ್ಕೆ ಸಲ್ಲಿಸಬೇಕು. ಪ್ರತಿಯೊಂದು ಗ್ರಾಪಂಗಳಲ್ಲಿಯೂ ಸಮಿತಿ ಈ ಕುರಿತ ಕಾರ್ಯಕ್ಕೆ ಮುಂದಾಗಬೇಕು. ದೇವರ ಕಾಡುಗಳ ರಕ್ಷಣೆಯಾಗಬೇಕು. ಮನುಷ್ಯ ಎಷ್ಟು ಅಸಹಾಯಕ ಎನ್ನುವುದನ್ನು ಕೊರೊನಾ ತೋರಿಸಿಕೊಟ್ಟಿದೆ. ನಾವು ಪರಿಸರದ ಸಂರಕ್ಷಣೆ ಮಾಡಿ ಸಮತೋಲನ ಕಾಪಾಡಿಕೊಳ್ಳಬೇಕಾಗಿದೆ ಎಂದರು. ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮಾತನಾಡಿ, ಮುಂದಿನ ದಿನಗಳಲ್ಲಿ ಜೀವ ವೈವಿಧ್ಯತೆಯ ದಾಖಲಾತಿ ಕುರಿತಾಗಿ ಮತ್ತು ಸಂರಕ್ಷಣೆಗಾಗಿ ಸಾಕಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಕತ್ತಲೆ ಕಾನು ಮಾನ್ಯತೆ ಕಾಪಾಡಲು ಯೋಜನೆ ರೂಪಿಸಲಾಗಿದೆ ಎಂದರು.
ಪರಿಸರ ತಜ್ಞ ಬಾಲಚಂದ್ರ ಹೆಗಡೆ ಸಾಯಿಮನೆ ಹಾಗೂ ಕೊಳಲು ತಯಾರಕ ಮತ್ತು ಬಿದಿರು ಸಂರಕ್ಷಕ ಮಂಜುನಾಥ ಹೆಗಡೆ ನಟ್ಟಿಗಾರ ಅವರನ್ನು ಸನ್ಮಾನಿಸಲಾಯಿತು. ಡಿಎಫ್‌ಒ ಎಸ್.ಜಿ. ಹೆಗಡೆ, ತಹಶೀಲ್ದಾರ್ ಪ್ರಸಾದ ಎಸ್.ಎ, ತಾಪಂ ಇಒ ಪ್ರಶಾಂತ ರಾವ್, ಗ್ರಾಪಂ ಅಧ್ಯಕ್ಷೆ ಮಂಗಲಾ ಸುಧಾಕರ ಹೆಗಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.