ಜನಪ್ರತಿನಿಧಿಗಳು ಅಭಿವೃದ್ಧಿ ಕೆಲಸ ಮಾಡಲಿ
Team Udayavani, Aug 31, 2020, 5:16 PM IST
ಕಾರವಾರ: ಅಭಿವೃದ್ಧಿ ಕಾರ್ಯ ಮಾಡಲು ಕಾರವಾರ-ಅಂಕೋಲಾ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ. ಜನ ಪ್ರತಿನಿಧಿಯಾದವರು ಕೇವಲ ಚುನಾವಣೆ ಪ್ರಚಾರಕ್ಕೆ ಬರುವುದಷ್ಟೇ ಅಲ್ಲ, ಅವರ ಕಷ್ಟಗಳಿಗೂ ನೆರವಾಗಬೇಕು, ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ತಾಲೂಕಿನ ದೇವಳಮಕ್ಕಿ ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮಗಳಿಗೆ ಶಾಸಕಿ ರೂಪಾಲಿ ನಾಯ್ಕ ಭೇಟಿ ನೀಡಿ, ಜನರಲ್ಲಿ ಭರವಸೆ ಮೂಡಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕಿನ ದೇವಳಮಕ್ಕಿ ಗ್ರಾಪಂ ವ್ಯಾಪ್ತಿಯ ಕುಗ್ರಾಮಗಳಾದ ನಗೆಕೋವೆ, ನಿವಳಿ, ಶಿರ್ವೆ ಗ್ರಾಮಗಳಿಗೆ ರೂಪಾಲಿ ನಾಯ್ಕ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಮತ್ತು ಅಹವಾಲುಗಳನ್ನು ಸ್ವೀಕರಿಸಿದರು.
ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಸಮಸ್ಯೆಗಳನ್ನು ನಿವಾರಿಸುವ ಕೆಲಸ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಈ ಭಾಗದ ಗ್ರಾಮಗಳಿಗೆ ಭೇಟಿ ನೀಡಿದ್ದೆ. ಈಗ ಮತ್ತೆ ಜನರ ಸಮಸ್ಯೆಗಳನ್ನು ಆಲಿಸಲು ಬಂದಿದ್ದೇನೆ. ಹಿಂದೆ ಆಶ್ವಾಸನೆ ನೀಡಿದಂತೆ ಈ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗಳ ಸುಧಾರಣೆಗೆ ಅನುದಾನವನ್ನು ಒದಗಿಸಿದ್ದೇನೆ. ಮುಂದಿನ ದಿನಗಳಲ್ಲಿ ಕಾಮಗಾರಿಗಳ ಭೂಮಿಪೂಜೆಗೆ ಆಗಮಿಸುತ್ತೇನೆ ಎಂದು ಹೇಳಿದರು.
ದೇವಸ್ಥಾನ ಅಭಿವೃದ್ಧಿಗೆ ಅನುದಾನ: ಶಿರ್ವೆ ಗ್ರಾಮದ ನಾರಾಯಣ ಸ್ವಾಮಿ ದೇವಸ್ಥಾನ ಹಾಗೂ ಸಭಾಭವನ ಅಭಿವೃದ್ಧಿಗೆ, ನಗೆಕೋವೆ ಗ್ರಾಮದ ಮಹಾದೇವ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ: ದೇವಳಮಕ್ಕಿ ಗ್ರಾಪಂ ವ್ಯಾಪ್ತಿಯ ಬಣಗೆ ಗ್ರಾಮಕ್ಕೆ 105 ಲಕ್ಷ ರೂ. ಮೊತ್ತದ ರಸ್ತೆ ಸುಧಾರಣೆ ಕಾಮಗಾರಿ, ಧಾಕುಮಳ ರಾಜೇಂದ್ರ ಗಂಗಾಧರ ಹುಲಸ್ವಾರ ಮನೆ ಹತ್ತಿರ 35 ಲಕ್ಷ ರೂ. ಮೊತ್ತದ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿ, ಕೋವೆ ಗ್ರಾಮದ ಕುಷ್ಠ ವಾಗು ಹುಲಸ್ವಾರ ಮನೆ ಹತ್ತಿರ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಖ್ಯ ರಸ್ತೆಯಿಂದ ಗಣೇಶ ಪಾಟೀಲ ಮನೆ ವರೆಗೆ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು. ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಗುನಗಿ, ಉಪಾಧ್ಯಕ್ಷ ದೇವಿದಾಸ ಬೇಳೂರ್ಕರ್, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷ ಪ್ರಣವ್ ರಾಣೆ, ಕಪಿಲ್ ಬಾಂದೇಕರ ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.