Road Mishap: ಬೈಕ್ ಗಳ ಮುಖಾಮುಖಿ… ತಂದೆ, ಮಗಳಿಗೆ ಗಾಯ
Team Udayavani, Sep 5, 2023, 11:47 AM IST
ದಾಂಡೇಲಿ : ನಗರದ ಕನ್ಯಾ ವಿದ್ಯಾಲಯದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ತಂದೆ, ಮಗಳಿಗೆ ಗಾಯವಾದ ಘಟನೆ ನಡೆದಿದೆ.
ರಾಮನಗರದಿಂದ ಜೋಯಿಡಾ ತಾಲ್ಲೂಕಿನ ಮಾನಾಯಿಗೆ ಜನ್ನು ನವಲು ಗಾರೆ ಹಾಗೂ ಅವರ 5 ವರ್ಷದ ಮಗಳು ಮತ್ತು ಕೊಂಡು ವಿಠ್ಠು ಕೊಕರೆಯವರು ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬರ್ಚಿ ಕಡೆಯಿಂದ ಬರುತ್ತಿದ್ದ ಜಗಲ್ಬೇಟ್ ನಿವಾಸಿ ಗಜಾನನ ಅವರ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಜನ್ನು ನವಲು ಗಾರೆ ಯವರ ಕಾಲಿಗೆ ಗಂಭೀರ ಗಾಯವಾಗಿದ್ದು, ಅವರ 5 ವರ್ಷದ ಮಗಳಿಗೂ ಗಾಯವಾಗಿದೆ. ಉಳಿದಂತೆ ಅವರದ್ದೇ ಬೈಕಿನಲ್ಲಿದ್ದ ವಿಠ್ಠು ಕೊಕರೆಯವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇನ್ನೊಂದು ಬೈಕಿನ ಸವಾರ ಗಜಾನನ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಗಾಯಗೊಂಡ ಈ ಮೂವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಜನ್ನು ನವಲು ಗಾರೆ ಮತ್ತು ಅವರ ಮಗಳನ್ನು ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: Asia Cup 2023; ಮಳೆಯ ಕಾರಣದಿಂದ ಸೂಪರ್ 4, ಫೈನಲ್ ಪಂದ್ಯಗಳು ಸ್ಥಳಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.